ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 14 ಏಪ್ರಿಲ್ 2022 (08:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದೇಹಾರೋಗ್ಯದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾಗಲಿದೆ. ನಿಮ್ಮ ನಡೆನುಡಿಗಳಲ್ಲಿ ಸ್ಪಷ್ಟತೆಯಿರಲಿ. ಧನಸಂಪತ್ತು ವೃದ್ಧಿಗೆ ಯೋಜನೆ ರೂಪಿಸಲಿದ್ದೀರಿ. ಸಹೋದ್ಯೋಗಿಗಳ ಸಹಕಾರದಿಂದ ಮುನ್ನಡೆ ಕಂಡುಬರುವುದು.

ಮಿಥುನ: ವೃತ್ತಿರಂಗದಲ್ಲಿ ಕ್ರಿಯಾತ್ಮಕ ಚಟುವಟಿಕೆಗಳಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಲಿದ್ದೀರಿ.

ಕರ್ಕಟಕ: ನಿಮ್ಮ ಬಹುದಿನಗಳ ಕನಸು ನನಸು ಮಾಡಲು ಪ್ರಯತ್ನ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯಲ್ಲಿ ಮುನ್ನಡೆ ಕಂಡುಬರುವುದು. ಸರಕಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತೋಷವಾಗಲಿದೆ. ಇಷ್ಟಭೋಜನ ಮಾಡುವ ಯೋಗ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ನಿಮ್ಮ ಕೆಲಸ ಕಾರ್ಯಗಳಿಗೆ ಕುಟುಂಬ ಸದಸ್ಯರ ಸಹಕಾರ ಕಂಡುಬರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಹಣಕಾಸಿನ ವಿಚಾರದಲ್ಲಿ ಜಾಗರೂಕತೆ ಅಗತ್ಯ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ತುಲಾ: ಸರಕಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಸಾಮರ್ಥ್ಯಕ್ಕೆ ಮೀರಿದ ಕೆಲಸ ಮಾಡಲು ಹೋಗಿ ದೇಹಾಯಾಸವಾದೀತು. ಸಂಗಾತಿಯ ಬೇಡಿಕೆ ಪೂರೈಸಲು ಮುಂದಾಗಲಿದ್ದೀರಿ. ತಾಳ್ಮೆಯಿರಲಿ.

ವೃಶ್ಚಿಕ: ಏನೋ ಮಾಡಲು ಹೋಗಿ ಇನ್ನೇನೋ ಆಗುವ ಸಂದರ್ಭ ಎದುರಾದೀತು. ಮಾತಿನ ಮೇಲೆ ನಿಗಾ ಇರಲಿ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಗೆ ಪ್ರಯತ್ನಿಸುವಿರಿ. ಇಷ್ಟದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ಧನು: ಸರಕಾರಿ ಉದ್ಯೋಗಿಗಳಿಗೆ ಬಿಡುವಿನ ದಿನದ ಖುಷಿ ಸಿಗಲಿದೆ. ಗುರುಹಿರಿಯರ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರಲಿದೆ. ವ್ಯಾಪಾರೀ ವರ್ಗದವರಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ತಾಳ್ಮೆಯಿರಲಿ.

ಮಕರ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸವಾಲುಗಳು ಎದುರಾದೀತು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳುವುದು ಮುಖ್ಯ. ನಿಮ್ಮ ವಾಕ್ಚತುರತೆಯಿಂದ ಇತರರ ಗಮನ ಸೆಳೆಯಲಿದ್ದೀರಿ.

ಕುಂಭ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ನಿಮ್ಮ ಬಗ್ಗೆ ಇತರರಲ್ಲಿ  ಸದಭಿಪ್ರಾಯ ಮೂಡಲಿದೆ. ಬಂಧು ಮಿತ್ರರ ಪ್ರೀತಿಗೆ ಭಾಜನರಾಗಲಿದ್ದೀರಿ. ಮನೆಯಲ್ಲಿ ಶಾಂತಿ ಸಮಾಧಾನವಿರಲಿದೆ. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಅನಗತ್ಯ ಚಿಂತೆ ಬೇಡ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ