ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 10 ಆಗಸ್ಟ್ 2022 (07:39 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹೊಸ ವಾತಾವರಣಕ್ಕೆ ಹೊಂದಿಕೊಳ್ಳಲು ಕಷ್ಟವಾಗಬಹುದು. ಸಂಗಾತಿಯ ಕೆಲವೊಂದು ಮಾತುಗಳು ಅಸಹನೆ ತಂದೀತು. ಬಹಳ ದಿನಗಳ ನಂತರ ಬಂಧು ಮಿತ್ರರ ಭೇಟಿಯಾಗುವ ಸಂತೋಷವಿರಲಿದೆ. ತಾಳ್ಮೆಯಿರಲಿ.

ವೃಷಭ: ಆರೋಗ್ಯ ವಿಚಾರದಲ್ಲಿ ಉದಾಸೀನ ಪ್ರವೃತ್ತಿ ಸಲ್ಲದು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಬೇರೆಯವರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ.

ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಬಡ್ತಿಗಾಗಿ ಮೇಲಧಿಕಾರಿಗಳ ಕೃಪಾಕಟಾಕ್ಷ ಪಡೆಯಲು ಪ್ರಯತ್ನಿಸುವಿರಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ.

ಕರ್ಕಟಕ: ವಿಶೇಷ ಅತಿಥಿಗಳ ಸ್ವಾಗತಕ್ಕೆ ಸಿದ್ಧರಾಗಿ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡಲಿದ್ದೀರಿ.

ಸಿಂಹ: ವೃತ್ತಿರಂಗದಲ್ಲಿ ಉನ್ನತಾಧಿಕಾರದ ಲಾಭ ಪಡೆದುಕೊಳ್ಳಲಿದ್ದೀರಿ. ರಾಜಕೀಯ ರಂಗದವರಿಗೆ ಕೀರ್ತಿ ಸಂಪಾದಿಸುವ ಯೋಗ. ಗುರು ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಅನಿವಾರ್ಯ ಕೆಲಸಗಳಿಗಾಗಿ ಪ್ರಯಾಣ ಮಾಡಬೇಕಾಗುತ್ತದೆ.

ಕನ್ಯಾ: ನೂತನ ಮಿತ್ರರ ಸಮಾಗಮದಿಂದ ಮನಸ್ಸಿಗೆ ಸಂತೋಷವಾಗಲಿದೆ. ದಾಂಪತ್ಯದಲ್ಲಿ ಸುಖ ವೃದ್ಧಿಯಾಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಆಸ್ತಿ ವಿಚಾರದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ.

ತುಲಾ: ನಿಮ್ಮ ಉದ್ದೇಶಿತ ಕಾರ್ಯ ನೆರವೇರಲು ಕುಟುಂಬ ಸದಸ್ಯರ ಸಹಕಾರವಿರಲಿದೆ. ಆಸ್ತಿ, ವಾಹನ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ದಾಂಪತ್ಯದಲ್ಲಿ ಮಧ‍್ಯಮ ಸುಖವಿರಲಿದೆ. ಕೋರ್ಟು ಕಚೇರಿ ವ್ಯವಹಾರಗಳಿಗೆ ಮುನ್ನಡೆ ಕಂಡುಬರಲಿದೆ. ಬಂಧು ಮಿತ್ರರ ಸಹಕಾರ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಧನು: ನಿಮ್ಮ ಹಠವಾದಿ ಮನೋಭಾವದಿಂದ ಬೇರೆಯವರಿಗೆ ತೊಂದರೆಯಾದೀತು. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಮಕರ: ಮಹಿಳೆಯರಿಗೆ ಚರ್ಮ ಸಂಬಂಧೀ ಆರೋಗ್ಯ ಸಮಸ್ಯೆ ಕಾಡೀತು. ಸರಕಾರೀ ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಕಟ್ಟಡ ಕಾಮಗಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ.

ಕುಂಭ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ದಿನದಂತ್ಯಕ್ಕೆ ನೆಮ್ಮದಿ ಕಂಡುಬರಲಿದೆ.

ಮೀನ: ವೃತ್ತಿರಂಗದಲ್ಲಿ ಸನ್ಮಿತ್ರರ ಸಹಕಾರದಿಂದ ಏಳಿಗೆ ಕಂಡುಬರಲಿದೆ. ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ಸಿಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ