ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 5 ಏಪ್ರಿಲ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೇಹಾರೋಗ್ಯ ವಿಚಾರದಲ್ಲಿ ಉಪೇಕ್ಷೆ ಬೇಡ. ಸಂಗಾತಿಯ ಕೆಲವೊಂದು ಮಾತುಗಳನ್ನು ಅಲ್ಲಗಳೆಯಲಾಗದು. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಮಕ್ಕಳಿಗೆ ಅನಿರಿಕ್ಷಿತ ಉಡುಗೊರೆ ನೀಡಲಿದ್ದೀರಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಮುನ್ನಡೆ ಕಾಣಲಿದ್ದೀರಿ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಅನಗತ್ಯ ಚಿಂತೆ ಬೇಡ.

ಮಿಥುನ: ವೃತ್ತಿರಂಗದಲ್ಲಿ ನಿಮ್ಮ ಕಾರ್ಯವೈಖರಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ಸಿಗಲಿದೆ. ಕ್ರಿಯಾತ್ಮಕ ಯೋಚನೆಗಳಿಂದ ಸಮಸ್ಯೆ ಬಗೆಹರಿಸಲಿದ್ದೀರಿ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ತಾಳ್ಮೆಯಿಂದ ನಡೆದುಕೊಳ್ಳುವುದು ಮುಖ್ಯ.

ಕರ್ಕಟಕ: ಹಿರಿಯರಿಗೆ ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಬಂಧು ಮಿತ್ರರ ಸಹಕಾರದಿಂದ ಕೆಲಸ ಕಾರ್ಯಗಳು ಸುಗಮವಾಗಿ ನಡೆಯಲಿದೆ.

ಸಿಂಹ: ಭೂಮಿ, ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿ ವಹಿಸಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಸಾಂಸಾರಿಕವಾಗಿ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳುವ ಸಂದರ್ಭಗಳು ಎದುರಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಸಾಹಸಕ್ಕೆ ಕೈ ಹಾಕಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ತುಲಾ: ಸ್ವಯಂ ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬಂದೀತು. ಆದರೆ ಹಿತಶತ್ರುಗಳ ಕಾಟ ಕಿರಿ ಕಿರಿ ತಂದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ದಿನದಂತ್ಯಕ್ಕೆ ಸಂತೋಷದ ವಾರ್ತೆ ಸಿಗಲಿದೆ.

ವೃಶ್ಚಿಕ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗುವುದರಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಕೈಗೆ ಸಿಗದ ವಸ್ತುವಿನ ಬಗ್ಗೆ ನಿರಾಸೆ ಬೇಡ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಧನು: ನಿಮ್ಮ ಸಾಹಸ ಮನೋಭಾವದಿಂದಾಗಿ ಕಾರ್ಯಕ್ಷೇತ್ರದಲ್ಲಿ ಸಫಲತೆ ಕಂಡುಬರಲಿದೆ. ಉದ್ಯೋಗ ಬದಲಾವಣೆಗೆ ಪ್ರಯತ್ನ ನಡೆಸುತ್ತಿದ್ದರೆ ಮುನ್ನಡೆ ಸಿಗಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಮಕರ: ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಆಸ್ತಿ, ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಅಗತ್ಯ. ಹಣಕಾಸಿನ ವಿಚಾರದಲ್ಲಿ ಭವಿಷ್ಯಕ್ಕೆ ಹೊಸ ಯೋಜನೆ ರೂಪಿಸಲಿದ್ದೀರಿ.

ಕುಂಭ: ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಹಣಕಾಸಿನ ಯೋಜನೆಗಳಲ್ಲಿ ಮಂದಗತಿಯ ಪ್ರಗತಿ ಕಂಡುಬಂದೀತು. ಆದರೆ ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ. ಆರೋಗ್ಯದ ವಿಚಾರದಲ್ಲಿ ಎಚ್ಚರಿಕೆ ಅಗತ್ಯ.

ಮೀನ: ನಿಮ್ಮ ಭವಿಷ್ಯಕ್ಕಾಗಿ ಕೆಲವೊಂದು ಮಹತ್ವದ ನಿರ್ಧಾರ ತೆಗೆದುಕೊಳ‍್ಳಲಿದ್ದೀರಿ. ಸಕಾಲದಲ್ಲಿ ಹಣಕಾಸಿನ ಸಹಾಯ ಸಿಗುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ