ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 4 ಸೆಪ್ಟಂಬರ್ 2022 (07:21 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಕುಟುಂಬ ಸದಸ್ಯರೊಂದಿಗೆ ಸಮಾಧಾನದಿಂದ ಕುಳಿತು ಮಾತನಾಡಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗವಿದೆ. ಆದರೆ ದೇಹಾರೋಗ್ಯದ ಸಮಸ್ಯೆಗಳು ಚಿಂತೆಗೀಡು ಮಾಡಲಿದೆ.

ವೃಷಭ: ವ್ಯವಾಹರದಲ್ಲಿ ಅಭಿವೃದ್ಧಿಗಾಗಿ ಕೆಲವೊಂದು ಕಟ್ಟುನಿಟ್ಟಿನ ತೀರ್ಮಾನ ಕೈಗೊಳ್ಳಲಿದ್ದೀರಿ. ಮನಸ್ಸಿನಲ್ಲಿರುವ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವಿರಿ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.

ಮಿಥುನ: ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗಲಿದ್ಧೀರಿ. ಬಹಗಳ ದಿನಗಳ ನಂತರ ಬಂಧುಮಿತ್ರರನ್ನು ಭೇಟಿಯಾಗುವ ಯೋಗ. ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ.

ಕರ್ಕಟಕ: ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಆಸ್ತಿ ವಿವಾದಗಳ ಇತ್ಯರ್ಥ ಮಾಡಲು ಮುಂದಾಗುವಿರಿ. ಪ್ರೀತಿ ಪಾತ್ರರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ.

ಸಿಂಹ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಶೀಘ್ರದಲ್ಲೇ ಚಾಲನೆ ನೀಡಲಿದ್ದೀರಿ. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.

ಕನ್ಯಾ: ಕಾರ್ಯರಂಗದಲ್ಲಿ ನಿಮ್ಮ ಏಳಿಗೆ ಆತ್ಮೀಯರ ಸಂತೋಷಕ್ಕೆ ಕಾರಣವಾಗಲಿದೆ. ಕೌಟುಂಬಿಕವಾಗಿ ಅಭಿವೃದ್ಧಿ ನೆಮ್ಮದಿ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ದೇವತಾ ಪ್ರಾರ್ಥನೆ ಮಾಡಿ.

ತುಲಾ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಬಂಧು-ಬಳಗದವರ ಭೇಟಿ ಮನಸ್ಸಿನ ಸಂತೋಷ ವೃದ್ಧಿಸಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಆತುರಕ್ಕೆ ಬೀಳಬೇಡಿ. ಸಂಗಾತಿಯ ಸಲಹೆ ಪಾಲಿಸುವುದು ಉತ್ತಮ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ.

ಧನು: ಯಾವುದೇ ಕೆಲಸಕ್ಕೂ ಮುನ್ನ ಹಿರಿಯರ ಆಶೀರ್ವಾದ ಪಡೆಯುವುದನ್ನು ಮರೆಯಬೇಡಿ. ಪಾಲದಾರಿಕೆ ವ್ಯವಹಾರಲ್ಲಿ ಪ್ರಗತಿ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ದಿನದಂತ್ಯಕ್ಕೆ ಸಂತೋಷದ ಸುದ್ದಿ.

ಮಕರ: ಎಷ್ಟೋ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋ಼ ನಿಮ್ಮದಾಗಲಿದೆ. ನಿಮ್ಮ ಮನೋಭಿಲಾಷೆಗಳು ಈಡೇರಲಿವೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾದೀತು. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಹೊಸ ವ್ಯವಹಾರಗಳಲ್ಲಿ ತೊಡಗಿಸಿಕೊಳ್ಳಲು ಇದು ಸಕಾಲ. ಕೋರ್ಟು ಕಚೇರಿ ವ್ಯವಹಾರಗಳಿಗೆ ಸಿದ್ಧತೆ ನಡೆಸಲಿದ್ದೀರಿ. ಸಂಗಾತಿಯ ದೇಹಾರೋಗ್ಯದಲ್ಲಿ ಏರುಪೇರಾದೀತು. ಖರ್ಚು ವೆಚ್ಚಗಳಿಗೆ ಸಿದ್ಧರಾಗಿ.

ಮೀನ: ಹೊಸ ವಿಷಯಗಳನ್ನು ಕಲಿಯುವ ಆಸಕ್ತಿ ನಿಮ್ಮದಾಗಲಿದೆ. ಮಕ್ಕಳ ಭವಿಷ್ಯಕ್ಕಾಗಿ ಕೆಲವೊಂದು ಯೋಜನೆ ರೂಪಿಸಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗುವುದು. ತಾಳ್ಮೆಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ