ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 18 ಏಪ್ರಿಲ್ 2022 (06:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವ್ಯಾವಹಾರಿಕವಾಗಿ ನಿಮ್ಮ ಚಿಂತನೆಗಳು ಇತರರಿಗೆ ಇಷ್ಟವಾಗದೇ ಹೋಗಬಹುದು. ಆದರೆ ಭವಿಷ್ಯದ ದೃಷ್ಟಿಯಿಂದ ಲಾಭದಾಯಕವೆನಿಸಲದೆ. ಮಕ್ಕಳ ಮನಸ್ಸಿಗೆ ಇಷ್ಟವಾಗುವ ರೀತಿಯಲ್ಲಿ ನಡೆದುಕೊಳ್ಳಲಿದ್ದೀರಿ. ತಾಳ್ಮೆಯಿರಲಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಉತ್ತಮ ಬೆಳವಣಿಗೆ ನಿರೀಕ್ಷಿಸಬಹುದು. ವ್ಯಾವಹಾರಿಕವಾಗಿ ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಆರ್ಥಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಧಾರ್ಮಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ಸಿಗುವುದು.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶಗಳು ಒದಗಿಬರಲಿವೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು.

ಕರ್ಕಟಕ: ಅಧ್ಯಯನ ಶೀಲರಿಗೆ ಉತ್ತಮ ಗೌರವ, ಸ್ಥಾನ ಮಾನ ಪ್ರಾಪ್ತಿಯಾಗಲಿದೆ. ಕಾರ್ಯನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಶುಭಮಂಗಲ ಕಾರ್ಯದಲ್ಲಿ ಪಾಲ್ಗಳ‍್ಳುವಿರಿ.

ಸಿಂಹ: ನೀವು ಹಿಂದೆ ಮಾಡಿದ ತಪ್ಪುಗಳು ಪುನರಾವರ್ತನೆಯಾಗದಂತೆ ಎಚ್ಚರಿಕೆ ವಹಿಸಬೇಕು. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಹೊಸ ಕೆಲಸಕ್ಕೆ ಕೈ ಹಾಕುವ ಮೊದಲು ಸಂಗಾತಿಯೊಂದಿಗೆ ಪರಾಮರ್ಶಿಸುವುದು ಉತ್ತಮ.

ಕನ್ಯಾ: ಉದ್ಯೋಗ ವ್ಯವಹಾರದಲ್ಲಿ ಮಹತ್ವದ ಬದಲಾವಣೆಗಳು ಕಂಡುಬರಲಿದೆ. ಹಣಕಾಸಿನ ತೊಂದರೆಯಾದರೂ ಸಕಾಲದಲ್ಲಿ ಮಿತ್ರರ ನೆರವು ಸಿಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ತುಲಾ: ನಿರೀಕ್ಷಿತ ಸ್ಥಾನ ಮಾನಕ್ಕಾಗಿ ಕಠಿಣ ಪ್ರಯತ್ನ ನಡೆಸಬೇಕಾಗುತ್ತದೆ. ಪಾಲುದಾರಿಕೆ ವ್ಯವಹಾರದಲ್ಲಿ ಸ್ಪಷ್ಟತೆಯಿರಲಿ. ಕ್ರಯ-ವಿಕ್ರಯ ವ್ಯವಹಾರಗಳಿಂದ ಲಾಭ ಕಂಡುಬರುವುದು. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ.

ವೃಶ್ಚಿಕ: ಅನಗತ್ಯವಾಗಿ ಬೇರೆಯವರ ವಿಚಾರದಲ್ಲಿ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಅಂದುಕೊಂಡಂತೇ ಕೆಲಸ ನಡೆದರೆ ತೃಪ್ತಿ ನಿಮ್ಮದಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ದೇಹಾರೋಗ್ಯದ ವಿಚಾರದಲ್ಲಿ ಉದಾಸೀನ ಪ್ರವೃತ್ತಿ ಬೇಡ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಗೆ ಪ್ರಯತ್ನಿಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ.

ಮಕರ: ಸಾಂಸಾರಿಕವಾಗಿ ಉತ್ತಮ ಫಲ ಕಂಡುಬಂದೀತು. ದೈವಾನುಗ್ರಹದಿಂದ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಕ್ರಿಯಾತ್ಮಕತೆಯಿಂದ ಯೋಚಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.

ಕುಂಭ: ಸಹೋದರರೊಂದಿಗಿನ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳಲಿದ್ದೀರಿ. ವೈಯಕ್ತಿಕ ಆರೋಗ್ಯ ಸುಧಾರಣೆಗೆ ಕ್ರಮ ಕೈಗೊಳ್ಳಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಒತ್ತಡವಿದ್ದರೂ ಧನಾಗಮನವಾಗಲಿದ್ದು, ಅನಗತ್ಯ ಆತಂಕ ಬೇಡ.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನಕ್ಕೇರುವ ಅವಕಾಶಗಳು ದೊರೆಯಲಿವೆ. ಸಣ್ಣ ಪುಟ್ಟ ರಿಪೇರಿ ಕೆಲಸಗಳಿಗಾಗಿ ಖರ್ಚು ವೆಚ್ಚಗಳಾದೀತು. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ