ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 12 ಜೂನ್ 2022 (07:35 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ಕೆಲಸ ಮಾಡಬೇಕಾಗುತ್ತದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡುವುದು ಉತ್ತಮ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ದಿನದಂತ್ಯಕ್ಕೆ ನೆಮ್ಮದಿಯ ಸುದ್ದಿ.

ವೃಷಭ: ಆರೋಗ್ಯದಲ್ಲಿ ತೃಪ್ತಿಕರ ಸುಧಾರಣೆ ಕಂಡುಬರುವುದು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿದರೆ ಉತ್ತಮ.

ಮಿಥುನ: ಭವಿಷ್ಯದ ದೃಷ್ಟಿಯಿಂದ ಕೆಲವೊಂದು ನಿರ್ಧಾರ ಮಾಡಬೇಕಾಗುತ್ತದೆ. ಸಂಗಾತಿಗೆ ಅಚ್ಚರಿಯ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ಗುರುಹಿರಿಯರ ಸಲಹೆ ಸೂಚನೆಗಳು ಉಪಯೋಗಕ್ಕೆ ಬರಲಿವೆ.

ಕರ್ಕಟಕ: ಮನೆ, ವಾಸಸ್ಥಳ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಒದಗಿಬರಲಿವೆ. ವಿದ್ಯಾರ್ಥಿಗಳಿಗೆ ಜ್ಞಾನ ಸಂಪಾದನೆಗೆ ವಿಫುಲ ಅವಕಾಶಗಳು ಸಿಗಲಿವೆ. ತಾಳ್ಮೆಯಿರಲಿ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಮುನ್ನಡೆ ಕಂಡುಬರಲಿದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ದೈಹಿಕವಾಗಿ ಶ್ರಮ ಹೆಚ್ಚಿದರೂ ಧನ ಸಂಪಾದನೆಗೆ ನಾನಾ ಮಾರ್ಗಗಳು ಕಂಡುಬರಲಿವೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಸಂಗಾತಿ, ಮಕ್ಕಳ ಜೊತೆ ಮೋಜಿನ ಸಮಯ ಕಳೆಯುವ ಯೋಗ. ಆಸ್ತಿ ವಿಚಾರದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಸಂತೋಷಕ್ಕೆ ಕೊರತೆಯಿರದು.

ತುಲಾ: ಕಾರ್ಯನಿಮಿತ್ತ ದೀರ್ಘ ಪ್ರಯಾಣದ ಸಂದರ್ಭಗಳು ಬಂದೀತು. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರುವುದು. ಸನ್ಮಿತ್ರರ ಸಹಕಾರದೊಂದಿಗೆ ಒಳ್ಳೆಯ ಕೆಲಸಕ್ಕೆ ಕೈ  ಹಾಕಲಿದ್ದೀರಿ. ಚಿಂತೆ ಬೇಡ.

ವೃಶ್ಚಿಕ: ಹೊಸ ವಿಚಾರಗಳನ್ನು ಕಲಿಯುವ ನಿಮ್ಮ ಆಸಕ್ತಿಗೆ ಅವಕಾಶ ಸಿಗಲಿದೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ವ್ಯಾಪಾರಿಗಳಿಗೆ ಧನಾದಾಯ ವೃದ್ಧಿಯಾಗಲಿದೆ. ಅನ್ಯರಿಗೆ ಸಹಾಯ ಮಾಡುವಾಗ ಎಚ್ಚರಿಕೆಯಿರಲಿ.

ಧನು: ಸಂಗಾತಿಯ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದ್ದು, ನೆಮ್ಮದಿಯಾಗಲಿದೆ. ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಮಹಿಳೆಯರಿಗೆ ಸಹೋದರಾದಿ ಸಂಬಂಧಿಗಳನ್ನು ಭೇಟಿಯಾಗುವ ಯೋಗ.

ಮಕರ: ನಿಮ್ಮ ವಿಚಾರಧಾರೆಗಳಿಗೆ ಧಕ್ಕೆಯುಂಟಾದೀತು. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿವೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಆರೋಗ್ಯದ ಕಡೆಗೆ ಗಮನವಿರಲಿ.

ಕುಂಭ: ಹೊಸ ಕೆಲಸಕ್ಕೆ ಕೈ ಹಾಕುವ ಮುನ್ನ ಗುರುಹಿರಿಯರ ಸಲಹೆ ಪಡೆಯುವುದು ಉತ್ತಮ. ಮಕ್ಕಳ ವಿಚಾರದಲ್ಲಿ ಸಂತೋಷ ಕಂಡುಬರಲಿದೆ. ನೆರೆಹೊರೆಯವರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಮೀನ: ವ್ಯಾಪಾರ, ಉದ್ದಿಮೆದಾರರಿಗೆ ಪರಸ್ಪರ ಸಹಕಾರ ಕಂಡುಬರಲಿದೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಸಾಂಸಾರಿಕವಾಗಿ ಸಂತೋಷಕ್ಕೆ ಕೊರತೆಯಿರದು. ಅನಿವಾರ್ಯ ಕಾರ್ಯಗಳಿಗೆ ಅನ್ಯ ಊರಿಗೆ ಸಂಚರಿಸಬೇಕಾದೀತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ