ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 12 ಏಪ್ರಿಲ್ 2022 (08:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಆಹಾರ ಬದಲಾವಣೆಯಿಂದಾಗಿ ಆರೋಗ್ಯದಲ್ಲಿ ಏರುಪೇರಾದೀತು. ಕಾಳಜಿಯಿರಲಿ. ಹಿರಿಯರಿಗೆ ನೀವು ಮಾಡುವ ಕೆಲಸಗಳು ಸಂತೋಷ ಕೊಡಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿಂದಿರಿ.

ವೃಷಭ: ಅತಿಯಾಗಿ ಇನ್ನೊಬ್ಬರ ಮೇಲೆ ಅವಲಂಬನೆ ಬೇಡ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಹೊಸ ಕೆಲಸಗಳಿಗೆ ಕೈ ಹಾಕಲಿದ್ದೀರಿ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರುವುದು. ದಿನದಂತ್ಯಕ್ಕೆ ನೆಮ್ಮದಿ ಕಂಡುಬರಲಿದೆ.

ಮಿಥುನ: ಇನ್ನೊಬ್ಬರು ಮಾಡುವ ತಪ್ಪುಗಳಿಗೆ ನೀವು ಹೊಣೆ ಹೊರಬೇಕಾದ ಪರಿಸ್ಥಿತಿ ಬರಬಹುದು. ಮಾತಿನ ಮೇಲೆ ತಾಳ್ಮೆಯಿರಲಿ. ಹೊಸದಾಗಿ ಉದ್ಯೋಗ ಸೇರಿಕೊಂಡವರಿಗೆ ಸವಾಲುಗಳು ಎದುರಾದೀತು. ಎಚ್ಚರಿಕೆಯಿರಲಿ.

ಕರ್ಕಟಕ: ಕುಲದೇವರ ಪ್ರಾರ್ಥನೆಯೊಂದಿಗೆ ಇಂದಿನ ದಿನದಾರಂಭ ಮಾಡುವುದರಿಂದ ಕೈ ಹಿಡಿದ ಕೆಲಸಗಳು ಯಶಸ್ವಿಯಾಗಲಿದೆ. ಹೊಸ ಜನರ ಭೇಟಿಯಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಅನುಕೂಲವಾಗಲಿದೆ.

ಸಿಂಹ: ಅಂದುಕೊಂಡ ರೀತಿಯಲ್ಲಿ ಕೆಲಸಗಳು ಸಾಗುತ್ತಿಲ್ಲ ಎಂಬ ನಿರಾಸೆ ಕಾಡೀತು. ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಮಕ್ಕಳ ದೇಹಾರೋಗ್ಯದ ವಿಚಾರದಲ್ಲಿ ಅಸಡ್ಡೆ ಬೇಡ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ದೂರ ಪ್ರಯಾಣದಿಂದ ದೇಹಾಯಾಸವಾದೀತು, ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಮಕ್ಕಳಿಗೆ ಉಡುಗೊರೆ ನೀಡಿ ಸಂತೋಷ ನೀಡಲಿದ್ದೀರಿ. ಅನಗತ್ಯ  ಚಿಂತೆ ಬೇಡ.

ತುಲಾ: ನಿಮ್ಮಿಂದ ಹಿಂದೆ ಉಪಕಾರ ಪಡೆದವರಿಂದ ನಿಮಗೆ ಇಂದು ಪ್ರತ್ಯುಪಕಾರ ಸಿಗಲಿದೆ. ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ ಕೂಡಿಬರಲಿದೆ.

ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಸ್ಥಾನ ಮಾನ ಸುಧಾರಣೆಗೆ ಕೆಲವು ಹೆಜ್ಜೆಗಳನ್ನಿಡಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಅನ್ಯರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಧನು: ನಿಮ್ಮ ಕ್ರಿಯಾತ್ಮಕ ಯೋಚನೆಗಳಿಂದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ವಿದೇಶದಲ್ಲಿ ಉದ್ಯೋಗಾವಕಾಶಗಳು ದೊರೆಯಲಿವೆ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೂ ಮೀರಿದ ಫಲಿತಾಂಶ ಬರಲಿದೆ.

ಮಕರ: ಬಂಧು ವರ್ಗದವರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ಕಂಡುಬರಲಿದೆ. ಅನವಶ್ಯಕ ಮಾತುಗಳಿಂದ ಸಂಬಂಧ ಹಾಳುಮಾಡಿಕೊಳ್ಳಬೇಡಿ. ಕ್ರಯ-ವಿಕ್ರಯ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ. ಚಿಂತೆ ಬೇಡ.

ಕುಂಭ: ನೆರೆಹೊರೆಯವರೊಂದಿಗೆ ನೀರಿಗಾಗಿ ಭಿನ್ನಾಬಿಪ್ರಾಯಗಳಾದೀತು. ವ್ಯಾಪಾರ, ವ್ಯವಹರಾದಲ್ಲಿ ತೊಡಗಿಸಿಕೊಂಡವರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರುವುದು. ಆರೋಗ್ಯದಲ್ಲಿ ಸುಧಾರಣೆಯಿರಲಿದೆ.

ಮೀನ: ಬದುಕಿನಲ್ಲಿ ಕೆಲವೊಂದು ಘಟನೆಗಳು ನಿಮ್ಮ ಮುಂದಿನ ಜೀವನಕ್ಕೆ ಪೂರಕವಾಗಿರಲಿದೆ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ ಕಂಡುಬರುವುದು. ವ್ಯವಹಾರದಲ್ಲಿ ಪ್ರಾಮಾಣಿಕತೆಗೆ ಒತ್ತು ನೀಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ