ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 2 ಮೇ 2022 (08:15 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಏಳಿಗೆಗೆ ಅವಕಾಶಗಳು ಒದಗಿಬರಲಿವೆ. ಇಷ್ಟಭೋಜನ ಮಾಡುವ ಯೋಗವಿದೆ. ಪಾಲು ಬಂಡವಾಳ ಹೂಡಿಕೆಗೆ ಅವಕಾಶ ಒದಗಿಬರುವುದು. ಕಾರ್ಯ ನಿಮಿತ್ತ ಅಧಿಕ ಓಡಾಟ ನಡೆಸಬೇಕಾಗಿ ಬರಲಿದೆ.

ವೃಷಭ: ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ವಿಶೇಷವಾದ ವ್ಯಕ್ತಿಯನ್ನು ಭೇಟಿಯಾಗಲಿದ್ದು, ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಬಂಧು ಮಿತ್ರರನ್ನು ಭೇಟಿಯಾಗುವ ಯೋಗ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಉನ್ನತಿಯ ಯೋಗವಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಹೋದರರೊಂದಿಗೆ ಸಂಘರ್ಷಕ್ಕೆಡೆ ಮಾಡಿಕೊಡದಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಅರ್ಧಕ್ಕೇ ನಿಂತ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಕೌಟುಂಬಿಕವಾಗಿ ಕಿರು ಪ್ರವಾಸ ಮಾಡುವ ಯೋಗವಿದ್ದು, ಸಂತೋಷದಿಂದ ಕಾಲ ಕಳೆಯಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ನೆಮ್ಮದಿ ಅಗತ್ಯ.

ಸಿಂಹ: ವಿದ್ಯಾರ್ಥಿಗಳಿಗೆ ಪ್ರಗತಿ ಕಂಡುಬರಲಿದ್ದು, ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಕೂಡಿಬರಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾದೀತು. ಆದರೆ ಹಿತಶತ್ರುಗಳ ಕಾಟ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಕಾರ್ಯಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಕಂಡುಬರಲಿದೆ. ಇಷ್ಟಭೋಜನ ಮಾಡುವ ಯೋಗವಿದೆ. ಆದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ಮಕ್ಕಳ ವಿಚಾರದಲ್ಲಿ ಮಹತ್ವ ತೀರ್ಮಾನ ಕೈಗೊಳ್ಳಲಿದ್ದೀರಿ.

ತುಲಾ: ನಿಮ್ಮ ಮಾತು, ನಡೆಯ ಮೇಲೆ ಸಂಯಮವಿರಲಿ. ಮನಸ್ಸಿನಲ್ಲಿರುವ  ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಗುರುಹಿರಿಯರೊಂದಿಗೆ ಅನಗತ್ಯ ವಾದ ಬೇಡ. ದೂರ ಸಂಚಾರ ಯೋಗವಿದೆ.

ವೃಶ್ಚಿಕ: ಕಟ್ಟಡ, ಭೂಮಿ ಖರೀದಿಗಾಗಿ ನೀವು ಮಾಡಿದ ಪರಿಶ್ರಮಕ್ಕೆ ಪ್ರತಿಫಲ ಸಿಗಲಿದೆ. ದೂರದ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಭೇಟಿ ಸಾಧ‍್ಯತೆ. ಕೌಟುಂಬಿಕವಾಗಿ ಸಂತೋಷವಿರಲಿದೆ.

ಧನು: ಯಾವುದೇ ನಿರ್ಧಾರಕ್ಕೆ ಮುನ್ನ ಕುಟುಂಬ ಸದಸ್ಯರೊಂದಿಗೆ ಚರ್ಚಿಸಿ ಮುನ್ನಡೆಯುವುದು ಮುಖ್ಯ. ಸಮಯಕ್ಕೆ ಸರಿಯಾಗಿ ಹಣಕಾಸಿನ ನೆರವು ಹರಿದುಬರಲಿದ್ದು, ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ.

ಮಕರ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾತ್ಮಕ ಕೆಲಸದಿಂದ ಇತರರ ಮೆಚ್ಚುಗೆಗೆ ಪಾತ್ರವಾಗಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆಬರುವುದು.

ಕುಂಭ: ಬೇರೆಯವರು ನಿಮ್ಮ ಬಗ್ಗೆ ಏನಂದುಕೊಳ್ಳುವರೋ ಎಂಬ ಕೀಳರಿಮೆ ಬೇಡ. ಯಂತ್ರೋಪಕರಣಗಳ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೆ ಸಿಲುಕಿಕೊಳ‍್ಳಬೇಡಿ.

ಮೀನ: ಮನೋರಂಜನೆ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಹಿರಿಯರ ಸಲಹೆ ಪಡೆದು ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ