ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 26 ಜುಲೈ 2022 (05:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಸಂಬಂಧವಾದ ಹೊಸ ಜವಾಬ್ಧಾರಿಗಳು ಕಿರಿ ಕಿರಿ ತಂದೀತು. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಕೆಲವೊಂದು ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ‍್ಳಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಕಾರ್ಯನಿಮಿತ್ತ ಪ್ರಯಾಣ ಮಾಡಬೇಕಾಗುತ್ತದೆ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ.

ಮಿಥುನ: ಯೋಗ್ಯ ವಯಸ್ಕರು ಸೂಕ್ತ ಸಂಗಾತಿಗಾಗಿ ಹುಡುಕಾಟ ನಡೆಸಲಿದ್ದಾರೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷವಾಗದಂತೆ ಎಚ್ಚರಿಕೆ ವಹಿಸಿ. ಸಾಮಾಜಿಕ ಕೆಲಸಗಳಲ್ಲಿ ತೃಪ್ತಿ ಕಂಡುಬಂದೀತು.

ಕರ್ಕಟಕ: ದಾಂಪತ್ಯದಲ್ಲಿ ಪರಸ್ಪರ ಹೊಂದಾಣಿಕೆ ಕೊರತೆಯಿಂದ ಘರ್ಷಣೆಗಳಾಗುವ ಸಾಧ‍್ಯತೆ. ಮಾತಿನ ಮೇಲೆ ನಿಗಾ ಇರಲಿ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಆರ್ಥಿಕವಾಗಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ.

ಸಿಂಹ: ವೈಯಕ್ತಿಕ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಂಡು ಹಗುರವಾಗಲಿದ್ದೀರಿ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ಮುನ್ನಡೆ ಕಂಡುಬರುವುದು. ಚಿಂತೆ ಬೇಡ.

ಕನ್ಯಾ: ಕೆಲಸದ ವಿಚಾರದಲ್ಲಿ ಕೆಲವೊಂದು ಹೊಂದಾಣಿಕೆ ಅನಿವಾರ್ಯವಾಗಲಿದೆ. ಆರ್ಥಿಕವಾಗಿ ಹಣಕಾಸಿನ ಸ್ಥಿತಿ ಗತಿ ಸುಧಾರಿಸೀತು. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ತುಲಾ: ವ್ಯಾಪಾರ, ವ್ಯವಹಾರದಲ್ಲಿ ತೊಡಗಿಸಿಕೊಂಡವರಿಗೆ ಮುನ್ನಡೆಯ ಯೋಗ. ಮಹಿಳೆಯರಿಗೆ ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ಮಾತೃ ಸಮಾನರಿಂದ ಒಳಿತಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ಹೊಸ ಕೆಲಸಗಳಿಗೆ ಕೈ ಹಾಕಲು ಇದು ಸಕಾಲ. ಆಪ್ತರ ಕಷ್ಟಗಳಲ್ಲಿ ಭಾಗಿಯಾಗಲಿದ್ದೀರಿ. ಕೌಟುಂಬಿಕವಾಗಿ ಜವಾಬ್ಧಾರಿಗಳು ಹೆಚ್ಚಲಿವೆ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಧನು: ಅಧ್ಯಯನದಲ್ಲಿ ತೊಡಗಿಸಿಕೊಂಡವರಿಗೆ ಸೂಕ್ತ ಗೌರವ ದೊರೆಯಲಿದೆ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ ಕಂಡುಬರುವುದು. ಪ್ರೇಮಿಗಳಿಗೆ ಶುಭ ದಿನ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಕರ: ವಸ್ತು ಸ್ಥಿತಿ ಅರಿತು ಕೆಲವು ನಿರ್ಧಾರ ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಎದುರಾಗಲಿದೆ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಗುರುಹಿರಿಯರ ಪ್ರೋತ್ಸಾಹ ಕಂಡುಬರಲಿದೆ. ತಾಳ್ಮೆಯಿರಲಿ.

ಕುಂಭ: ಸರಕಾರಿ ಉದ್ಯೋಗಿಗಳ ಮುಂಬಡ್ತಿ ಕನಸು ಸದ್ಯದಲ್ಲೇ ನನಸಾಗುವ ಸಾಧ‍್ಯತೆ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.

ಮೀನ: ಅಂದುಕೊಂಡಂತೆಯೇ ಕೆಲಸ ಕಾರ್ಯಗಳು ನಡೆಯುವುದರಿಂದ ಮನಸ್ಸಿಗೆ ಸಮಾಧಾನವಾದೀತು. ಬಹಳ ದಿನಗಳ ನಂತರ ಬಂಧು ಮಿತ್ರರ ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಕಾರ್ಯನಿಮಿತ್ತ ಪರವೂರಿಗೆ ಸಂಚಾರ ಮಾಡಬೇಕಾದೀತು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ