ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 3 ಅಕ್ಟೋಬರ್ 2022 (08:37 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು. ರಾಜಕೀಯ ರಂಗದಲ್ಲಿರುವವರಿಗೆ ಸ್ಥಾನ ಮಾನ ವೃದ್ಧಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಆತ್ಮೀಯರನ್ನು ಭೇಟಿ ಮಾಡಿದ ಸಂತೋಷ ನಿಮ್ಮದಾಗಲಿದೆ.

ವೃಷಭ: ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳಲಿದ್ದೀರಿ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ ನಿಮ್ಮದಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಹಳೆಯ ಮಿತ್ರರನ್ನು ಬಹಳ ದಿನಗಳ ನಂತರ ಭೇಟಿ ಮಾಡಿದ ಸಂತೋಷ ನಿಮ್ಮದಾಗಲಿದೆ. ತಾಂತ್ರಿಕ ವೃತ್ತಿಯಲ್ಲಿರುವವರಿಗೆ ಬಿಡುವಿನ ಖುಷಿ ಸಿಗುವುದು. ಆರ್ಥಿಕವಾಗಿ ದುಂದು ವೆಚ್ಚಗಳಿಗೆ ಕಡಿವಾಣ ಹಾಕಬೇಕಾಗುತ್ತದೆ.

ಕರ್ಕಟಕ: ಯಾವುದೇ ನಿರ್ಧಾರ ಕೈಗೊಳ್ಳುವ ಮುನ್ನ ಆಪ್ತರೊಂದಿಗೆ ಚರ್ಚಿಸಿ ಮುನ್ನಡೆಯುವುದು ಉತ್ತಮ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ದೂರ ಸಂಚಾರಕ್ಕೆ ಸಿದ್ಧತೆ ಮಾಡಲಿದ್ದೀರಿ.

ಸಿಂಹ: ಮನಸ್ಸಿನಲ್ಲಿರುವ ಮಾತುಗಳನ್ನು ಪ್ರೀತಿ ಪಾತ್ರರ ಮುಂದೆ ಹೇಳಿಕೊಳ್ಳಲು ಅವಕಾಶ ಸಿಗಲಿದೆ. ಸ್ವಯಂ ವೃತ್ತಿಯವರಿಗೆ ಲಾಭವಾಗುವುದು. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ತಾಳ್ಮೆಯಿರಲಿ.

ಕನ್ಯಾ: ಅಂದುಕೊಂಡ ಕೆಲಸ ಪೂರ್ತಿ ಮಾಡಲು ಕೆಲವೊಂದು ಅಡೆತಡೆಗಳು ಎದುರಾದೀತು. ಕಾರ್ಯರಂಗದಲ್ಲಿ ಆಪ್ತರೊಂದಿಗೆ ಸಂಘರ್ಷವಾಗುವ ಸಾಧ‍್ಯತೆ. ಮಾತಿನ ಮೇಲೆ ನಿಗಾ ಇರಲಿ. ದಿನದಂತ್ಯಕ್ಕೆ ನೆಮ್ಮದಿ.

ತುಲಾ: ಆಪ್ತರ ಕಷ್ಟಗಳಿಗೆ ಸ್ಪಂದಿಸುವ ನಿಮ್ಮ ಗುಣ ಇತರರ ಮೆಚ್ಚುಗೆಗೆ ಪಾತ್ರವಾಗಲಿದೆ. ಇನ್ನೊಬ್ಬರ ಜವಾಬ್ಧಾರಿ ನಿಮ್ಮ ಹೆಗಲಿಗೇರಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಎಷ್ಟೇ ಎಚ್ಚರಿಕೆಯಿಂದ ಕೆಲಸ ಮಾಡಿದರೂ ಕೆಲವೊಂದು ಅನಾಹುತಗಳನ್ನು ನಿಮ್ಮಿಂದ ತಪ್ಪಿಸಲಾಗದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ.

ಧನು: ಸ್ವಯಂ ವೃತ್ತಿಯವರಿಗೆ ಆದಾಯ ವೃದ್ಧಿಗೆ ಅವಕಾಶ ಸಿಗಲಿದೆ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಕ್ಕ ಸಂತೋಷವಿರಲಿದೆ. ಭವಿಷ್ಯದ ದೃಷ್ಟಿಯಿಂದ ಕೆಲವೊಂದು ನಿರ್ಧಾರ ತೆಗೆದುಕೊಳ್ಳಲು ಸೂಕ್ತ ಸಮಯ.

ಮಕರ: ಹಿಂದೆ ಮಾಡಿದ ತಪ್ಪುಗಳ ಬಗ್ಗೆ ಯೋಚಿಸುತ್ತಾ ಪಶ್ಚಾತ್ತಾಪ ಪಡುವುದರಲ್ಲಿ ಅರ್ಥವಿಲ್ಲ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ನೂತನ ಗೃಹ ಪ್ರವೇಶ ಮಾಡಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕುಂಭ: ಹಿಂದೆ ಇದ್ದ ಆರೋಗ್ಯ ಸಮಸ್ಯೆ ಮತ್ತೆ ಕಾಣಿಸಿಕೊಳ್ಳುವ ಸಂಭವ. ಆದರೂ ಆತ್ಮೀಯರು ನಿಮ್ಮ ಕಷ್ಟಗಳಿಗೆ ನೆರವಾಗಲಿದ್ದಾರೆ. ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿವೆ.

ಮೀನ: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆಯ ಯೋಗವಿದೆ. ಪಾಲುದಾರಿಕೆ ವ್ಯವಹಾರದಲ್ಲಿ ಏಳಿಗೆ ಕಂಡುಬರುವುದು. ಸುದೀರ್ಘ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ವಿಶೇಷ ವ್ಯಕ್ತಿಗಳನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ.

 

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ