ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 21 ಏಪ್ರಿಲ್ 2022 (06:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಯ ಯೋಗ ನಿಮ್ಮದಾದೀತು. ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸಗಳು ಪೂರ್ತಿಯಾಗಲಿವೆ. ಹಿರಿಯರಿಗೆ ದೇವತಾ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಅನಗತ್ಯ ಚಿಂತೆ ಬೇಡ.

ವೃಷಭ: ವೃತ್ತಿರಂಗದಲ್ಲಿ ಪ್ರಗತಿ ಕಂಡುಬರಲಿದ್ದು, ಹಿತಶತ್ರುಗಳ ಕಾಟದಿಂದ ಮುಕ್ತಿ ಸಿಗಲಿದೆ. ಅಧ್ಯಯನಶೀಲರಿಗೆ ಅನುಕೂಲರಕ ವಾತಾವರಣವಿರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ದೇಹಕ್ಕೆ ತ್ರಾಸದಾಯಕ ಕೆಲಸಗಳಿಂದ ಆರೋಗ್ಯದಲ್ಲಿ ಏರುಪೇರಾದೀತು. ಉಪೇಕ್ಷೆ ಮಾಡಬೇಡಿ. ಮಾತು, ವರ್ತನೆಯಲ್ಲಿ ಸಂಯಮಿರಲಿ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಕಿರು ಓಡಾಟ ನಡೆಸಬೇಕಾಗುತ್ತದೆ.

ಕರ್ಕಟಕ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗ ಸಿಗಬೇಕಾದರೆ ದೇವರ ಅನುಗ್ರಹವೂ ಬೇಕು. ಕುಲದೇವರ ಪ್ರಾರ್ಥನೆ ನಡೆಸಿ. ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರುವುದು. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಗ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಅಪವಾದದ ಭೀತಿಯಿದೆ. ವ್ಯವಹಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ಸ್ವಯಂ ಉದ್ಯೋಗಿಗಳಿಗೆ ಹೆಚ್ಚಿನ ಅವಕಾಶ ಕಂಡುಬರಲಿದೆ. ಹಿತಶತ್ರುಗಳ ಕಾಟದಿಂದ ಮುಕ್ತಿ ಪಡೆಯಲಿದ್ದೀರಿ.

ಕನ್ಯಾ: ವ್ಯಾಪಾರ, ವ್ಯವಹಾರದಲ್ಲಿ ಏಳಿಗೆಯಿದ್ದರೂ ವಂಚನೆಗೊಳಗಾಗುವ ಭೀತಿಯಿದೆ. ಹಣಕಾಸಿನ ಯೋಜನೆಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವಿವಾಹಕ್ಕೆ ಪ್ರಯತ್ನಿಸುತ್ತಿದ್ದರೆ ಮುನ್ನಡೆ ಕಂಡುಬರುವುದು. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಪರರ ನಿಮಿತ್ತ ಹೆಚ್ಚುವರಿ ಹೊಣೆಗಾರಿಕೆ ಹೆಗಲಿಗೇರಿಸಿಕೊಳ್ಳಲಿದ್ದೀರಿ. ಮಹಿಳೆಯರಿಗೆ ಚಿನ್ನಾಭರಣಗಳನ್ನು ಸಂರಕ್ಷಿಸುವ ಜವಾಬ್ಧಾರಿಯಿರಲಿದೆ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ.

ವೃಶ್ಚಿಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಸಹಮತಿ ಸಿಗಲಿದೆ.

ಧನು: ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಯಿರಲಿ. ಪಾಲುದಾರಿಕೆ ವ್ಯವಹಾರದಲ್ಲಿ ಉನ್ನತಿ ಕಂಡುಬರಲಿದೆ. ಸಾಂಸಾರಿಕವಾಗಿ ಸಂತೋಷದಾಯಕ ವಾತಾವರಣವಿರಲಿದೆ. ಸಹಾಯ ಪಡೆಯುವ ವಿಚಾರದಲ್ಲಿ ದಾಕ್ಷಿಣ್ಯ ಬೇಡ.

ಮಕರ: ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ವಹಿಸಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಾಗಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಮುಂಬಡ್ತಿಗೆ ಅವಕಾಶಗಳು ದೊರೆಯಲಿವೆ. ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.

ಮೀನ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ವಾಕ್ಚತುರತೆಯಿಂದ ಇತರರ ಗಮನ ಸೆಳೆಯಲಿದ್ದೀರಿ. ಕೆಲಸ ಕಾರ್ಯಗಳಿಗೆ ಗುರುಹಿರಿಯರ ಬೆಂಬಲ ಸಿಗಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಗೆ ಮುಂದಾಗಲಿದ್ದೀರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ