ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 1 ಆಗಸ್ಟ್ 2022 (07:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ಅತಿಯಾಗಿ ಇನ್ನೊಬ್ಬರ ಅವಲಂಬನೆ ಬೇಡ. ಸಹೋದ್ಯೋಗಿಗಳು ಮಾಡುವ ವಂಚನೆಗಳನ್ನು ಬಯಲಿಗೆಳೆಯಲಿದ್ದೀರಿ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ.

ವೃಷಭ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಕೈಲಾದವರಿಗೆ ಸಹಾಯ ಮಾಡುವುದರಿಂದ ನೆಮ್ಮದಿ ದೊರೆಯಲಿದೆ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ.

ಮಿಥುನ: ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸವಾಲುಗಳು ಎದುರಾದೀತು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ಕರ್ಕಟಕ: ಆರ್ಥಿಕವಾಗಿ ನೀವು ಎಣಿಸಿದಂತೇ ಯೋಜನೆ ರೂಪಿಸಲಿದ್ದೀರಿ. ವ್ಯಾಪಾರಿಗಳಿಗೆ ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ಪ್ರೇಮಿಗಳಿಗೆ ಶುಭ ದಿನ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಆರೋಗ್ಯದಲ್ಲಿ ಸುಧಾರಣೆ.

ಸಿಂಹ: ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಸಿಗಬೇಕಾದರೆ ಕುಲದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ಕೋರ್ಟು ಕಚೇರಿ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬರಲಿದೆ.

ಕನ್ಯಾ: ವ್ಯವಹಾರದಲ್ಲಿ ಮೂರನೆಯವರು ಮೂಗು ತೂರಿಸಲು ಅವಕಾಶ ಕೊಡಬೇಡಿ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ನಿಮ್ಮದಲ್ಲದ ವಸ್ತುವಿನ ಬಗ್ಗೆ ಅತಿಯಾದ ವ್ಯಾಮೋಹ ಬೇಡ. ಕಿರು ಸಂಚಾರ ಮಾಡಲಿದ್ದೀರಿ.

ತುಲಾ: ಪರರ ಅಭಿಪ್ರಾಯಗಳಿಗೆ ಅತಿಯಾಗಿ ಕಿವಿಗೊಡುವುದು ಬೇಡ. ಹೆಚ್ಚಿನ ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ನಿರುದ್ಯೋಗಿಗಳಿಗೆ ಸ್ವಯಂ ಉದ್ಯೋಗದ ಬಗ್ಗೆ ಯೋಜನೆಗಳು ಬರಲಿವೆ.

ವೃಶ್ಚಿಕ: ಪಾಲಿಗೆ ಬಂದ ಅವಕಾಶಗಳನ್ನು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳದೇ ಪಶ್ಚಾತ್ತಾಪ ಪಡುವ ಸ್ಥಿತಿಯಾದೀತು. ಹೊರದೇಶದಲ್ಲಿ ಉದ್ಯೋಗ ಮಾಡುವವರಿಗೆ ಮುನ್ನಡೆ ಯೋಗ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೈಗೂಡಲಿದೆ.

ಧನು: ಮನೆಗೆ ಸಂಬಂಧಿಸಿದ ವಿಚಾರದಲ್ಲಿ ನಿಮ್ಮ ಕೆಲವೊಂದು ನಿರ್ಧಾರಗಳು ಇತರರ ಅಸಮಾಧಾನಕ್ಕೆ ಗುರಿಯಾದೀತು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ವ್ಯವಹಾರದಲ್ಲಿ ಶತ್ರು ಪೀಡೆ ನಾಶವಾದೀತು. ಚಿಂತೆ ಬೇಡ.

ಮಕರ: ನಿಮಗೆ ನೀವೇ ಶತ್ರುಗಳಾಗುವ ಪರಿಸ್ಥಿತಿ ಎದುರಾದೀತು. ಹಿರಿಯರಿಗೆ ತೀರ್ಥ ಯಾತ್ರೆ ಕೈಗೊಳ್ಳುವ ಯೋಗ ಕೂಡಿಬರಲಿದೆ. ಹಣಕಾಸಿನ ವ್ಯವಹಾರದಲ್ಲಿ ಪಾರದರ್ಶಕತೆಯಿರಲಿ. ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಬಿಡುವಿಲ್ಲದ ಕೆಲಸದೊತ್ತಡದಿಂದ ದೇಹಾಯಾಸವಾದೀತು. ನಿಮ್ಮ ಕೆಲಸಗಳಿಗೆ ಸಂಗಾತಿಯ ಸಹಕಾರ ಸಿಗುವುದು. ಮಕ್ಕಳಿಂದ ಸಂತೋಷ ಸಿಗಲಿದೆ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮೀನ: ಬಹಳ ದಿನಗಳ ನಂತರ ಆಪ್ತೇಷ್ಟರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ನಿಮ್ಮ ಹೊಸ ಪ್ರಯತ್ನಗಳಿಗೆ ಮನೆಯವರ ಸಾಥ್ ಸಿಗಲಿದೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ