ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 21 ಅಕ್ಟೋಬರ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವಿದ್ಯಾರ್ಥಿಗಳಿಗೆ, ಅಧ್ಯಯನಶೀಲರಿಗೆ ಉನ್ನತಿಯ ಯೋಗ. ಹೊಸದಾಗಿ ಮದುವೆಯಾಗಿದ್ದವರಿಗೆ ಹೊಂದಾಣಿಕೆಯ ಕೊರತೆ ಕಂಡುಬಂದೀತು. ಕಾರ್ಯರಂಗದಲ್ಲಿ ಮೇಲಧಿಕಾರಿಗಳೊಂದಿಗೆ ಅನಗತ್ಯ ಸಂಘರ್ಷವಾಗದಂತೆ ಎಚ್ಚರಿಕೆ ವಹಿಸಿ.

ವೃಷಭ: ಹಣಕಾಸಿನ ವಿಚಾರದಲ್ಲಿ ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ವ್ಯಾಪಾರೀ ವರ್ಗದವರಿಗೆ ಸಾಲಗಾರರ ಕಾಟದಿಂದ ಮುಕ್ತಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ. ತಾಳ್ಮೆಯಿರಲಿ.

ಮಿಥುನ: ದಂಪತಿಗಳು ಪರಸ್ಪರ ಜವಾಬ್ಧಾರಿ ಹಂಚಿಕೊಳ್ಳಲಿದ್ದಾರೆ. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬಾರದೇ ನಿರಾಸೆಯಾದೀತು.

ಕರ್ಕಟಕ: ಕೆಲಸ, ಕಾರ್ಯದ ಒತ್ತಡದಲ್ಲಿ ಸಂಗಾತಿಯ ಕೋಪಕ್ಕೆ ಗುರಿಯಾಗಬೇಕಾದೀತು. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಇಷ್ಟಮಿತ್ರರನ್ನು ಬಹಳ ದಿನಗಳ ನಂತರ ಭೇಟಿಯಾಗುವ ಯೋಗ.

ಸಿಂಹ: ರಾಜಕೀಯ ರಂಗದಲ್ಲಿರುವವರಿಗೆ ಅಪವಾದದ ಭೀತಿ. ಮಾತಿನ ಮೇಲೆ ನಿಗಾ ಇರಲಿ. ಮಹಿಳೆಯರಿಗೆ ಅನಿರೀಕ್ಷಿತ ಮೂಲಗಳಿಂದ ಧನಾಗಮನ. ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಗಣ್ಯ ವ್ಯಕ್ತಿಗಳ ಸಂಪರ್ಕದಿಂದ ನಿಮ್ಮ ಕಾರ್ಯಸಾಧನೆಗೆ ಅನುಕೂಲವಾಗಲಿದೆ. ಸಾಂಸಾರಿಕಾ ಕ್ಷೇತ್ರದಲ್ಲಿ ಅಭಿವೃದ್ಧಿ ಕಂಡುಬರಲಿದೆ. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ತುಲಾ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾಗುವ ಸಂತೋಷ ನಿಮ್ಮದಾಗುವುದು. ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ದೂರ ಪ್ರಯಾಣ ಸಂಭವ. ನಿಮ್ಮ ಇತಿಮಿತಿಗಳಿಗೆ ತಕ್ಕಂತೆ ಯೋಜನೆ ರೂಪಿಸಬೇಕಾಗುತ್ತದೆ. ಕ್ರಿಯಾಶೀಲರಾಗುವುದರಿಂದ ಮನಸ್ಸಿನ ದುಃಖ ಮರೆಯಲಿದ್ದೀರಿ. ವಿದ್ಯಾರ್ಥಿಗಳಿಗೆ ಮುನ್ನಡೆ ಕಂಡುಬರುವುದು.

ಧನು:  ಮಕ್ಕಳ ವಿಚಾರದಲ್ಲಿ ಸಂತೋಷದ ವಾರ್ತೆ ಕೇಳಿಬರಲಿದೆ. ಸಂಗಾತಿಯೊಂದಿಗೆ ಸಹನೆಯಿಂದ ವರ್ತಿಸಿ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ತೋರಿಬಂದೀತು. ಹಿರಿಯರಿಗೆ ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗ ಕೂಡಿಬರಲಿದೆ.

ಮಕರ: ಆಸ್ತಿ ವಿಚಾರದಲ್ಲಿ ನಿರೀಕ್ಷಿತ ಮುನ್ನಡೆ ಕಂಡುಬರುವುದು. ಪಾಲುದಾರಿಕೆ ಕ್ಷೇತ್ರದಲ್ಲಿ ಲಾಭ ಮಾಡಿಕೊಳ್ಳುವಿರಿ. ಸಂಗಾತಿಯ ಬಹಳ ದಿನಗಳ ಬೇಡಿಕೆ ಪೂರೈಸಲಿದ್ದೀರಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕುಂಭ: ಬಹಳ ದಿನಗಳ ನಂತರ ಆತ್ಮೀಯರನ್ನು ಭೇಟಿಯಾಗುವ ಯೋಗ ನಿಮ್ಮದಾಗಲಿದೆ. ದೂರ ಪ್ರಯಾಣದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಚಿಂತೆ ಬೇಡ.

ಮೀನ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೊಂದಿಗೆ ತಾಳ್ಮೆ ಕಳೆದುಕೊಳ್ಳುವ ಸಂದರ್ಭ ಬಂದೀತು. ಮಾತಿನ ಮೇಲೆ ನಿಗಾ ಇರಲಿ. ಸಾಂಸಾರಿಕವಾಗಿ ಸಂತೋಷವಿರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ