ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 12 ಅಕ್ಟೋಬರ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹೊಸದಾಗಿ ಪರಿಚಿತರಾಗುವ ವ್ಯಕ್ತಿಗಳಿಂದ ನಿಮಗೆ ಅನುಕೂಲವಾದೀತು. ನಂಬಿದವರಿಗೆ ವಂಚನೆ ಮಾಡಬೇಡಿ. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಗೆ ಮುಂದಾಗಲಿದ್ದೀರಿ. ಕುಲದೇವರ ಪ್ರಾರ್ಥನೆ ಮಾಡಲಿದ್ದೀರಿ.

ವೃಷಭ: ದೇವರ ಮೇಲಿನ ನಿಮ್ಮ ಭಕ್ತಿ ಭಾವ ಹೆಚ್ಚಾಗಲಿದೆ. ಬಹಳ ದಿನಗಳಿಂದ ಬಾಕಿಯಿದ್ದ ಕೆಲಸ ಪೂರ್ತಿ ಮಾಡಲಿದ್ದೀರಿ. ಮಕ್ಕಳ ಸಂತೋಷಕ್ಕಾಗಿ ಅನಿರೀಕ್ಷಿತ ಉಡುಗೊರೆ ನೀಡಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು.

ಮಿಥುನ: ಹೊಸದಾಗಿ ವ್ಯಾಪಾರ, ಉದ್ದಿಮೆ ಪ್ರಾರಂಭಿಸುವುದಿದ್ದರೆ ಇದು ಸಕಾಲ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಸಿಗಲಿದೆ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ.

ಕರ್ಕಟಕ: ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮಕ್ಕೆ ಹೋಗುವ ಯೋಗ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳು ಬಂದೀತು. ದಾಯಾದಿ ಕಲಹಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಸಿಂಹ: ಪರರ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಂಡುಬರಲಿದೆ. ದೂರದ ಪ್ರಯಾಣಕ್ಕೆ ಸಿದ್ಧತೆ ನಡೆಸಲಿದ್ದೀರಿ. ಆರೋಗ್ಯದ ಬಗ್ಗೆ ಅಸಡ್ಡೆ ಮಾಡಬೇಡಿ. ದೇವತಾ ಕಾರ್ಯಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ.

ಕನ್ಯಾ: ನಿಮಗೆ ಅತ್ಯಂತ ಆಪ್ತರೆನಿಸಿಕೊಂಡಿದ್ದವರಿಂದಲೇ ನೋವಾದೀತು. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಖುಷಿ ತರಲಿದೆ. ಭೂಮ್ಯಾದಿ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ವಿದ್ಯಾರ್ಜನೆಗಾಗಿ ಪರವೂರಿಗೆ ಸಂಚಾರ ಮಾಡಬೇಕಾದ ಅನಿವಾರ್ಯತೆ ಎದುರಾಗಲಿದೆ. ಬಂಧು ಮಿತ್ರರಿಂದ ಪ್ರೋತ್ಸಾಹ ಕಂಡುಬರಲಿದೆ. ಮಾತೃಸಮಾನರ ಆರೋಗ್ಯದಲ್ಲಿ ವ್ಯತ್ಯಯವಾದೀತು. ತಾಳ್ಮೆಯಿರಲಿ.

ವೃಶ್ಚಿಕ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಭೀತಿ. ಅಂದುಕೊಂಡ ಸಮಯಕ್ಕೆ ಕೆಲಸ ಪೂರ್ತಿ ಮಾಡಲಾಗದೇ ನಿರಾಸೆಯಾದೀತು. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬಂದೀತು.

ಧನು: ನಿಮ್ಮ ಕೆಲವೊಂದು ಮಾತುಗಳು ಸಂಗಾತಿಯ ಅಸಮಾಧಾನಕ್ಕೆ ಗುರಿಯಾದೀತು. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಮನಸ್ಸಿಗೆ ಖುಷಿ ಕೊಡುವ ಕೆಲಸಗಳಲ್ಲಿ ನಿಮ್ಮನ್ನು ನೀವು ತೊಡಗಿಸಿಕೊಳ್ಳಲಿದ್ದೀರಿ.

ಮಕರ: ಕಾರ್ಯರಂಗದಲ್ಲಿ ಅಡೆತಡೆಗಳು ಎದುರಾದರೂ ಅಂತಿಮ ಜಯ ನಿಮ್ಮದಾಗುವುದು. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯುವುದು.

ಕುಂಭ: ಕೌಟುಂಬಿಕವಾಗಿ ಸಂತೋಷದ ವಾತಾವರಣವಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚ ಮಾಡಲಿದ್ದೀರಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ದೇವತಾ ಪ್ರಾರ್ಥನೆ ಮಾಡಲಿದ್ದೀರಿ.

ಮೀನ: ದೇಹಾರೋಗ್ಯದ ಬಗ್ಗೆ ಉದಾಸೀನತೆ ಬೇಡ. ನಿಮ್ಮ ವಾಕ್ಚತುರತೆಯಿಂದ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ