ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಂಡುಬರಲಿದೆ. ಅಂದುಕೊಂಡಿದ್ದ ಕೆಲಸಗಳನ್ನು ಪೂರ್ತಿ ಮಾಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಖರ್ಚು ಮಾಡಬೇಕಾಗುತ್ತದೆ. ತಾಳ್ಮೆಯಿರಲಿ.
ವೃಷಭ: ಅಂದುಕೊಂಡಿದ್ದ ಕೆಲಸ ಮಾಡಲು ಮೀನ ಮೇಷ ಎಣಿಸುವ ಸ್ಥಿತಿ ನಿಮ್ಮದಾಗಲಿದೆ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಮಕ್ಕಳಿಗೆ ಉಡುಗೊರೆಗಳ ಮೂಲಕ ಖುಷಿ ನೀಡುವಿರಿ. ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ.
ಮಿಥುನ: ಹಿರಿಯರ ದೇಹಾರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆ ಮೆಟ್ಟಿಲೇರುವ ಸ್ಥಿತಿ ನಿಮ್ಮದಾಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರುವುದು. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಕಂಡುಬರಲಿದೆ.
ಕರ್ಕಟಕ: ನಿಮ್ಮ ಕೈಲಾದ ಕೆಲಸ ಮಾಡುವ ಮೂಲಕ ಇತರರಿಗೆ ಸಹಾಯ ಮಾಡಲಿದ್ದೀರಿ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗುವುದು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
ಸಿಂಹ: ಕೆಲವೊಂದು ವಿಚಾರದಲ್ಲಿ ಅನಗತ್ಯವಾಗಿ ತಲೆಕೆಡಿಸಿಕೊಂಡು ನೆಮ್ಮದಿ ಹಾಳುಮಾಡಿಕೊಳ್ಳುವಿರಿ. ಮಕ್ಕಳ ಸಂತೋಷದಲ್ಲಿ ನೆಮ್ಮದಿ ಕಾಣಲಿದ್ಧೀರಿ. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ.
ಕನ್ಯಾ: ದೇಹಾರೋಗ್ಯದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ದೂರದ ನೆಂಟರ ಆಗಮನ ಸಾಧ್ಯತೆ. ಮಹಿಳೆಯರಿಗೆ ಕೌಟುಂಬಿಕ ವಿಚಾರದಲ್ಲಿ ಜವಾಬ್ಧಾರಿ ಹೆಚ್ಚಾದೀತು. ದೇವತಾ ಪ್ರಾರ್ಥನೆ ಮಾಡಿ.
ತುಲಾ: ನಿರೀಕ್ಷಿತ ಸಮಯಕ್ಕೆ ಧನಾಗಮನವಾಗುವುದರಿಂದ ಅಂದುಕೊಂಡ ಕೆಲಸ ಪೂರ್ತಿ ಮಾಡಲಿದ್ದೀರಿ. ವ್ಯಾಪಾರ, ಉದ್ದಿಮೆಯಲ್ಲಿ ತೊಡಗಿಸಿಕೊಂಡವರಿಗೆ ಸಾಲಗಾರರ ಕಾಟದಿಂದ ಮುಕ್ತಿ. ಕಿರು ಸಂಚಾರ ಮಾಡಲಿದ್ದೀರಿ.
ವೃಶ್ಚಿಕ: ಎಷ್ಟೇ ಎಚ್ಚರಿಕೆಯಿಂದಿದ್ದರೂ ಕೆಲವೊಂದು ಘಟನೆಗಳನ್ನು ತಪ್ಪಿಸಲಾಗದು. ಆಸ್ತಿ ಖರೀದಿ ವಿಚಾರದಲ್ಲಿ ಹಿರಿಯರ ಸಲಹೆಗೆ ಕಿವಿಗೊಡುವುದು ಉತ್ತಮ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಧನು: ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಕೃಷಿಕರಿಗೆ ಕೊಡು-ಕೊಳ್ಳುವ ವ್ಯವಹಾರದಲ್ಲಿ ಲಾಭವಾಗಲಿದೆ. ಅನಗತ್ಯ ವಿಚಾರಗಳಿಗೆ ತಲೆಕಡಿಸಿಕೊಂಡು ನೆಮ್ಮದಿ ಹಾಳುಮಾಡಿಕೊಳ್ಳಬೇಡಿ.
ಮಕರ: ನಿಮ್ಮ ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಬಹಳ ದಿನಗಳ ನಂತರ ಬಂಧು ಮಿತ್ರರ ಭೇಟಿಯಾಗಲಿದ್ದೀರಿ. ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ.
ಕುಂಭ: ಹೊಸ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಸೂಕ್ತ ಫಲ ಲಭಿಸದೇ ನಿರಾಸೆಯಾದೀತು. ಸ್ವಯಂ ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರಲಿದೆ. ಕಟ್ಟಡ ಕಾಮಗಾರಿ ಕೆಲಸ ಮುಂದೂಡಲಿದ್ದೀರಿ. ತಾಳ್ಮೆಯಿರಲಿ.
ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಭೀತಿ. ಕೋರ್ಟು ಕಚೇರಿ ಕೆಲಸಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಕೌಟುಂಬಿಕವಾಗಿ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸುವಿರಿ. ದೇವತಾ ಪ್ರಾರ್ಥನೆ ಮಾಡಿ.