ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಭಾನುವಾರ, 30 ಅಕ್ಟೋಬರ್ 2022 (08:10 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಮಾನ ಮನಸ್ಕರೊಂದಿಗೆ ಸೇರುವ ಯೋಗ. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಲವು ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ಸಿಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಲಿದ್ದೀರಿ.

ವೃಷಭ: ನಿಮಗೆಂದೇ ಬಗೆದ ವಸ್ತು, ವ್ಯಕ್ತಿಗಳು ಸಿಕ್ಕೇ ಸಿಗುತ್ತಾರೆ. ಅನಗತ್ಯ ಚಿಂತೆ ಬೇಡ. ಕಾರ್ಯರಂಗದಲ್ಲಿ ಶತ್ರು ಪೀಡೆ ನಾಶವಾಗಲಿದೆ. ಕುಟುಂಬ ಸದಸ್ಯರೊಂದಿಗೆ ಸಂತೋಷದ ಸಮಯ ಕಳೆಯಲಿದ್ದೀರಿ. ದೇವತಾ ಪ್ರಾರ್ಥನೆ ಮರೆಯದಿರಿ.

ಮಿಥುನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ವ್ಯಾವಹಾರಿಕವಾಗಿ ಆರ್ಥಿಕ ಲಾಭ ಕಂಡುಬಂದೀತು. ಹಿರಿಯರಿಗೆ ದಾನ ಧರ್ಮಾದಿಗಳಿಂದ ಸಂತೋಷ ಸಿಗುವುದು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ.

ಕರ್ಕಟಕ: ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಸ್ವಯಂ ಉದ್ಯೋಗಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ.

ಸಿಂಹ: ಉದ್ಯೋಗ ಕ್ಷೇತ್ರದ ನಷ್ಟ ಭರ್ತಿಗೆ ಮುಂದಾಗಲಿದ್ದೀರಿ. ಹೊಸದಾಗಿ ಮದುವೆಯಾಗಿದ್ದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಅಂದುಕೊಂಡ ಕೆಲಸ ಪೂರ್ತಿ ಮಾಡಲು ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಅಡಿ.

ಕನ್ಯಾ: ಬಯಸಿದ ವ್ಯಕ್ತಿಗಳೊಂದಿಗೆ ಸಮಯ ಕಳೆಯುವ ಯೋಗ. ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸ ಪೂರ್ತಿ ಮಾಡಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ದೂರ ಸಂಚಾರ ಮಾಡಲಿದ್ದೀರಿ.

ತುಲಾ: ವಿದ್ಯಾರ್ಥಿಗಳು ಅವಕಾಶ ಬಂದಾಗ ಸರಿಯಾಗಿ ಬಳಸಿಕೊ‍ಳ್ಳಬೇಕು. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ವ್ಯಾಪಾರೀ ವರ್ಗದವರಿಗೆ ಉನ್ನತಿಯ ಯೋಗ. ಹಿರಿಯರ ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.

ವೃಶ್ಚಿಕ: ಸನ್ಮಿತ್ರರ ಸಂಗದಿಂದ ಒಳ್ಳೆಯ ಕೆಲಸಕ್ಕೆ ಮುಂದಾಗಲಿದ್ದೀರಿ. ಪಾಲುದಾರಿಕಾ ಕ್ಷೇತ್ರದಲ್ಲಿ ಲಾಭ ಕಂಡುಬರಲಿದೆ. ಅನಿರೀಕ್ಷಿತ ಧನಾಗಮನವಾಗಲಿದೆ. ಆದರೆ ಖರ್ಚೂ ಇರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ಧನು: ಬೇರೆಯವರ ಮಾತು ಕೇಳಿಕೊಂಡು ಆತ್ಮೀಯರೊಂದಿಗೆ ಭಿನ್ನಾಭಿಪ್ರಾಯ ಮಾಡಿಕೊಳ್ಳಬೇಡಿ. ಸಂಗಾತಿಯ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಆರೋಗ್ಯ ಸಂಬಂಧೀ ಸಮಸ್ಯೆಗಳಿಗೆ ಖರ್ಚು ವೆಚ್ಚಗಳಾದೀತು.

ಮಕರ: ಕಾರ್ಯನಿಮಿತ್ತ ಅಪರಿಚಿತರೊಂದಿಗೆ ವ್ಯವಹರಿಸಬೇಕಾದೀತು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಲಿದೆ. ಬಂಧು ಮಿತ್ರ ಭೇಟಿ ಯೋಗ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ನಿಮ್ಮಲ್ಲಿರುವ ಸುಪ್ತ ಪ್ರತಿಭೆ ಹೊರತರಲು ಅವಕಾಶ ಸಿಗುವುದು. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ಕಿರು ಸಂಚಾರ ಮಾಡುವಿರಿ.

ಮೀನ: ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ ಕಂಡುಬಂದೀತು. ಮಕ್ಕಳ ವಿಚಾರದಲ್ಲಿ ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳಲ್ಲಿ ಅಧ್ಯಯನಾಸಕ್ತಿ ಹೆಚ್ಚಾಗಲಿದೆ. ತಾಳ್ಮೆಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ