ಮೇಷ: ಬಯಸಿದ ರೀತಿಯಲ್ಲಿ ಕಾರ್ಯಗಳು ಸಾಗದೇ ಅಸಮಾಧಾನವಾದೀತು. ಕೌಟುಂಬಿಕವಾಗಿ ತಾಳ್ಮೆ, ಸಂಯಮ ಅಗತ್ಯ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.
ವೃಷಭ: ವಿದ್ಯಾರ್ಥಿಗಳು ಜ್ಞಾನಾರ್ಜನೆಗಾಗಿ ಪರವೂರಿಗೆ ಸಂಚರಿಸುವ ಸಂದರ್ಭ ಎದುರಾದೀತು. ಗೃಹಿಣಿಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಮಿಥುನ: ವೈಯಕ್ತಿಕ ಕಷ್ಟಗಳ ಪರಿಹಾರಕ್ಕಾಗಿ ಆಪ್ತರ ಮೊರೆ ಹೋಗಲಿದ್ದೀರಿ. ಕೌಟುಂಬಿಕವಾಗಿ ಪರಸ್ಪರ ಸಹಕಾರ ನೆಮ್ಮದಿ ಕಂಡುಬರಲಿದೆ. ಆರ್ಥಿಕವಾಗಿ ಹೊಸ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಕರ್ಕಟಕ: ವೃತ್ತಿರಂಗದಲ್ಲಿ ನಿಮ್ಮ ಸ್ಥಾನ ಸುಧಾರಣೆಗೆ ಅಗತ್ಯ ಕ್ರಮ ಕೈಗೊಳ್ಳಲಿದ್ದೀರಿ. ಕ್ರಿಯಾತ್ಮಕ ಕೆಲಸಗಳಿಂದ ಎಲ್ಲರ ಗಮನ ಸೆಳೆಯಲಿದ್ದೀರಿ. ವ್ಯಾಪಾರಿಗಳು, ಸ್ವಯಂ ವೃತ್ತಿಯವರಿಗೆ ಲಾಭವಾಗಲಿದೆ. ಅನಗತ್ಯ ಚಿಂತೆ ಬೇಡ.
ಸಿಂಹ: ರಾಜಕೀಯ ರಂಗದಲ್ಲಿರುವರಿಗೆ ಅಪವಾದದ ಭೀತಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಭೋಜನ ಮಾಡಲಿದ್ದೀರಿ. ನೆರೆಹೊರೆಯವರೊಂದಿಗೆ ತಾಳ್ಮೆ, ಸಂಯಮದಿಂದ ವರ್ತಿಸಿದರೆ ಉತ್ತಮ.
ಕನ್ಯಾ: ಕೌಟುಂಬಿಕವಾಗಿ ಸಂಬಂಧ ವೃದ್ಧಿಗೆ ಹೆಚ್ಚು ಒತ್ತು ನೀಡಲಿದ್ದೀರಿ. ವಿಶೇಷ ವ್ಯಕ್ತಿಗಳ ಭೇಟಿಯಾಗಲಿದ್ದೀರಿ. ಹೊಸದಾಗಿ ವೃತ್ತಿ ಜೀವನ ಆರಂಭಿಸಿದವರಿಗೆ ಉನ್ನತಿಯ ಯೋಗವಿದೆ. ಹಳೆಯ ಮಿತ್ರರನ್ನು ಭೇಟಿಯಾಗಲಿದ್ದೀರಿ.
ತುಲಾ: ಕೈ ಹಿಡಿದ ಕೆಲಸಗಳಲ್ಲಿ ಯಶಸ್ವಿಯಾಗಬೇಕಾದರೆ ಕುಲದೇವರ ಪ್ರಾರ್ಥನೆ ನಡೆಸಿ ಮುನ್ನಡೆಯಬೇಕು. ಅತಿಯಾದ ವಿಶ್ವಾಸವೂ ಕೆಲವೊಮ್ಮೆ ಮುಳುವಾಗುವ ಸಾಧ‍್ಯತೆಯಿದೆ. ಪ್ರೀತಿ ಪಾತ್ರರ ಭೇಟಿಯಾಗಲಿದ್ದು, ಸಂತೋಷವಾಗಲಿದೆ.
ವೃಶ್ಚಿಕ: ಬಹಳ ದಿನಗಳ ನಂತರ ಇಷ್ಟವ್ಯಕ್ತಿಗಳ ಭೇಟಿಯಾಗಲಿದ್ದು, ಮನಸ್ಸಿಗೆ ಸಂತೋಷವಾಗುವುದು. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ದಾಂಪತ್ಯದಲ್ಲಿ ಹೊಂದಾಣಿಕೆಯಿರಲಿ.
ಧನು: ಮಾತಿನ ಮೇಲೆ ಹಿಡಿತವಿಲ್ಲದೇ ಹೋದರೆ ಸಂಬಂಧ ಹಾಳಾದೀತು. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಯೋಗವಿದೆ. ಆದರೆ ಹಿತಶತ್ರುಗಳ ಬಗ್ಗೆ ಎಚ್ಚರಿಕೆಯಿಂದಿರಿ. ವ್ಯಾಪಾರಿಗಳಿಗೆ ನಷ್ಟದ ಭೀತಿ ಎದುರಾದೀತು.
ಮಕರ: ಉದ್ಯೋಗ, ವ್ಯವಾಹರದಲ್ಲಿ ಪ್ರಗತಿ ಕಂಡುಬರಲಿದೆ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಮಹಿಳೆಯರಿಗೆ ಚಿನ್ನಾಭರಣ ಖರೀದಿ ಯೋಗ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.
ಕುಂಭ: ನಿಮ್ಮ ಸಂದರ್ಭೋಚಿತ ನಡೆಯಿಂದ ಅಪಮಾನ ತಪ್ಪಲಿದೆ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.
ಮೀನ: ಭೂಮಿ, ಕಟ್ಟಡ ಇತ್ಯಾದಿ ಸಂಬಂಧಪಟ್ಟ ವ್ಯವಹಾರಗಳಲ್ಲಿ ಅಡೆತಡೆಗಳು ಕಂಡುಬಂದೀತು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಪಾಲುದಾರಿಕೆ ವ್ಯವಹಾರದಲ್ಲಿ ಎಚ್ಚರಿಕೆಯಿರಲಿ.