ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 22 ಮೇ 2022 (07:31 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಬೇರೆಯವರು ನಿಮ್ಮ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸದಂತೆ ಎಚ್ಚರಿಕೆ ವಹಿಸಿ. ಮಹಿಳೆಯರಿಗೆ ಮನೆಯಲ್ಲಿ ಅತಿಥಿ ಸತ್ಕಾರದ ಸಡಗರವಿರಲಿದೆ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಮುಖ್ಯ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ವಿಚಾರವಾದಿಗಳ ಮಾತುಗಳು ನಿಮ್ಮ ಮೇಲೆ ಪ್ರಭಾವ ಬೀರಿತು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಅನಗತ್ಯ ಚಿಂತೆಗೆ ಕಡಿವಾಣವಿರಲಿ.

ಮಿಥುನ: ಬೇಡದ ವಿಚಾರಗಳು ನಿಮ್ಮ ಮನಸ್ಸನ್ನು ಘಾಸಿಗೊಳಿಸಲಿವೆ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಹಿರಿಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬಂದೀತು. ಎಚ್ಚರ.

ಕರ್ಕಟಕ: ವ್ಯಾಪಾರಿ ವರ್ಗದವರಿಗೆ ಹಣ ಗಳಿಕೆಗೆ ನಾನಾ ಮಾರ್ಗಗಳು ಕಂಡುಬರಲಿದೆ. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಇಷ್ಟದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಕೈಗೊಂಡ ಕಾರ್ಯದಲ್ಲಿ ಯಶಸ್ಸು.

ಸಿಂಹ: ವೃತ್ತಿ ಜೀವನದಲ್ಲಿ ಮಹತ್ವದ ತಿರುವು ಸಿಗುವ ದಿನ. ಮೇಲಧಿಕಾರಿಗಳ ಕೃಪಾಕಟಾಕ್ಷಕ್ಕೆ ಒಳಗಾಗಲಿದ್ದೀರಿ. ವೈದ್ಯಕೀಯ ವೃತ್ತಿಯವರಿಗೆ ಬಿಡುವಿಲ್ಲದ ದುಡಿತ. ಸರಕಾರಿ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ.

ಕನ್ಯಾ: ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಬೇರೆಯವರು ನಿಮ್ಮ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಯತ್ನಿಸಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ತುಲಾ: ನೀವು ಅಂದುಕೊಂಡಿದ್ದು ಒಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿಯಾಗಲಿದೆ. ಹೊಸ ವಿಚಾರಗಳಿಗೆ ಮನಸ್ಸು ತೆರೆದುಕೊಳ್ಳಬೇಕಾಗುತ್ತದೆ. ಅಂದುಕೊಂಡ ಕೆಲಸಗಳಲ್ಲಿ ಯಶಸ್ಸು ಸಾಧಿಸಬೇಕಾದರೆ ಕ್ರಿಯಾತ್ಮಕವಾಗಿ ಯೋಚಿಸಬೇಕಾಗುತ್ತದೆ.

ವೃಶ್ಚಿಕ: ನಿಮ್ಮ ದೈನಂದಿನ ಕೆಲಸಗಳಿಗೆ ಕೊಂಚ ಅಡೆತಡೆಗಳು ಬಂದೀತು. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಅವಿವಾಹಿತರಿಗೆ ವಿವಾಹ ಪ್ರಸ್ತಾಪಗಳು ಬರಲಿವೆ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

ಧನು: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಿದ್ದರೆ ವಿಘ್ನಗಳು ಬಂದೀತು. ಬೇರೆಯವರ ಕೆಲಸಗಳಲ್ಲಿ ಮೂಗು ತೂರಿಸುವ ಪ್ರಯತ್ನ ಮಾಡಬೇಡಿ. ವಾಹನ ಚಾಲಕರಿಗೆ ಎಚ್ಚರಿಕೆ ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.

ಮಕರ: ಮನಸ್ಸಿನಲ್ಲಿ ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲು ಪ್ರಯತ್ನ ಮಾಡಲಿದ್ದೀರಿ. ಹೊಸ ವಿಚಾರಗಳನ್ನು ಕಲಿಯುವ ಆಸಕ್ತಿ ಕಂಡುಬರುವುದು. ಸಾಮಾಜಿಕವಾಗಿ ಸ್ಥಾನ ಮಾನಾದಿಗಳು ವೃದ್ಧಿಯಾಗಲಿವೆ.

ಕುಂಭ: ಕಾರ್ಯರಂಗದಲ್ಲಿ ನಿಮ್ಮ ಕ್ರಿಯಾತ್ಮಕತೆಯನ್ನು ಪ್ರಕಟಿಸಲು ಇದು ಸಕಾಲ. ಸರಕಾರಿ ಉದ್ಯೋಗಿಗಳಿಗೆ ಕೊಂಚ ಬಿಡುವಿನ ಸಮಯ ಸಿಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ.

ಮೀನ: ನಿರುದ್ಯೋಗಿಗಳು ಪಾಲಿಗೆ ಬಂದಿದ್ದು ಪಂಚಾಮೃತ ಎಂದು ಮುಂದುವರಿಯಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಪ್ರಗತಿ ಕಂಡುಬರಲಿದೆ. ಮಹಿಳೆಯರಿಗೆ ಚಿನ್ನಾಭರಣಗಳನ್ನು ಖರೀದಿಸುವ ಯೋಗ ಸದ್ಯದಲ್ಲೇ ಕೂಡಿಬರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ