ಮೇಷ: ಮಾನಸಿಕವಾಗಿ ವಿಶ್ರಾಂತಿ ಪಡೆಯಲು ಮನಸ್ಸು ಬಯಸಲಿದೆ. ಉದ್ಯೋಗ ಬದಲಾವಣೆಗೆ ನೀವು ಮಾಡುವ ಪ್ರಯತ್ನಕ್ಕೆ ಫಲ ಸಿಗಲಿದೆ. ಕೈಲಾಗದವರಿಗೆ ನಿಮ್ಮಿಂದಾದ ಸಹಾಯ ಮಾಡಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ
ವೃಷಭ: ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಉನ್ನತಿಯ ಯೋಗ. ವಿಶೇಷ ವ್ಯಕ್ತಿಗಳ ಭೇಟಿಯಿಂದ ಕನಸು ನನಸಾಗಲಿದೆ. ಬಂಧುಮಿತ್ರರಿಂದ ಪ್ರೋತ್ಸಾಹ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಪ್ರಗತಿ ಕಂಡುಬರಲಿದೆ.
ಮಿಥುನ: ವೃತ್ತಿರಂಗದಲ್ಲಿ ನಿಮಗೆ ಆಗಿಬರದ ವ್ಯಕ್ತಿಗಳಿಂದ ತೊಂದರೆಗಳು ಎದುರಾದೀತು. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಎಚ್ಚರಿಕೆ ವಹಿಸಬೇಕಾಗುತ್ತದೆ. ಅಪರಿಚಿತ ವ್ಯಕ್ತಿಗಳೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರುವುದು ಉತ್ತಮ.
ಕರ್ಕಟಕ: ನಿಮ್ಮ ಕನಸಿನ ಯೋಜನೆಗೆ ಯಾವುದೇ ಅಡ್ಡಿ ಆತಂಕಗಳು ಎದುರಾಗದು. ಆದರೆ ಸಾಲಗಾರರ ಕಾಟದಿಂದ ಮುಕ್ತಿ ಪಡೆಯಲು ಹೊಸ ದಾರಿ ಕಂಡುಕೊಳ್ಳಬೇಕಾಗುತ್ತದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
ಸಿಂಹ: ಪಾಲುದಾರಿಕೆ ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಬರುವುದು. ಇಲ್ಲಸಲ್ಲದ ವಿಚಾರಕ್ಕೆ ತಲೆಕೆಡಿಸಿಕೊಳ್ಳುವುದು ಬೇಡ. ಹೊಸ ಉದ್ಯೋಗಕ್ಕೆ ಪ್ರಯತ್ನ ಪಡಲಿದ್ದೀರಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.
ಕನ್ಯಾ: ಮಕ್ಕಳ ವಿಚಾರದಲ್ಲಿ ಅನಗತ್ಯ ವಿವಾದ ಬೇಡ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಧಾರ್ಮಿಕ ಕಾರ್ಯಗಳಿಗೆ ಮುಂದಾಳತ್ವ ವಹಿಸಲಿದ್ದೀರಿ. ಹಣಕಾಸಿನ ಆದಾಯಕ್ಕೆ ಕೊರತೆಯಾಗದು. ಚಿಂತೆ ಬೇಡ.
ತುಲಾ: ಸಹೋದರ ಸಮಾನರಿಂದ ಪ್ರೋತ್ಸಾಹ ಕಂಡುಬರಲಿದೆ. ಧನಾದಾಯ ವೃದ್ದಿಯಾಗಲಿದೆ. ಆಸ್ತಿವಿಚಾರಗಳಲ್ಲಿ ಆತುರದ ತೀರ್ಮಾನ ಬೇಡ. ಕಾರ್ಯಸಫಲತೆಗೆ ಗುರುಹಿರಿಯರ ಪ್ರೋತ್ಸಾಹ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ವೃಶ್ಚಿಕ: ಕಾರ್ಯಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ಧಾರಿಗಳು ಹೆಗಲಿಗೇರಲಿವೆ. ಮಹಿಳೆಯರಿಗೆ ಉನ್ನತ ಸ್ಥಾನಕ್ಕೇರುವ ಯೋಗ. ಅನಗತ್ಯ ಮಾತುಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ.
ಧನು: ಬೇರೆಯವರ ಮಾತನ್ನು ಅತಿಯಾಗಿ ಕಿವಿಗೆ ಹಾಕಿಕೊಳ್ಳುವ ಅಗತ್ಯವಿಲ್ಲ. ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ‍್ಳಲಿದ್ದೀರಿ. ಇಷ್ಟಮಿತ್ರರೊಂದಿಗೆ ಇಷ್ಟಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ಚಿಂತೆ ಬೇಡ.
ಮಕರ: ಹೊಸದಾಗಿ ವಸ್ತುಗಳನ್ನು ಖರೀದಿ ಮಾಡಲು ಖರ್ಚು ವೆಚ್ಚಗಳಾದೀತು. ನಿಮ್ಮ ಚಿಂತನೆಗಳನ್ನು ಇತರರ ಮೇಲೆ ಹೇರಲು ಹೋಗಬೇಡಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಸಹೋದರರಿಂದ ಸಹಕಾರ ಸಿಗಲಿದೆ.
ಕುಂಭ: ಹಿಂದೆ ನಡೆದು ಹೋದ ವಿಚಾರಗಳ ಬಗ್ಗೆ ಅನಗತ್ಯ ಚಿಂತೆ ಮಾಡುವ ಅಗತ್ಯವಿಲ್ಲ. ಹಿರಿಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗುವ ಸಂಭವ. ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು. ಕಾರ್ಯನಿಮಿತ್ತ ಪರವೂರಿಗೆ ಪ್ರಯಾಣ ಮಾಡಬೇಕಾದೀತು.
ಮೀನ: ಆತುರದ ಬುದ್ಧಿಯಿಂದ ತೀರ್ಮಾನ ತೆಗೆದುಕೊಂಡು ಪಶ್ಚಾತ್ತಾಪ ಪಡುವ ಸ್ಥಿತಿ ನಿಮ್ಮದಾಗಲಿದೆ. ರಾಜಕೀಯ ರಂಗದಲ್ಲಿ ಮುನ್ನಡೆ ಕಂಡುಬರಲಿದೆ. ಹಣಕಾಸಿನ ಏರಿಳಿತಗಳು ಸಾಮಾನ್ಯ. ಮಕ್ಕಳಿಂದ ಸಂತೋಷ ಸಿಗಲಿದೆ.