ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 15 ಜುಲೈ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕನಸಿನ ಬೆನ್ನೇರಿ ಹೊರಡುವಾಗ ಕೆಲವೊಂದು ಅಡೆತಡೆಗಳು ಸಾಮಾನ್ಯ. ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ನಿಮ್ಮ ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ.

ವೃಷಭ: ಸಂದರ್ಭೋಚಿತ ಸಲಹೆಗಳು ನಿಮಗೆ ಕಷ್ಟಕಾಲದಲ್ಲಿ ನೆರವಿಗೆ ಬರಲಿದೆ. ಸಾಂಸಾರಿಕವಾಗಿ ಮಧ್ಯಮ ಸುಖ ಕಂಡುಬರಲಿದೆ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಕಿರು ಸಂಚಾರ ಮಾಡಲಿದ್ದೀರಿ.

ಮಿಥುನ: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ ಕಂಡುಬರಲಿದೆ. ಕೌಟುಂಬಿಕವಾಗಿ ಸುಖ ಸಮೃದ್ಧಿ ಕಂಡುಬರಲಿದೆ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನವಾಗುವ ಸಾಧ್ಯತೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಕರ್ಕಟಕ: ಉದ್ಯೋಗ ಸಂಬಂಧವಾದ ಸಮಸ್ಯೆಗಳಿಂದ ಮನೆಯಲ್ಲೂ ಅಶಾಂತಿ ಮೂಡೀತು. ಸಂಗಾತಿಯೊಂದಿಗೆ ತಾಳ್ಮೆಯಿಮದ ವ್ಯವಹರಿಸಿ. ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಾಗಬೇಕಾಗುತ್ತದೆ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಹೊಸ ಅವಕಾಶಗಳು ಬರಲಿವೆ. ನಿರುದ್ಯೋಗಿಗಳು ಪಾಲಿಗೆ ಬಂದಿದ್ದೇ ಪಂಚಾಮೃತ ಎಂದುಕೊಳ್ಳಬೇಕು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಕನ್ಯಾ: ಬಂಧು ಮಿತ್ರರ ಸಹಕಾರದಿಂದ ಉದ್ಯೋಗ ರಂಗದಲ್ಲಿ ಯಶಸ್ಸು ಕಂಡುಬರಲಿದೆ. ಆಸ್ತಿ ವಿಚಾರದಲ್ಲಿ ಸಹೋದರಾದಿ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ಹಣಕಾಸಿನ ಆದಾಯಕ್ಕೆ ಹೆಚ್ಚಳಕ್ಕೆ ನಾನಾ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ನಿಮ್ಮ ಚಾಕಚಕ್ಯತೆಯಿಂದ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ತಾಳ್ಮೆಯಿರಲಿ.

ವೃಶ್ಚಿಕ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ನಿಮ್ಮ ಆಪ್ತರ ಕಷ್ಟಕ್ಕೆ ನೆರವಾಗಲಿದ್ದೀರಿ. ಹಿರಿಯರಿಗೆ ದೇವತಾ ಕಾರ್ಯಗಳಿಂದ ನೆಮ್ಮದಿ ದೊರೆಯಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ನಿಮ್ಮ ಮನಸ್ಸಿನ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಮಕ್ಕಳ ಜೀವನದಲ್ಲಿ ಅಭಿವೃದ್ಧಿ ಕಂಡು ಸಂತೋಷವಾಗಲಿದೆ. ದಾಂಪತ್ಯದಲ್ಲಿ ತೃಪ್ತಿಕರ ವಾತಾವರಣವಿರಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.

ಮಕರ: ಹಲವು ಚಟುವಟಿಕೆಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಲಿದ್ದೀರಿ. ಹಳೆಯ ಮಿತ್ರರ ಪುನರ್ಮಿಲನವಾಗಲಿದೆ. ಪಾಲು ಬಂಡವಾಳ ಹೂಡಿಕೆಗೆ ಇದು ಸಕಾಲ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಕುಂಭ: ಉನ್ನತ ಸ್ಥಾನಕ್ಕೇರುವ ನಿಮ್ಮ ಕನಸಿಗೆ ಕೆಲವೊಂದು ವಿಘ್ನಗಳು ಎದುರಾದೀತು. ವಿದ್ಯಾರ್ಥಿಗಳಿಗೆ ಕಠಿಣ ಹಾದಿ ಮುಂದಿದೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.

ಮೀನ: ಹೊಸ ಜನರ ಭೇಟಿಯಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಮನೆಯಲ್ಲಿ ಶುಭ ಮಂಗಲ ಕಾರ್ಯನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಅನಗತ್ಯ ಚಿಂತೆ ಬೇಡ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ