ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 6 ಅಕ್ಟೋಬರ್ 2022 (07:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಕಾಲ ಕಳೆಯುವ ಯೋಗ ಕೂಡಿಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ. ಕೌಟುಂಬಿಕವಾಗಿ ಹೆಚ್ಚಿನ ಹೊಣೆಗಾರಿಕೆ ಹೆಗಲಿಗೇರಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ವ್ಯಾಪಾರಿಗಳಿಗೆ ಆರ್ಥಿಕವಾಗಿ ಪ್ರಗತಿ ಕಂಡುಬರುವುದು.

ಮಿಥುನ: ದಾಂಪತ್ಯದಲ್ಲಿ ಹೊಂದಾಣಿಕೆಯ ಕೊರತೆ ಕಂಡುಬರಲಿದೆ. ಕಾರ್ಯರಂಗದಲ್ಲಿ ಹಿತಶತ್ರುಗಳ ಕಾಟ ಕಂಡುಬಂದೀತು. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಲಿದ್ದೀರಿ. ದಿನದಂತ್ಯಕ್ಕೆ ನೆಮ್ಮದಿ.

ಕರ್ಕಟಕ: ಸಾಂಸಾರಿಕವಾಗಿ ಅಭಿವೃದ್ಧಿ ಕಂಡುಬರಲಿದೆ. ಮನೆಗೆ ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ. ಮನೆಯಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ಪಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಗಣ್ಯ ವ್ಯಕ್ತಿಗಳ ಭೇಟಿ ಮಾಡಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು.

ಕನ್ಯಾ: ಹೊಸದಾಗಿ ಉದ್ಯೋಗ ಆರಂಭಿಸಿದ್ದರೆ ಸವಾಲುಗಳು ಎದುರಾದೀತು. ಸಹೋದ್ಯೋಗಿಗಳ ಸಹಕಾರ ಕಂಡುಬರಲಿದೆ. ಆರ್ಥಿಕವಾಗಿ ಹಣ ಗಳಿಕೆಗೆ ಅನ್ಯ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಮಕ್ಕಳಿಂದ ಸಂತೋಷ ಸಿಗುವುದು.

ತುಲಾ: ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಲಾಭ ಮಾಡಿಕೊಳ್ಳಲು ದಾರಿ ಕಂಡುಕೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡಬೇಡಿ.

ವೃಶ್ಚಿಕ: ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ಸನ್ಮಿತ್ರರ ಸಹಾಯ ಅನುಕೂಲವಾಗಲಿದೆ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸು ಹಾತೊರೆಯುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.

ಧನು: ಬೇರೆಯವರ ಕಷ್ಟಕ್ಕೆ ಸ್ಪಂದಿಸುವ ನಿಮ್ಮ ಗುಣ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಹೊಸ ಬಗೆಯ ಯೋಚನೆಗಳು ನಿಮ್ಮ ಕೆಲಸಕ್ಕೆ ಸಹಾಯವಾಗಲಿದೆ. ವಿದ್ಯಾರ್ಥಿಗಳು ಶಿಕ್ಷಕ ವೃಂದದವರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ.

ಮಕರ: ಮನಸ್ಸಿನಲ್ಲಿರುವ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲು ಅವಕಾಶ ಸಿಗಲಿದೆ. ಸಂತಾನ ಹೀನ ದಂಪತಿಗಳು ದೇವರ ಮೊರೆ ಹೋಗಲಿದ್ದಾರೆ. ಹಿರಿಯರೊಂದಿಗೆ ಅನಗತ್ಯ ವಾದ ವಿವಾದ ಬೇಡ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಸಸರಕಾರಿ ನೌಕರರಿಗೆ ಉದ್ಯೋಗದಲ್ಲಿ ಹಿನ್ನಡೆಯಾದೀತು. ನಿಮ್ಮ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಿ. ಸಂಗಾತಿಗೆ ಅನಿರೀಕ್ಷಿತ ಉಡುಗೊರೆ ಮೂಲಕ ಸಂತೋಷ ಕೊಡಲಿದ್ದೀರಿ. ಅನಗತ್ಯ  ಚಿಂತೆ ಬೇಡ.

ಮೀನ: ನೀವು ಮಾಡುವ ನಿರ್ಧಾರಗಳಿಗೆ ಮನೆಯವರ ಬೆಂಬಲವಿರಲಿದೆ. ನಿಮ್ಮಿಂದ ಬೇರೆಯವರಿಗೆ ಉಪಕಾರವಾಗುವ ಸಂದರ್ಭಗಳು ಬರಲಿವೆ. ವಾಹನ ಖರೀದಿಸುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ತಾಳ್ಮೆಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ