ಮೇಷ: ನಿಮ್ಮ ಕಾರ್ಯವೈಖರಿಯಿಂದ ಇತರರ ಗಮನ ಸೆಳೆಯಲಿದ್ದೀರಿ. ಕಾರ್ಯರಂಗದಲ್ಲಿ ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ತಾಳ್ಮೆಯಿರಲಿ.
ವೃಷಭ: ನಿಮ್ಮ ಹೊಸ ಯೋಜನೆಗಳಿಗೆ ಹಣಕಾಸು ಹೊಂದಿಸುವುದು ಕಷ್ಟವಾದೀತು. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.
ಮಿಥುನ: ವ್ಯಾವಹಾರಿಕ ಸಂಬಂಧಗಳಲ್ಲಿ ತೊಂದರೆ ಕಾಣಿಸಿಕೊಂಡೀತು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಮನಸ್ಸಿನಲ್ಲಿರುವ ಭಾವನೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಪ್ರೇಮಿಗಳಿಗೆ ಶುಭದಿನವಾಗಿರಲಿದೆ.
ಕರ್ಕಟಕ: ವೃತ್ತಿರಂಗದಲ್ಲಿ ನಿಮಗೆ ಎದುರಾಗುವ ವಿಘ್ನಗಳಿಗೆ ಕ್ರಿಯಾತ್ಮಕವಾಗಿ ಯೋಚಿಸಿ ಪರಿಹಾರ ಕಂಡುಕೊಳ್ಳಲಿದ್ದೀರಿ. ಮಹಿಳೆಯರಿಂದ ನಿಮಗೆ ಲಾಭವಾದೀತು. ಕಾರ್ಯಸಾಧನೆಗೆ ತಕ್ಕ ಪರಿಶ್ರಮ ಪಡಬೇಕಾಗುತ್ತದೆ. ಚಿಂತೆ ಬೇಡ.
ಸಿಂಹ: ಸದುದ್ದೇಶಕ್ಕಾಗಿ ಮಾಡುವ ಕೆಲಸಗಳಲ್ಲಿ ಉನ್ನತಿ ಕಂಡುಬರಲಿದೆ. ಮಹಿಳೆಯರಿಗೆ ಚಿನ್ನಾಭರಣಗಳ ಖರೀದಿ ಯೋಜನೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.
ಕನ್ಯಾ: ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ವೈಯಕ್ತಿಕವಾಗಿ ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ಕೊಂಚ ನಿವಾರಣೆಯಾಗಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ.
ತುಲಾ: ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಹೊಸ ಬಗೆಯ ವಸ್ತು ಖರೀದಿಸಲು ಮುಂದಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ವೃಶ್ಚಿಕ: ಪ್ರೀತಿ ಪಾತ್ರರ ವಿಚಾರದಲ್ಲಿ ಅಸಡ್ಡೆ ಬೇಡ. ಕೌಟುಂಬಿಕವಾಗಿ ಕೆಲವೊಂದು ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ಕಾರ್ಯರಂಗದಲ್ಲಿ ಮುನ್ನಡೆಯಿದ್ದರೂ, ಹಿತಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.
ಧನು: ವ್ಯಾಪಾರೀ ವರ್ಗದವರಿಗೆ ಸಾಲ ಪಾವತಿ ಚಿಂತೆ ಕಾಡೀತು. ಧನಗಳಿಕೆಗೆ ನಾನಾ ಮೂಲಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವೈಯಕ್ತಿಕ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬಂದೀತು. ದೇವತಾ ಪ್ರಾರ್ಥನೆ ಮಾಡಿ.
ಮಕರ: ಮನಸ್ಸಿಗೆ ಉಲ್ಲಾಸ ಕೊಡುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಕ್ರಿಯಾತ್ಮಕವಾಗಿ ಯೋಚಿಸುವುದರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ವಿದ್ಯಾರ್ಥಿಗಳಿಗೆ ಆಲಸ್ಯ ಮನೋಭಾವ ಕಂಡುಬರಲಿದೆ.
ಕುಂಭ: ಉದ್ಯೋಗದಲ್ಲಿ ಬಡ್ತಿ ನಿಮಿತ್ತ ಮೇಲಧಿಕಾರಿಗಳ ಕೃಪಾಕಟಾಕ್ಷ ಪಡೆಯಲು ಪ್ರಯತ್ನಿಸಲಿದ್ದೀರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭಿಸಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬಂದೀತು.
ಮೀನ: ಸರಕಾರಿ ಉದ್ಯೋಗಕ್ಕಾಗಿ ಪ್ರಯತ್ನಿಸುತ್ತಿದ್ದರೆ ಮುನ್ನಡೆ ಕಂಡುಬಂದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದ್ದು, ವಿನೋದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.