ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 28 ಮೇ 2022 (08:15 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಮೇಲೆ ಗುರುತರ ಜವಾಬ್ಧಾರಿಯಿರಲಿದೆ. ಯಾವುದೇ ಕೆಲಸಗಳನ್ನು ಮಾಡುವುದಿದ್ದರೂ ಸರಿಯಾಗಿ ಪರಾಮರ್ಶಿಸಿ ಮುನ್ನಡೆದರೆ ಉತ್ತಮ. ಮನೆಗೆ ನೆಂಟರಿಷ್ಟರ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಷಭ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಕಾರ್ಯಕ್ಷೇತ್ರದಲ್ಲಿ ಹೊಂದಾಣಿಕೆಯಿಂದಿರಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗಲಿದೆ. ಚಿಂತೆ ಬೇಡ.

ಮಿಥುನ: ಕೆಲವೊಂದು ವಿಚಾರಗಳನ್ನು ಗೌಪ್ಯವಾಗಿಡುವ ಸಂದರ್ಭ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮೇಲಧಿಕಾರಿಗಳ ವಿಶ್ವಾಸಕ್ಕೆ ಪಾತ್ರಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.  ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ.

ಸಿಂಹ: ರಾಜಕೀಯ ರಂಗದಲ್ಲಿ ಏಳುಬೀಳುಗಳು ಸಾಮಾನ್ಯ. ಎಲ್ಲವನ್ನೂ ಸರಿದೂಗಿಸಿಕೊಂಡು ಹೋಗುವ ತಾಳ್ಮೆ ರೂಢಿಸಿಕೊಳ್ಳಬೇಕು. ಅನಗತ್ಯ ವಿಚಾರಗಳಲ್ಲಿ ಮೂಗು ತೂರಿಸಲು ಹೋಗಬೇಡಿ. ತಾಳ್ಮೆ, ಸಂಯಮ ಅಗತ್ಯ.

ಕನ್ಯಾ: ಅಧ್ಯಯನದಲ್ಲಿ ತೊಡಗಿಸಿಕೊಂಡವರಿಗೆ ಉನ್ನತಿಯ ಯೋಗವಿದೆ. ಹೊಸ ವಿಚಾರಗಳನ್ನು ತಿಳಿದುಕೊಳ್ಳುವ ಆಸಕ್ತಿ ಕಂಡುಬರಲಿದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ.

ತುಲಾ: ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿಯಿರಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಬರಲಿವೆ. ಮನೆಯಲ್ಲಿ ಸಂತೋಷದ ವಾತಾವರಣವಿರುವುದು.

ವೃಶ್ಚಿಕ: ಅಧ್ಯಯನದಲ್ಲಿ ಹೆಚ್ಚಿನ ಆಸಕ್ತಿ ಕಂಡುಬರುವುದು. ಉನ್ನತಾಧಿಕಾರದ ನಿಮ್ಮ ಕನಸಿಗೆ ತಕ್ಕ ಪರಿಶ್ರಮ ಪಡಬೇಕಾಗುತ್ತದೆ. ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆ ಅಗತ್ಯ. ಹಣಕಾಸಿನ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಧನು: ನೆರೆಹೊರೆಯವರ ವಿಚಾರದಲ್ಲಿ ಅನಗತ್ಯವಾಗಿ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ಇಷ್ಟಭೋಜನ ಮಾಡುವ ಯೋಗವಿದೆ. ಆದರೆ ಆರೋಗ್ಯದಲ್ಲಿ ಏರುಪೇರಾಗುವ ಸಂಭವ. ಎಚ್ಚರಿಕೆ ಅಗತ್ಯ.

ಮಕರ: ಕೌಟುಂಬಿಕವಾಗಿ ಕೆಲವೊಂದು ಸೂಕ್ಷ್ಮಗಳನ್ನು ನಿಭಾಯಿಸಬೇಕಾದ ಅನಿವಾರ್ಯತೆ ನಿಮ್ಮದಾಗಲಿದೆ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಹಣಕಾಸಿನ ಹರಿವಿಗೆ ತೊಂದರೆಯಾಗದು.

ಕುಂಭ: ವೈಯಕ್ತಿಕ ಜೀವನದಲ್ಲಿ ಏರುಪೇರಾಗುವ ಸಾಧ‍್ಯತೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.

ಮೀನ: ಧನಾದಾಯ ವೃದ್ಧಿಗಾಗಿ ನಾನಾ ದಾರಿಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಯೋಚನೆಯಾಗಲಿದೆ. ಹಿರಿಯರಿಗೆ ತೀರ್ಥ ಯಾತ್ರೆಯ ಕನಸು ಸದ್ಯದಲ್ಲೇ ನನಸಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ