ಮೇಷ: ಮಕ್ಕಳ ಜೀವನದಲ್ಲಿ ಹೊಸ ಅಧ್ಯಾಯ ಆರಂಭಿಸಿದ ಖುಷಿ ನಿಮ್ಮದಾಗಲಿದೆ. ಆರ್ಥಿಕವಾಗಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕಾಗುತ್ತದೆ. ವ್ಯಾಪಾರ, ವ್ಯವಹಾರದಲ್ಲಿ ಕ್ರಿಯಾತ್ಮಕವಾಗಿ ಯೋಚಿಸಿದರೆ ಲಾಭ ಸಾಧ‍್ಯತೆ.
ವೃಷಭ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಭೀತಿ ಎದುರಾಗಲಿದೆ. ಕೌಟುಂಬಿಕವಾಗಿ ಅಭಿವೃದ್ಧಿ, ನಿಮ್ಮ ಕೆಲಸಗಳಿಗೆ ಪ್ರೋತ್ಸಾಹ ಸಿಗಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಸಕ್ತಿ ಹೆಚ್ಚಲಿದೆ. ತಾಳ್ಮೆಯಿರಲಿ.
ಮಿಥುನ: ನೀವು ಮಾಡಬೇಕೆಂದುಕೊಂಡಿದ್ದ ಕೆಲಸ ಇನ್ನೊಬ್ಬರು ಮಾಡುವಂತಹ ಪರಿಸ್ಥಿತಿಯಾದೀತು. ಇಂದು ಯಾರಿಗೂ ಸಾಲ ಕೊಡಲು ಹೋಗಬೇಡಿ, ಮರಳಿ ಬಾರದು. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.
ಕರ್ಕಟಕ: ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎಂಬ ಸ್ಥಿತಿ ಎದುರಾದೀತು. ಸಹೋದ್ಯೋಗಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕಾಗುತ್ತದೆ. ಹಿರಿಯರ ದೇಹಾರೋಗ್ಯದಲ್ಲಿ ಏರುಪೇರು ಕಂಡುಬಂದೀತು. ಎಚ್ಚರಿಕೆಯಿರಲಿ.
ಸಿಂಹ: ಉನ್ನತ ಸ್ಥಾನದಲ್ಲಿರುವವರಿಗೆ ಸ್ಥಾನ ಉಳಿಸಿಕೊಳ್ಳುವ ಒತ್ತಡ ಕಂಡುಬಂದೀತು. ಮಹಿಳೆಯರಿಗೆ ಚಿನ್ನಾಭರಣಗಳನ್ನು ಖರೀದಿಸುವ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಚಿಂತೆ ಬೇಡ.
ಕನ್ಯಾ: ನಿಮ್ಮ ಬಹುದಿನಗಳ ಕನಸು ಕೈಗೂಡುವ ದಿನ ಹತ್ತಿರ ಬರಲಿದೆ. ಯೋಗ್ಯತೆಗೆ ಅನುಸಾರವಾಗಿ ಖರ್ಚು ಮಾಡುವುದು ಉತ್ತಮ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.
ತುಲಾ: ಉದ್ಯೋಗ, ವ್ಯವಹಾರದಲ್ಲಿ ಚೇತರಿಕೆ ಕಂಡುಬಂದರೂ ಹಿತ ಶತ್ರುಗಳ ಕಾಟ ಚಿಂತೆಗೆ ಕಾರಣವಾಗಲಿದೆ. ನಿಮ್ಮ ವಾಕ್ಚತುರತೆಯಿಂದ ಇತರರ ಗಮನ ಸೆಳೆಯಲಿದ್ದೀರಿ. ನೆರೆಹೊರೆಯವರಿಗೆ ಸಹಾಯ ಮಾಡಿದ ತೃಪ್ತಿ ಕಂಡುಬರುವುದು.
ವೃಶ್ಚಿಕ: ಮನಸ್ಸಿಲ್ಲದಿದ್ದರೂ ಕೆಲವೊಂದು ಕೆಲಸಗಳನ್ನು ಅನಿವಾರ್ಯವಾಗಿ ಮಾಡಬೇಕಾಗುತ್ತದೆ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ವಾಹನ ಖರೀದಿ ಯೋಗ ಸದ್ಯದಲ್ಲೇ ಕೈಗೂಡಲಿದೆ.
ಧನು: ಕೃಷಿ ವ್ಯವಹಾರಕ್ಕೆ ಸಂಬಂಧಿಸಿದ ಕೆಲಸ ಮಾಡುವವರಿಗೆ ಮುನ್ನಡೆಯ ಯೋಗ. ಮಹಿಳೆಯರಿಗೆ ಕೌಟುಂಬಿಕ ವಿಚಾರದಲ್ಲಿ ಜವಾಬ್ಧಾರಿ ಹೆಚ್ಚಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು. ತಾಳ್ಮೆಯಿರಲಿ.
ಮಕರ: ಅರ್ಧಕ್ಕೇ ನಿಂತಿದ್ದ ಕೆಲಸಗಳಿಗೆ ಚಾಲನೆ ನೀಡಲು ಪ್ರಯತ್ನಿಸುವಿರಿ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರುವುದು. ಉನ್ನತ ಸ್ಥಾನಕ್ಕೆ ಪ್ರಯತ್ನಿಸುತ್ತಿದ್ದವರಿಗೆ ತಕ್ಕ ಫಲ ಸಿಗಲಿದೆ. ದೇವತಾ ಪ್ರಾರ್ಥನೆ ಮಾಡಿ.
ಕುಂಭ: ನಿಮ್ಮ ನಿರೀಕ್ಷೆಗೂ ಮೀರಿದ ಧನಾರ್ಜನೆಯಾಗಲಿದೆ. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ನೆರೆಹೊರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ಕಿರು ಸಂಚಾರ ಮಾಡಲಿದ್ದೀರಿ.
ಮೀನ: ಅನಿವಾರ್ಯ ಕಾರಣಗಳಿಗೆ ನಿಮ್ಮ ದೈನಂದಿನ ಕೆಲಸಗಳಲ್ಲಿ ಕೆಲವು ಬದಲಾವಣೆ ಮಾಡಿಕೊಳ್ಳಬೇಕಾಗುತ್ತದೆ. ಆಸ್ತಿ ವಿವಾದಗಳಿಗೆ ಹಿರಿಯರ ಮಧ‍್ಯಸ್ಥಿಕೆ ಪಡೆಯುವುದು ಉತ್ತಮ. ಕೋರ್ಟು ಕಚೇರಿ ಕೆಲಸಗಳಲ್ಲಿ ಜಯ ಸಿಗಲಿದೆ.