ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 15 ಮೇ 2022 (07:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಬಹುದಿನಗಳ ಕನಸು ಈಡೇರಲಿದೆ. ಇಷ್ಟ ಭೋಜನ ಮಾಡುವ ಯೋಗ ಕೂಡಿಬರಲಿದೆ. ಪಾಲುದಾರಿಕೆ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಮಾಡಲಿದ್ದೀರಿ. ದೂರ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಷಭ: ಉತ್ತಮ ಧನಾರ್ಜನೆಗೆ ನಾನಾ ಅವಕಾಶಗಳು ಕೂಡಿಬರಲಿದೆ. ಸಾಂಸಾರಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ ನಿಮ್ಮದಾಗಲಿದೆ. ಪ್ರೀತಿ ಪಾತ್ರರ ಕಷ್ಟಕ್ಕೆ ನೆರವಾಗಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಅಭಿವೃದ್ಧಿ ಇರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮಾತಿನ ಮೇಲೆ ಹಿಡಿತವಿರಲಿ. ಕಟ್ಟಡ ಕೆಲಸಗಳಿಗಾಗಿ ಮಾಡಿಕೊಂಡಿದ್ದ ಸಾಲ ಪಾವತಿಯಾಗಲಿದೆ.

ಕರ್ಕಟಕ: ಮನೆಯಲ್ಲಿ ಅನಿರೀಕ್ಷಿತ ನೆಂಟರಿಷ್ಟರ ಆಗಮನವಾಗಲಿದ್ದು, ಸಂತೋಷದ ವಾತಾವರಣವಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚಗಳಾದೀತು. ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆಯಾದೀತು. ಎಚ್ಚರ.

ಸಿಂಹ: ಯಾವುದೇ ಕೆಲಸಕ್ಕೆ ಕೈ ಹಾಕುವ ಮೊದಲು ಆಪ್ತರೊಂದಿಗೆ ಚರ್ಚಿಸಿ ಮುನ್ನಡೆಯುವುದು ಉತ್ತಮ. ಧನಾರ್ಜನೆಗೆ ನಾನಾ ದಾರಿಗಳು ಕಂಡುಬರಲಿದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ಕನ್ಯಾ: ಕಾರ್ಯರಂಗದಲ್ಲಿ ನಿಮ್ಮ ಸಫಲತೆಗೆ ಸಹೋದ್ಯೋಗಿಗಳ ಸಹಕಾರ ಕಂಡುಬರಲಿದೆ. ಕೌಟುಂಬಿಕವಾಗಿ ಪರಸ್ಪರ ಸಹಕಾರವಿರಲಿದ್ದು, ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಆರ್ಥಿಕವಾಗಿ ಏಳಿಗೆ ಕಾಣಲು ಸತತ ಪರಿಶ್ರಮಪಡಬೇಕಾದೀತು. ವಿದ್ಯಾರ್ಥಿಗಳಿಗೆ ಓದಿಗೆ ಅಡಚಣೆಗಳು ಕಂಡುಬಂದೀತು. ಕುಲದೇವರ ಪ್ರಾರ್ಥನೆ ನಡೆಸುವುದು ಉತ್ತಮ. ಕಾರ್ಯನಿಮಿತ್ತ ಕಿರು ಓಡಾಟ ನಡೆಸಲಿದ್ದೀರಿ.

ವೃಶ್ಚಿಕ: ಆತುರದಲ್ಲಿ ನಿರ್ಧಾರ ಕೈಗೊಳ್ಳಲು ಹೋದರೆ ತೊಂದರೆ ಎದುರಾದೀತು. ಹೊಸದಾಗಿ ಉದ್ಯೋಗ ಆರಂಭಿಸಿದ್ದರೆ ಸವಾಲುಗಳಿರಲಿವೆ. ಸಂಗಾತಿಯ ಸಲಹೆಗಳು ಉಪಯುಕ್ತವೆನಿಸಲಿದೆ. ಹಿರಿಯರೊಂದಿಗೆ ಸಂಘರ್ಷ ಬೇಡ.

ಧನು: ವೈಚಾರಿಕವಾಗಿ ಭಿನ್ನ ಅಭಿಪ್ರಾಯಗಳಿದ್ದರೂ ಅನಿವಾರ್ಯವಾಗಿ ಅಂತಹ ಜನರೊಂದಿಗೆ ಕೈಜೋಡಿಸುವ ಸಂದರ್ಭ ಎದುರಾದೀತು. ಮಕ್ಕಳ ಜೀವನದ ಬಗ್ಗೆ ಅನಗತ್ಯ ಚಿಂತೆ ಬೇಡ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ.

ಮಕರ: ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚವಾಗಲಿದೆ. ಅನ್ಯರ ಚಾಡಿ ಮಾತುಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಆಸ್ತಿ ಖರೀದಿ-ವಿಕ್ರಯ ವಿಚಾರಗಳಲ್ಲಿ ಮುನ್ನಡೆ ಕಂಡುಬಂದೀತು.

ಕುಂಭ: ಮಹಿಳೆಯರಿಗೆ ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಲಿದ್ದೀರಿ. ವಾಹನ ಆಸ್ತಿ-ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನದ ಯೋಗ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ. ತಾಳ್ಮೆಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ