ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 30 ಮಾರ್ಚ್ 2022 (08:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷಗಳು ಬೇಡ. ವಿಶೇಷವಾದ ವ್ಯಕ್ತಿಗಳನ್ನು ಭೇಟಿ ಮಾಡಲಿದ್ದೀರಿ. ನಿಮ್ಮ ಪ್ರೀತಿ ಪಾತ್ರರು ನಿಮ್ಮನ್ನು ಅವಗಣಿಸುತ್ತಾರೆಂಬ ಕೀಳರಿಮೆ ಕಾಡೀತು. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚಿನ ಸಾಧನೆಗಾಗಿ ನೀವು ಪಡುತ್ತಿದ್ದ ಪ್ರಯತ್ನಕ್ಕೆ ಫಲ ಸಿಗಲಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಉನ್ನತ ಅವಕಾಶಗಳು ದೊರೆಯಲಿವೆ. ಅನ್ಯರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ.

ಮಿಥುನ: ಸಾಂಸಾರಿಕವಾಗಿ ಅನಗತ್ಯ ಚರ್ಚೆಗೆ ಆಸ್ಪದ ಕೊಡಬೇಡಿ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ಹಣಕಾಸಿನ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ನಿಮ್ಮ ವ್ಯವಹಾರ ಚತರುತೆಯಿಂದ ಯಶಸ್ಸು ನಿಮ್ಮದಾಗಲಿದೆ. ದೇಹಾರೋಗ್ಯದ ವಿಚಾರದಲ್ಲಿ ಕಾಳಜಿಯಿರಲಿ. ಮನಸ್ಸಿಗೆ ಹತ್ತಿರವಾದವರ ಬಳಿ ಮನಸ್ಸು ಬಿಚ್ಚಿ ಮಾತನಾಡಲಿದ್ದೀರಿ. ಮಹಿಳೆಯರಿಗೆ ಉನ್ನತಿಯ ಯೋಗ.

ಸಿಂಹ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲ ಪ್ರಯತ್ನಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಹಳೆಯ ಸ್ನೇಹಿತರ ಪುನರ್ಮಿಲನ ಸಾಧ್ಯತೆ. ಕಳೆದು ಹೋದ ವಸ್ತುವಿಗಾಗಿ ಹುಡುಕಾಟ ನಡೆಸಲಿದ್ದೀರಿ. ತಾಳ್ಮೆಯಿರಲಿ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಪರಸ್ಪರ ಸಹಕಾರ ಕಂಡುಬರಲಿದೆ. ಮನೆಗೆ ನೆಂಟರಿಷ್ಟರ ಭೇಟಿ ಸಾಧ್ಯತೆ. ಅಧಿಕ ಧನಾರ್ಜನೆಗಾಗಿ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

ತುಲಾ: ನಿಮ್ಮ ಸಾಂಸಾರಿಕ ಗುಟ್ಟುಗಳು ನಿಮ್ಮಲ್ಲಿಯೇ ಇರಲಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸು ಹಾತೊರೆಯಲಿದೆ. ಮಕ್ಕಳಿಂದ ಸಂತೋಷ ಪ್ರಾಪ್ತಿಯಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ದೇವತಾ ಕಾರ್ಯಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಮಕ್ಕಳ ಮೇಲೆ ನೀವು ಇಟ್ಟಿರುವ ಭರವಸೆ ಹುಸಿಯಾಗದು. ಆದಾಯಕ್ಕೆ ತಕ್ಕಂತೆ ಖರ್ಚೂ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ ಕಂಡುಬರುವುದು.

ಧನು: ಯಾವುದೇ ವಿಚಾರವನ್ನು ಅತಿಯಾಗಿ ಮನಸ್ಸಿಗೆ ಹಚ್ಚಿಕೊಂಡು ಕೊರಗುತ್ತಾ ಕೂರಬೇಡಿ. ಆತ್ಮೀಯರು ನೀಡುವ ಸಲಹೆಗಳನ್ನು ಪಾಲಿಸುವುದು ಉತ್ತಮ. ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಮಕರ: ಉದ್ಯೋಗ ನಿಮಿತ್ತ ಪರವೂರಿಗೆ ಸಂಚರಿಸುವ ಅವಕಾಶಗಳು ಒದಗಿಬರಲಿದೆ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗೆ ಸಿದ್ಧತೆ ನಡೆಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಪಾಲುದಾರಿಕಾ ವ್ಯವಹಾರದಲ್ಲಿ ಹೆಚ್ಚಿನ ಪ್ರಗತಿ ಕಂಡುಬರಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ಬಂಧು ಬಳಗದವರಿಂದ ಉತ್ತಮ ಸಹಕಾರ ಕಂಡುಬರಲಿದೆ. ಅನಗತ್ಯ ಚಿಂತೆ ಬೇಡ.

ಮೀನ: ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು. ವ್ಯಾಪಾರಸ್ಥರಿಗೆ ಆರ್ಥಿಕವಾಗಿ ಲಾಭವಾಗಲಿದೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ