ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 23 ಏಪ್ರಿಲ್ 2022 (06:30 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಿರಿಯರಿಂದ ಉತ್ತಮ ಸಲಹೆಗಳು ಕೇಳಿಬರಲಿದೆ. ಅನಗತ್ಯ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಬಹಳ ದಿನಗಳಿಂದ ಬಾಕಿಯಿದ್ದ ಹರಕೆ ತೀರಿಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ದುಂದು ವೆಚ್ಚ ಬೇಡ.

ವೃಷಭ: ಬೇರೆಯವರ ಜೀವನದಲ್ಲಿ ಮೂಗು ತೂರಿಸುವ ಪ್ರಯತ್ನ ಮಾಡಬೇಡಿ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಮಿಥುನ: ಸಾಮಾಜಿಕ ಚಟುವಟಿಕೆಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ದಾನ ಧರ್ಮಾದಿಗಳಲ್ಲಿ ಆಸಕ್ತಿ ಕಂಡುಬರಲಿದೆ. ಪರರ ಹಿತಕ್ಕಾಗಿ ಕೆಲವೊಂದು ತ್ಯಾಗ ಮಾಡಬೇಕಾಗುತ್ತದೆ. ಕಾರ್ಯನಿಮಿತ್ತ ಪ್ರಯಾಣ ಮಾಡಲಿದ್ದೀರಿ.

ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಕಷ್ಟದ ಸಂದರ್ಭದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಕಟ್ಟಡ ಕಾಮಗಾರಿ ಕೆಲಸಗಳನ್ನು ಪೂರ್ಣಗೊಳಿಸಲು ಪ್ರಯತ್ನಿಸಲಿದ್ದೀರಿ.

ಸಿಂಹ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶ ನಿಮಿತ್ತ ಪರವೂರಿಗೆ ಪ್ರಯಾಣ ಮಾಡಬೇಕಾಗಿ ಬಂದೀತು. ವ್ಯಾಪಾರಿಗಳಿಗೆ ಉನ್ನತಿಯ ಯೋಗವಿದೆ. ಆದರೆ ನಯವಂಚಕರಿಂದ ದೂರವಿರುವುದೇ ಉತ್ತಮ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ನಿಮ್ಮ ಮನಸ್ಸಿಗೆ ನೋವಾಗುವಂತಹ ಘಟನೆಗಳಾದೀತು. ಆತ್ಮೀಯರೊಂದಿಗೆ ಕಷ್ಟ ಹಂಚಿಕೊಳ್ಳಲಿದ್ದೀರಿ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವಾಹನ ಖರೀದಿ ಯೋಜನೆ ಕೆಲವು ದಿನ ಮುಂದೂಡುವುದು ಉತ್ತಮ.

ತುಲಾ: ಹಿಂದೆ ಮಾಡಿದ ಒಳ್ಳೆಯ ಕೆಲಸಗಳ ಫಲ ಅನುಭವಿಸಲಿದ್ದೀರಿ. ವಿಶೇಷವಾದ ವ್ಯಕ್ತಿಗಳ ಭೇಟಿಯಾಗಲಿದ್ದು, ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ವಿಚಾರದಲ್ಲಿ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ.

ವೃಶ್ಚಿಕ: ವ್ಯಾಪಾರೀ ವರ್ಗದವರಿಗೆ ಉನ್ನತ ಸ್ಥಾನ ಮಾನದ ಯೋಗ. ಸಾಮಾಜಿಕವಾಗಿ ಕೀರ್ತಿ ಸಂಪಾದಿಸಲಿದ್ದೀರಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ.  ಕ್ರಯ-ವಿಕ್ರಯ ವ್ಯವಹಾರಗಳಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು.

ಧನು: ಸತತ ಪ್ರಯತ್ನ ಪಡದೇ ನೀವು ಅಂದುಕೊಂಡಿದ್ದ ಕೆಲಸಗಳು ನೆರವೇರದು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಸಂಶೋಧನಾ ವೃತ್ತಿಯಲ್ಲಿರುವವರಿಗೆ ಮುನ್ನಡೆ. ದಾನ ಧರ್ಮಾದಿಗಳಲ್ಲಿ ಆಸಕ್ತಿ ಕಂಡುಬರಲಿದೆ.

ಮಕರ: ಬಂಧು ಮಿತ್ರರ ಸಹಕಾರದಿಂದ ನಿಮ್ಮ ಕೆಲಸಗಳಿಗೆ ನೆರವಾಗಲಿದೆ. ಮನೆಯಲ್ಲಿ ಸಂತೋಷ ಕಂಡುಬರಲಿದೆ. ಮಕ್ಕಳಿಗೆ ಅನಿರೀಕ್ಷಿತ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಹಿಂಜರಿಕೆಯಿರಲಿ. ಅನಗತ್ಯ ಮಾತುಗಳಿಂದ ಸಂಬಂಧ ಹಾಳು ಮಾಡಿಕೊಳ್ಳಬೇಡಿ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಇದು ಸಕಾಲ. ತಾಳ್ಮೆಯಿರಲಿ.

ಮೀನ: ಸರಕಾರಿ ಉದ್ಯೋಗಿಗಳಿಗೆ ಬಿಡುವು ಸಿಗಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಶುಭ ಕಾರ್ಯಗಳನ್ನು ನೆರವೇರಿಸಲು ಸಿದ್ಧತೆ ನಡೆಸುವಿರಿ. ಸ್ವಯಂ ವೃತ್ತಿಯವರಿಗೆ ಅಭಿವೃದ್ಧಿ ಕಂಡುಬರುವುದು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ