ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 6 ಆಗಸ್ಟ್ 2022 (07:21 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಮನೆಗೆ ನೆಂಟರಿಷ್ಟರ ಆಗಮನವಾಗಲಿದ್ದು, ಸಿಹಿ ಊಟದ ತಯಾರಿ ಮಾಡಲಿದ್ದೀರಿ. ಕೆಲಸ ಕಾರ್ಯಗಳಿಗೆ ಇತರರ ಸಹಕಾರ ಕಂಡುಬಂದೀತು. ಮನಸ್ಸಿನಲ್ಲಿರುವುದನ್ನು ನೇರವಾಗಿ ಹೇಳಿ ನಿಷ್ಠುರಕ್ಕೊಳಗಾಗದಿರಿ.ತಾಳ್ಮೆಯಿರಲಿ.

ವೃಷಭ: ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿದ್ದು, ಆಪ್ತರೊಂದಿಗೆ ಹಂಚಿಕೊಳ್ಳುವ ಮನಸ್ಸಾಗಲಿದೆ. ಕಟ್ಟಡ ಕಾಮಗಾರಿ ಕೆಲಸಗಳು ಅರ್ಧಕ್ಕೇ ನಿಲ್ಲಲಿವೆ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ.

ಮಿಥುನ: ಬೇರೆಯವರು ನಿಮ್ಮ ಕೆಲಸ ಕಾರ್ಯಗಳಲ್ಲಿ ಮೂಗು ತೂರಿಸುವುದರಿಂದ ಕಿರಿ ಕಿರಿಯಾದೀತು. ವೈಯಕ್ತಿಕ ಜೀವನದಲ್ಲಿ ಕೆಲವೊಂದು ಬದಲಾವಣೆಗೆ ಸಿದ್ಧರಾಗಬೇಕಾಗುತ್ತದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕರ್ಕಟಕ: ವೃತ್ತಿರಂಗದಲ್ಲಿ ನಿಮ್ಮ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರಲಿದ್ದು, ಆರ್ಥಿಕವಾಗಿ ಚೇತರಿಕೆ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ವ್ಯಾಪಾರಿಗಳಿಗೆ ಸಾಲಗಾರರ ಕಾಟದಿಂದ ಮುಕ್ತಿ.

ಸಿಂಹ: ಹಿರಿಯರು ಹೇಳುವ ಅಭಿಪ್ರಾಯಗಳನ್ನು ಅನಿವಾರ್ಯವಾಗಿ ಅನುಸರಿಸಬೇಕಾಗುತ್ತದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರಿದಿಗೆ ಖರ್ಚು ವೆಚ್ಚಗಳಾದೀತು. ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗವಾದೀತು. ತಾಳ್ಮೆ ಅಗತ್ಯ.

ಕನ್ಯಾ: ಮನೆಯಲ್ಲಿ ಅಭಿವೃದ್ಧಿ ಕಾರ್ಯ ಕೈಗೊ‍ಳ್ಳಲು ಮುಂದಾಗಲಿದ್ದೀರಿ. ಇಷ್ಟಮಿತ್ರರೊಂದಿಗೆ ದಿನ ಕಳೆಯುವ ಯೋಗ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ತುಲಾ: ಭವಿಷ್ಯದ ದೃಷ್ಟಿಯಿಂದ ಕೂಡಿಟ್ಟಿದ್ದ ಹಣ ಅನಿವಾರ್ಯ ಕಾರಣಗಳಿಗೆ ಖರ್ಚಾಗಲಿದೆ. ಕೌಟುಂಬಿಕವಾಗಿ ಭಿನ್ನಾಭಿಪ್ರಾಯಗಳು ದೂರವಾದೀತು. ದಾಂಪತ್ಯದಲ್ಲಿ ನೆಮ್ಮದಿಯಿರುವುದು. ಮಕ್ಕಳಿಂದ ಸಂತೋಷ ಸಿಗಲಿದೆ.

ವೃಶ್ಚಿಕ: ಕೊಡು ಕೊಳ್ಳುವ ವ್ಯವಹಾರಗಳಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಪೀಠೋಪಕರಣಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆ. ಸಂಗಾತಿಯೊಂದಿಗೆ ಸಂಘರ್ಷ ಬೇಡ.

ಧನು: ನೀವು ಎಷ್ಟೇ ಜೋಪಾನವಾಗಿದ್ದರೂ ಕೆಲವೊಂದು ವಸ್ತು ನಿಮ್ಮ ಕೈಯಿಂದಲೇ ಹಾಳಾಗುವ ಸಾಧ‍್ಯತೆ. ಅನಗತ್ಯ ವಿಚಾರಗಳಿಗೆ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳಬೇಡಿ. ಕುಲದೇವರ ಪ್ರಾರ್ಥನೆ ಮಾಡಿದರೆ ಉತ್ತಮ.

ಮಕರ: ಮನಸ್ಸಿನಲ್ಲಿ ಅಂದುಕೊಂಡಿರುವ ಕೆಲಸ ಕಾರ್ಯಗಳನ್ನು ಪೂರ್ತಿ ಮಾಡಲು ನಾನಾ ವಿಘ್ನಗಳು ತೋರಿಬರಲಿದೆ. ಹೊಸ ಉದ್ಯೋಗಕ್ಕಾಗಿ ಪ್ರಯತ್ನ ಪಡಲಿದ್ದೀರಿ. ನಯವಂಚಕರಿಂದ ದೂರವಿದ್ದರೆ ಉತ್ತಮ. ತಾಳ್ಮೆಯಿರಲಿ.

ಕುಂಭ: ಸಮಯದ ಸದುಪಯೋಗ ಮಾಡಲು ನಾನಾ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಇತರರ ಚಾಡಿ ಮಾತಿಗೆ ಕಿವಿಗೊಡಬೇಕಾಗಿಲ್ಲ.

ಮೀನ: ಕಷ್ಟದ ಸಮಯದಲ್ಲಿ ಸನ್ಮಿತ್ರರ ಸಹಾಯ ಒದಗಿಬರಲಿದೆ. ನಿಮ್ಮ ಕೆಲವೊಂದು ಮಾತು ಆಪ್ತರ ಮನ ನೋಯಿಸೀತು. ಮಾತೃ ಸಮಾನರಿಂದ ಹಿತೋಪದೇಶಗಳು ಸಿಗಲಿದೆ. ಪಾಲಿಗೆ ಬಂದಿದ್ದೇ ಪಂಚಾಮೃತ ಎಂದು ತಿಳಿದುಕೊಳ್ಳಬೇಕು.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ