ಮೇಷ: ಸಂದರ್ಭೋಚಿತವಾಗಿ ನಿರ್ಧಾರ ತೆಗೆದುಕೊಳ್ಳುವುದು ಉತ್ತಮ. ಸಂಗಾತಿಯೊಂದಿಗೆ ಕೆಲವು ವಿಚಾರಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ನೆರೆಹೊರೆಯವರ ಕಷ್ಟಕ್ಕೆ ಸ್ಪಂದಿಸಲಿದ್ದೀರಿ. ತಾಳ್ಮೆಯಿರಲಿ.
ವೃಷಭ: ಮನೆ, ಆಸ್ತಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ಪಿತ್ರಾರ್ಜಿತ ಆಸ್ತಿ ವಿವಾದ ಬಗೆಹರಿಯುವುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ.
ಮಿಥುನ: ಒಳ್ಳೆಯ ಕೆಲಸಗಳಿಗೆ ಧನ ವ್ಯಯವಾಗಲಿದೆ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ. ವಿದ್ಯಾರ್ಥಿಗಳಿಗೆ ನೈಪುಣ್ಯತೆಗೆ ತಕ್ಕ ವೇದಿಕೆ ಸಿಗಲಿದೆ. ಬಂಧು ಮಿತ್ರರ ಭೇಟಿ ಮನಸ್ಸಿಗೆ ಸಂತೋಷ ಕೊಡಲಿದೆ.
ಸಿಂಹ: ಆಸ್ತಿ ವಿಚಾರದಲ್ಲಿ ಸಹೋದರಾದಿ ಸಂಬಂಧಿಗಳೊಂದಿಗೆ ಕಲಹ ಬೇಡ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಗೆ ಒತ್ತು ನೀಡಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.
ಕನ್ಯಾ: ಉದ್ಯೋಗ, ವ್ಯವಹಾರದಲ್ಲಿ ಏಳು ಬೀಳುಗಳು ಸಹಜ. ಎಲ್ಲವನ್ನೂ ಸರಿದೂಗಿಸಿಕೊಂಡು ಮನಸ್ಥಿತಿ ಬೆಳೆಸಿಕೊಳ್ಳಬೇಕು. ಮಕ್ಕಳ ಸಂತೋಷಕ್ಕಾಗಿ ಕೆಲವು ತ್ಯಾಗ ಮಾಡಬೇಕಾಗುತ್ತದೆ. ತಾಳ್ಮೆಯಿರಲಿ.
ತುಲಾ: ನಿಮ್ಮ ಮಾತಿನಿಂದಲೇ ಇತರರನ್ನು ಕಟ್ಟಿ ಹಾಕಲಿದ್ದೀರಿ. ಧಾರ್ಮಿಕ ಕೆಲಸಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಬರಲಿದೆ. ಕಿರು ಸಂಚಾರ ಮಾಡಲಿದ್ದೀರಿ.
ವೃಶ್ಚಿಕ: ವಿದ್ಯಾರ್ಥಿಗಳಿಗೆ ಉನ್ನತ ವಿದ್ಯಾರ್ಜನೆಗೆ ಸೌಕರ್ಯಾಭಿವೃದ್ಧಿ ಸಿಗುವುದು. ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು. ಯಾವುದೇ ವಿಚಾರವಾದರೂ ಪರಾಮರ್ಶೆ ನಡೆಸಿ ಮುನ್ನಡೆಯಬೇಕು. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.
ಧನು: ಉದ್ಯೋಗ ವ್ಯವಹಾರದಲ್ಲಿ ಎಷ್ಟೇ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಆಸ್ತಿ, ವಾಹನಾದಿ ಖರೀದಿ ವಿಚಾರದಲ್ಲಿ ವಂಚನೆಯಾಗುವ ಸಾಧ‍್ಯತೆ. ಪಾಲಿದಾರಿಕೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ.
ಮಕರ: ಸರಕಾರಿ ಉದ್ಯೋಗಿಗಳಿಗೆ ಸದ್ಯದಲ್ಲೇ ಇಷ್ಟಾರ್ಥ ನೆರವೇರಲಿದೆ. ದೂರದ ವ್ಯವಹಾರಗಳಲ್ಲಿ ಪರಾವಲಂಬನೆ ಮಾಡಬೇಕಾದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ.
ಕುಂಭ: ಉದ್ಯೋಗ, ವ್ಯವಹಾರದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ಗುರುಹಿರಿಯರ ಸಲಹೆ ಪಾಲಿಸುವುದು ಉತ್ತಮ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಗೃಹ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚವಾದೀತು.
ಮೀನ: ಅನ್ಯರ ಮೇಲೆ ನಿಮ್ಮ ಕೆಲಸ ಕಾರ್ಯಗಳಿಗೆ ಅತಿಯಾದ ಅವಲಂಬನೆ ಬೇಡ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಅವಿವಾಹಿತರಿಗೆ ಉತ್ತಮ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ದೇವತಾ ಪ್ರಾರ್ಥನೆ ಮಾಡಿ.