ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶನಿವಾರ, 3 ಸೆಪ್ಟಂಬರ್ 2022 (07:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹಿರಿಯ ಅಧಿಕಾರಿಗಳೊಂದಿಗೆ ಸಂಯಮದಿಂದ ವರ್ತಿಸಿ. ಮಾತಿನ ಮೇಲೆ ನಿಗಾ ಇರಲಿ. ಕೌಟುಂಬಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಾಗಿಲ್ಲ. ದಿನದಂತ್ಯಕ್ಕೆ ನೆಮ್ಮದಿಯಾಗಲಿದೆ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಮೆಚ್ಚುಗೆ ಪಡೆಯಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮಿಥುನ: ನಿಮ್ಮ ಕೆಲಸ ಕಾರ್ಯಗಳಲ್ಲಿ ಕುಟುಂಬದವರ ಪ್ರೋತ್ಸಾಹವಿರಲಿದೆ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರಲಿದೆ. ವ್ಯಾಪಾರಿ ವರ್ಗದವರಿಗೆ ಉನ್ನತಿಯ ಯೋಗ.

ಕರ್ಕಟಕ: ಆಪ್ತೇಷ್ಟರಿಗೆ ನಿಮ್ಮ ಮೇಲಿರುವ ಸದಭಿಪ್ರಾಯ ನೂರ್ಮಡಿಯಾಗುವಂತಹ ಕೆಲಸ ಮಾಡಲಿದ್ದೀರಿ. ಹೊಸದಾಗಿ ಮದುವೆಯಾಗಿರುವವರಿಗೆ ಸುಂದರ ಕ್ಷಣ ಕಳೆಯುವ ಯೋಗ.  ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ಸಿಂಹ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವಾಗ ಕೆಲವೊಂದು ಅಡೆತಡೆಗಳು ಬಂದೀತು. ಸಾಂಸಾರಿಕವಾಗಿ ಸುಖ, ಸಮೃದ್ಧಿ ವೃದ್ಧಿಯಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಕನ್ಯಾ: ಹಲವು ರೀತಿಯ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಮಕ್ಕಳಿಗೆ ಉಡುಗೊರೆಗಳ ಮೂಲಕ ಸಂತೋಷ ನೀಡಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಇಷ್ಟ ಭೋಜನ ಮಾಡುವ ಯೋಗ.

ತುಲಾ: ನಾಲಿಗೆ ಚಪಲದ ಮೇಲೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದಾರೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಆಸ್ತಿ, ವಾಹನ ಖರೀದಿ ಯೋಗ ಸದ್ಯದಲ್ಲೇ ಕೂಡಿಬರಲಿದೆ.. ಪಾಲು ಬಂಡವಾಳ ಹೂಡಿಕೆಯಲ್ಲಿ ಲಾಭ ಕಂಡುಕೊಳ್ಳಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ದಿನದಂತ್ಯಕ್ಕೆ ಸಂತೋಷದ ಸುದ್ದಿ.

ಧನು: ದೈವಾನುಕೂಲದಿಂದ ಇಂದು ನೀವು ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಕೋರ್ಟು ಕಚೇರಿ ಕೆಲಸಗಳಲ್ಲಿ ಮುನ್ನಡೆ ಕಂಡುಬರಲಿದೆ. ಪ್ರೀತಿ, ಪ್ರೇಮ ಸಂಬಂಧಗಳಲ್ಲಿ ಬಿರುಕು ಮೂಡದಂತೆ ಎಚ್ಚರಿಕೆ ವಹಿಸಿ.

ಮಕರ: ದೂರದ ವ್ಯವಹಾರಗಳಿಂದ ಧನಾಗಮನವಾಗಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕುವ ಮುನ್ನ ಪರಾಮರ್ಶಿಸುವುದು ಉತ್ತಮ. ಆತುರದ ನಿರ್ಧಾರಗಳಿಂದ ಕೈ ಸುಟ್ಟುಕೊಳ್ಳಬೇಡಿ.

ಕುಂಭ: ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದೆ. ನಯವಂಚಕರ ಮಾತಿಗೆ ಮರಳುಗಾದಿರಿ. ಮನೆಗೆ ಅನಿರೀಕ್ಷಿತವಾಗಿ ನೆಂಟರಿಷ್ಟರ ಆಗಮನವಾಗಲಿದೆ.

ಮೀನ: ದೇವತಾ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುವುದು. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಚಿಂತೆ ಬೇಡ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ