ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 25 ಏಪ್ರಿಲ್ 2022 (07:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ ಸಿಗುವುದು. ಬಹಳ ದಿನಗಳಿಂದ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ದಿನದಂತ್ಯಕ್ಕೆ ನೆಮ್ಮದಿ.

ವೃಷಭ: ವೃತ್ತಿರಂಗದಲ್ಲಿ ಉನ್ನತ ಸ್ಥಾನಕ್ಕಾಗಿ ಅವಿರತ ಪ್ರಯತ್ನ ನಡೆಸಲಿದ್ದೀರಿ. ನಿಮಗೆ ಅಡ್ಡಗಾಲಾಗುತ್ತಿರುವವರಿಂದ ಮುಕ್ತಿ ಪಡೆಯಲಿದ್ದೀರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಉನ್ನತಿಯ ಯೋಗವಿದೆ. ಕಿರು ಸಂಚಾರ ಮಾಡುವಿರಿ.

ಮಿಥುನ: ಆಸ್ತಿ ವಿಚಾರದಲ್ಲಿ ನಿಮ್ಮ ಪರಿಶ್ರಮದಿಂದ ಮುನ್ನಡೆ ಸಿಗಲಿದೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಲಿದ್ದೀರಿ. ಸಾಮಾಜಿಕವಾಗಿ ಜನಮನ್ನಣೆಗೆ ಪಾತ್ರರಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಕೌಟುಂಬಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯನೆರವೇರಿಸಲು ಸಿದ್ಧತೆ ನಡೆಸಸಲಿದ್ದೀರಿ. ಮಕ್ಕಳ ಬಹಳ ದಿನಗಳ ಬೇಡಿಕೆ ಪೂರೈಸಲು ಖರ್ಚು ವೆಚ್ಚಗಳಾದೀತು. ತಾಳ್ಮೆಯಿರಲಿ.

ಸಿಂಹ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ವ್ಯಾವಹಾರಿಕವಾಗಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಅನಗತ್ಯ ಚಿಂತೆ ಬೇಡ.

ಕನ್ಯಾ: ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಉದ್ಯೋಗ ಸಂಬಂಧವಾದ ಚಿಂತೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವಿರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ.

ತುಲಾ: ಭೂಮಿ, ಆಸ್ತಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬಂದೀತು. ನೆರೆಹೊರೆಯವರ ವಿಶ್ವಾಸ ಸಂಪಾದಿಸಲಿದ್ದೀರಿ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ನಿಮ್ಮ ಬಹು ದಿನಗಳ ಕನಸು ನನಸು ಮಾಡಿಕೊಳ್ಳಲಿದ್ದೀರಿ. ಅನಿರೀಕ್ಷಿತವಾಗಿ ಧನಾಗಮನವಾಗಲಿದ್ದು, ಅಂದುಕೊಂಡ ಕೆಲಸ ನೆರವೇರಿಸಲಿದ್ದೀರಿ. ದೀರ್ಘ ಪ್ರಯಾಣದಿಂದ ದೇಹಾಯಾಸವಾಗುವ ಸಂಭವ.

ಧನು: ವಾಹನ ಖರೀದಿ ಮಾಡುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ.

ಮಕರ: ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನಮಾನ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ಯಂತ್ರೋಪಕರಣಗಳ ಕೆಲಸ ಮಾಡುವವರು ಎಚ್ಚರವಾಗಿರಬೇಕು. ಪಾಲುದಾರಿಕೆ ವ್ಯವಹಾರಗಳಲ್ಲಿ ವಂಚನೆಯಾಗದಂತೆ ಎಚ್ಚರಿಕೆ ವಹಿಸಬೇಕಾಗುತ್ತದೆ.

ಮೀನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವುದು ಉತ್ತಮ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆ. ಸಂತೋಷವಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ