ಮೇಷ: ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಯ ಯೋಗವಿದ್ದು, ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಿ. ಯೋಗ್ಯ ವಯಸ್ಕರಿಗೆ ವಿವಾಹ ಯೋಗ ಸದ್ಯದಲ್ಲೇ ಕೂಡಿಬರಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗಬಹುದು.
ವೃಷಭ: ವ್ಯವಹಾರದಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಕಾರ್ಯನಿಮಿತ್ತ ಓಡಾಟ ನಡೆಸಲಿದ್ದೀರಿ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.
ಮಿಥುನ: ಹೊಸದಾಗಿ ವೃತ್ತಿಜೀವನ ಆರಂಭಿಸಿದವರಿಗೆ ಮುನ್ನಡೆಯ ಯೋಗ. ಹಣಕಾಸಿನ ಗಳಿಕೆಗೆ ನಾನಾ ದಾರಿಗಳು ಕಂಡುಕೊಳ್ಳಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೇವತಾ ಪ್ರಾರ್ಥನೆ ಮಾಡಿ.
ಕರ್ಕಟಕ: ವಿಶೇಷವಾದ ವ್ಯಕ್ತಿಗಳನ್ನು ಭೇಟಿಯಾಗಲಿದ್ದು, ನಿಮ್ಮ ಕೆಲಸಕ್ಕೆ ಸಹಾಯವಾಗಲಿದೆ. ಇಷ್ಟಾರ್ಥ ಸಿದ್ಧಿಗಾಗಿ ಕುಲದೇವರ ಪ್ರಾರ್ಥನೆ ಮಾಡಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ.
ಸಿಂಹ: ಕಾರ್ಯರಂಗದಲ್ಲಿ ನಿಮ್ಮ ಕೆಲಸಗಳು ಇತರರಿಗೂ ಮೆಚ್ಚುಗೆಯಾಗಲಿದೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲು ಇದು ಸಕಾಲ. ಮನಸ್ಸಿನ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಅನಗತ್ಯ ಚಿಂತೆ ಬೇಡ.
ಕನ್ಯಾ: ವೃತ್ತಿರಂಗದಲ್ಲಿ ಸಹೋದ್ಯೋಗಿಗಳ ಅಸಹಕಾರ ಮನಸ್ಸಿಗೆ ಕಿರಿ ಕಿರಿ ಉಂಟು ಮಾಡಿದೆ. ಆಸ್ತಿ ಖರೀದಿ ವಿಚಾರದಲ್ಲಿ ಅಡೆತಡೆಗಳು ಕಂಡುಬಂದೀತು. ಪ್ರೀತಿ ಪಾತ್ರರೊಂದಿಗೆ ಸುಂದರ ಕ್ಷಣ ಕಳೆಯುವ ಯೋಗವಿದೆ.
ತುಲಾ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸವಾಲುಗಳು ಎದುರಾದೀತು. ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.
ವೃಶ್ಚಿಕ: ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಮುನ್ನಡೆಯ ಯೋಗವಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಬಹಳ ದಿನಗಳ ನಂತರ ಹಳೆಯ ಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಅನಗತ್ಯ ಚಿಂತೆ ಬೇಡ.
ಧನು: ನಿಮ್ಮ ಮಾತು ವರ್ತನೆಯ ಮೇಲೆ ಸಂಯಮವಿರಲಿ. ಬೇರೆಯವರ ಅಭಿಪ್ರಾಯಗಳಿಗೆ ಬೆಲೆ ಕೊಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆ ಕಂಡುಬರಲಿದೆ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರಲಿದೆ.
ಮಕರ: ನಿಮ್ಮ ಮಾತಿನಿಂದಲೇ ಇಂದು ಇತರರ ಗಮನ ಸೆಳೆಯಲಿದ್ದೀರಿ. ಸ್ವಯಂ ಉದ್ಯೋಗಿಗಳಿಗೆ ಮುನ್ನಡೆಯ ಯೋಗ ಕಂಡುಬರಲಿದೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ದೇವತಾ ಪ್ರಾರ್ಥನೆ ಮರೆಯದಿರಿ.
ಕುಂಭ: ಇಂದು ನಡೆಯುವ ಘಟನೆಗಳು ನಿಮ್ಮ ಜೀವನದಲ್ಲಿ ಹೊಸ ತಿರುವ ನೀಡೀತು. ಮಕ್ಕಳ ವಿಚಾರದಲ್ಲಿ ಸಂತೋಷದ ವಾರ್ತೆ ಕೇಳಿಬರಲಿದೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಡಿಮೆಯಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಮೀನ: ವೃತ್ತಿರಂಗದಲ್ಲಿ ಉನ್ನತ ಸ್ಥಾನ ಮಾನಕ್ಕಾಗಿ ಶ್ರಮವಹಿಸಬೇಕಾಗುತ್ತದೆ. ಕ್ರಿಯಾತ್ಮಕವಾಗಿ ಯೋಚನೆ ಮಾಡಬೇಕಾಗುತ್ತದೆ. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಕಂಡುಬರಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.