ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 30 ಆಗಸ್ಟ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅಭಿವೃದ್ಧಿ  ವಿಚಾರಗಳಲ್ಲಿ ಹಠವಾದೀ ಮನೋಭಾವ ಬಿಟ್ಟು ಕೆಲಸ ಮಾಡಬೇಕಾಗುತ್ತದೆ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಮನೆ ವಿಚಾರಕ್ಕೆ ಮೂರನೆಯವರು ತಲೆ ಹಾಕಲು ಅವಕಾಶ ಕೊಡಬೇಡಿ.

ವೃಷಭ: ನೀವು ಇದುವರೆಗೆ ಹೇಳದೇ ಉಳಿದಿದ್ದ ಗುಟ್ಟೊಂದು ಆಪ್ತರ ಎದುರು ಬಯಲಾಗಲಿದೆ. ಕಾರ್ಯಕ್ಷೇತ್ರದಲ್ಲಿ ಅಧಿಕ ಓಡಾಟ ನಡೆಸಬೇಕಾದೀತು. ವೈಯಕ್ತಿಕ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ದಿನದಂತ್ಯಕ್ಕೆ ನೆಮ್ಮದಿ.

ಮಿಥುನ: ಎಷ್ಟೇ ತೊಂದರೆಗಳಿದ್ದರೂ ಕುಟುಂಬ ಸದಸ್ಯರ ಸಹಕಾರವಿರುವುದರಿಂದ ಆತ್ಮವಿಶ್ವಾಸ ಬರುವುದು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಕರ್ಕಟಕ: ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪರವೂರಿಗೆ ಪ್ರಯಾಣ ಬೆಳೆಸುವ ಅನಿವಾರ್ಯತೆ ಎದುರಾಗಲಿದೆ. ಕುಟುಂಬ ಸದಸ್ಯರ ಪ್ರೋತ್ಸಾಹ, ಸಹಕಾರ ಸಿಗಲಿದೆ. ಹಿರಿಯರು ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ.

ಸಿಂಹ: ಮಹಿಳೆಯರಿಗೆ ಅಡುಗೆ ಮನೆ ಕೆಲಸದ ನಡುವೆ ಸಣ್ಣ ಪುಟ್ಟ ಅಪಘಾತಗಳಾದೀತು. ಉದ್ಯೋಗ ಕ್ಷೇತ್ರದಲ್ಲಿ ಮೇಲ್ವರ್ಗದ ಅಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ.

ಕನ್ಯಾ: ನಿಮ್ಮ ಕೈಲಾಗದು ಎಂದುಕೊಂಡಿದ್ದ ಕೆಲಸ ಇಂದು ಸುಗಮವಾಗಿ ನೆರವೇರಿದ ಖುಷಿ ನಿಮ್ಮದಾಗುವುದು. ಯಂತ್ರೋಪಕರಣಗಳ ರಿಪೇರಿ ಕೆಲಸಗಳಿಗಾಗಿ ಖರ್ಚು ವೆಚ್ಚಗಳಾದೀತು. ಅನಗತ್ಯ ಚಿಂತೆ ಬೇಡ.

ತುಲಾ: ನಿಮ್ಮಲ್ಲಿರುವ ಸುಪ್ತ ಪ್ರತಿಭೆಗಳು ಅನಾವರಣಗೊಳ್ಳಲಿದೆ. ಕಲೆ, ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾದೀತು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ವೃಶ್ಚಿಕ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ದೂರದ ಮಿತ್ರರ ಸಮಾಗಮವಾಗಲಿದೆ. ಹಣಕಾಸಿನ ಆದಾಯಕ್ಕೆ ತೊಂದರೆಯಾಗದು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರಲಿದೆ.

ಧನು: ಮನಸ್ಸಿನಲ್ಲಿರುವ ಯೋಚನೆಗಳು ಚಿಂತೆಗೆ ಕಾರಣವಾದೀತು. ಸಂಗಾತಿಯೊಂದಿಗೆ ಸಮಾಲೋಚನೆ ನಡೆಸಿ. ಮಕ್ಕಳ ವಿಚಾರದಲ್ಲಿ ಸಂತೋಷದ ವಾರ್ತೆ ಕೇಳಿಬರುವುದು. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಚಿಂತೆ ಬೇಡ.

ಮಕರ: ಕಚೇರಿ ಕೆಲಸಗಳ ನಿಮಿತ್ತ ಓಡಾಟ ನಡೆಸಬೇಕಾದೀತು. ಮಹಿಳೆಯರಿಗೆ ಮಂಗಲ ವಸ್ತ್ರ ಖರೀದಿ ಯೋಗ. ಹಣಕಾಸಿನ ಹರಿವಿಗೆ ತೊಂದರೆಯಾಗದು. ದುಂದು ವೆಚ್ಚಗಳಿಗೆ ಕಡಿವಾಣವಿರಲಿ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಹೊಸ ಅಭಿವೃದ್ಧಿ ಕೆಲಸಗಳಿಗೆ ಕೈಹಾಕಲು ಇದು ಸಕಾಲ. ಇಷ್ಟಮಿತ್ರರನ್ನು ಬಹಳ ದಿನಗಳ ನಂತರ ಭೇಟಿಯಾದ ಸಂತೋಷ ಸಿಗಲಿದೆ. ಪ್ರೇಮಿಗಳ ಪಾಲಿಗೆ ಶುಭ ದಿನವಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಮೀನ: ನಿಮ್ಮ ಬಗ್ಗೆ ಪ್ರೀತಿ, ಕಾಳಜಿ ಮಾಡುವವರ ಮನಸ್ಸಿಗೆ ನೋವುಂಟು ಮಾಡುವ ಕೆಲಸ ಮಾಡಬೇಡಿ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ