ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 31 ಅಕ್ಟೋಬರ್ 2022 (08:00 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಮಚಿತ್ತದಿಂದ ಎಲ್ಲವನ್ನೂ ಎದುರಿಸಿಕೊಂಡು ಹೋಗುವ ಧೈರ್ಯ ಬೆಳೆಸಿಕೊಳ್ಳಲಿದ್ದೀರಿ. ಇನ್ನೊಬ್ಬರ ಚಾಡಿಮಾತಿಗೆ ಕಿವಿಗೊಡಬೇಕಾಗಿಲ್ಲ. ಮಕ್ಕಳಿಂದ ಸಂತೋಷ ಸಿಗಲಿದೆ. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಕಂಡುಬಂದೀತು.

ವೃಷಭ: ರಾಜಕೀಯ ರಂಗದಲ್ಲಿರುವವರಿಗೆ ಹೊಸ ಶತ್ರುಗಳು ಹುಟ್ಟಿಕೊಳ್ಳಲಿದ್ದೀರಿ. ಮಾತಿನ ಮೇಲೆ ನಿಗಾ ಇರಲಿ. ವ್ಯಾವಹಾರಿಕವಾಗಿ ಲಾಭ-ನಷ್ಟ ಸಮನಾಗಿರಲಿದೆ. ಇಷ್ಟಮಿತ್ರರನ್ನು ಭೇಟಿಯಾಗುವ ಯೋಗ ನಿಮ್ಮದಾಗುವುದು.

ಮಿಥುನ: ಉದ್ಯೋಗ ನಿಮಿತ್ತ ಪರವೂರಿಗೆ ಸಂಚರಿಸುವ ಯೋಗ ನಿಮ್ಮದಾಗಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಮನೆಯಲ್ಲಿ ಕಳ್ಳತನದ ಭೀತಿ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ನಿಮ್ಮ ಕನಸಿನ ವಸ್ತು ಖರೀದಿಸುವ ಯೋಗ ನಿಮ್ಮದಾಗುವುದು. ಹಣಕಾಸಿನ ಹರಿವಿಗೆ ತೊಂದರೆಯಾಗದು. ಕ್ರಿಯಾತ್ಮಕ ಕೆಲಸಗಳಿಂದ ಇತರರ ಗಮನ ಸೆಳೆಯಲಿದ್ದೀರಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡುವಿರಿ.

ಸಿಂಹ: ಹಳೆಯ ಯೋಚನೆಗಳಿಂದ ಮಾನಸಿಕವಾಗಿ ಕುಗ್ಗಿ ಹೋಗುವ ಸಂದರ್ಭ. ಸಂಗಾತಿಯ ಸಾಂತ್ವನ ನೆಮ್ಮದಿ ನೀಡಲಿದೆ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಕನ್ಯಾ: ನೀವು ಬಯಸಿದ್ದು ಒಂದು ಆಗುವುದು ಇನ್ನೊಂದು ಎಂಬ ಪರಿಸ್ಥಿತಿಯಾಗಲಿದೆ. ಕೈಗೊಂಡ ಕೆಲಸಗಳಲ್ಲಿ ಯಶಸ್ಸು ಸಿಗಬೇಕಾದರೆ ಪರಿಶ್ರಮ ಪಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಓದಿನಲ್ಲಿ ನಿರಾಸಕ್ತಿಯಾದೀತು. ತಾಳ್ಮೆಯಿರಲಿ.

ತುಲಾ: ಆತುರದ ನಿರ್ಧಾರಗಳಿಂದ ಅನಾಹುತಗಳೇ ಹೆಚ್ಚು. ಕೌಟುಂಬಿಕವಾಗಿ ಪರಸ್ಪರ ಸಹಕಾರ ಕಂಡುಬರಲಿದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಪಾಲುದಾರಿಕೆ ಕ್ಷೇತ್ರದಲ್ಲಿ ತಾಳ್ಮೆಯಿಂದ ವ್ಯವಹರಿಸಿದರೆ ಲಾಭವಾದೀತು.

ವೃಶ್ಚಿಕ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಸ್ವಯಂ ವೃತ್ತಿಯವರಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬರಲಿದೆ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗುವುದು. ಅನಗತ್ಯ ಚಿಂತೆ ಬೇಡ.

ಧನು: ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಇದು ಸಕಾಲ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲಿದ್ದೀರಿ. ಸಂತೋಷವಿರಲಿದೆ.

ಮಕರ: ನೆರೆಹೊರೆಯವರ ನಿಷ್ಠುರಕ್ಕೆ ಕಾರಣವಾಗಲಿದ್ದೀರಿ. ಕಾರ್ಯರಂಗದಲ್ಲಿ ಮುನ್ನಡೆ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿನ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ.

ಕುಂಭ: ಸಕರಾರಿ ವೃತ್ತಿಯಲ್ಲಿರುವವರಿಗೆ ಕಾರ್ಯದೊತ್ತಡ ಕಂಡುಬಂದೀತು. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಕಟ್ಟಡ ಕಾಮಗಾರಿ ಕೆಲಸಗಳಿಗೆ ವಿಘ್ನಗಳು ಎದುರಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಕಾಲ. ಆಪ್ತರ ಸಲಹೆಗಳು ಉಪಯೋಗಕ್ಕೆ ಬರುವುದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ದೇವತಾ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ