ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 22 ನವೆಂಬರ್ 2022 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ, ವ್ಯವಹಾರದಲ್ಲಿ ಉನ್ನತಿಯ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸಾಂಸಾರಿಕವಾಗಿ ಕೆಲವು ವಿಚಾರದಲ್ಲಿ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳಾದೀತು. ತಾಳ್ಮೆಯಿರಲಿ.

ವೃಷಭ: ವ್ಯಾಪಾರಿಗಳಿಗೆ ಹಿತಶತ್ರುಗಳ ಕಾಟ ಕಂಡುಬಂದೀತು. ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಯತ್ನಿಸಲಿದ್ದೀರಿ. ಹಿಂದೆ ಮಾಡಿದ್ದ ಒಳ್ಳೆಯ ಕೆಲಸಗಳು ನಿಮ್ಮ ಕೈ ಹಿಡಿಯಲಿವೆ. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಕಾರ್ಯರಂಗದಲ್ಲಿ ಚರ್ಚೆಗೆ ಆಸ್ಪದ ಕೊಡಬೇಡಿ. ಧನಾರ್ಜನೆಗೆ ಹೊಸ ದಾರಿಗಳು ಕಂಡುಕೊಳ್ಳಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿ ಯೋಗ. ಅಧ್ಯಯನ ಶೀಲರಿಗೆ ವಿಫುಲ ಅವಕಾಶ ಸಿಗಲಿದೆ.

ಕರ್ಕಟಕ: ಮಾತಿನಲ್ಲೇ ಇನ್ನೊಬ್ಬರನ್ನು ಮೋಡಿ ಮಾಡುವ ಗುಣ ನಿಮ್ಮದು. ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚಾಗಲಿದೆ. ಅನಗತ್ಯ ಚಿಂತೆ ಬೇಡ.

ಸಿಂಹ: ಆರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಲಿದೆ. ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿ. ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗುವುದು. ಗುರು ಹಿರಿಯರಿಂದ ಸರಿಯಾದ ಮಾರ್ಗದರ್ಶನ ಸಿಗುವುದು.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟವಾಗುವ ಸಾಧ‍್ಯತೆಯಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚು ವೆಚ್ಚವಾಗಲಿದೆ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗ.

ತುಲಾ: ಜವಾಬ್ಧಾರಿಯುತ ಕೆಲಸಗಳಿಂದಾಗಿ ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಗುರುಹಿರಿಯರ ಸೂಕ್ತ ಸಲಹೆಗಳು ಉಪಯೋಗಕ್ಕೆ ಬರಲಿವೆ.

ವೃಶ್ಚಿಕ: ಕಾರ್ಯನಿಮಿತ್ತ ಪರವೂರಿಗೆ ಪ್ರಯಾಣ ಮಾಡುವ ಅವಕಾಶ ಸಿಗಲಿದೆ. ದಂಪತಿಗಳಲ್ಲಿ ಕೆಲವೊಂದು ವಿಚಾರಕ್ಕೆ ಭಿನ್ನಾಭಿಪ್ರಾಯಗಳು ಬಂದೀತು. ವಿದ್ಯಾರ್ಥಿಗಳು ಇನ್ನೊಬ್ಬರನ್ನು ಅವಲಂಬಿಸುವ ಅನಿವಾರ್ಯತೆ ಎದುರಾಗಲಿದೆ.

ಧನು: ಕಾರ್ಯರಂಗದಲ್ಲಿ ಅತಿಯಾದ ಪೈಪೋಟಿ ಎದುರಾಗಲಿದೆ. ಅನಗತ್ಯ ವಿಚಾರಗಳಿಗೆ ಹೆಚ್ಚು ತಲೆಕೆಡಿಸಿಕೊಳ್ಳುವ ಸಂದರ್ಭ ಎದುರಾದೀತು. ಆಪ್ತರ ಸಲಹೆ ಉಪಯೋಗಕ್ಕೆ ಬರುವುದು. ಕಿರು ಸಂಚಾರ ಮಾಡಲಿದ್ದೀರಿ.

ಮಕರ: ಮನೆಯಲ್ಲಿ ಶುಭ ಮಂಗಲ ಕಾರ್ಯಕ್ಕೆ ಸಿದ್ಧತೆ ನಡೆಸಲಿದ್ದೀರಿ. ಅನಿರೀಕ್ಷಿತ ವ್ಯಕ್ತಿಗಳು ನಿಮ್ಮ ಜೀವನಕ್ಕೆ ತಿರುವು ನೀಡಲಿದ್ದಾರೆ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬರಲಿದೆ. ತಾಳ್ಮೆಯಿರಲಿ.

ಕುಂಭ: ನಿಮ್ಮ ಒಂದು ಮರೆವಿನಿಂದ ತೊಂದರೆಗಳು ಎದುರಾದೀತು. ಇಷ್ಟಾರ್ಥ ಸಿದ್ದಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಮಹಿಳೆಯರು ಮಾತಿನಲ್ಲೇ ಇತರರನ್ನು ಮೋಡಿ ಮಾಡಲಿದ್ದೀರಿ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ದೀರ್ಘ ಪ್ರಯಾಣದಿಂದ ದೇಹಾಯಾಸವಾಗುವ ಸಾಧ್ಯತೆಯಿದೆ. ಸಹೋದ್ಯೋಗಿಗಳ ಸಹಕಾರದಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಕಂಡುಬರುವುದು. ಸಾಂಸಾರಿಕವಾಗಿ ಮಧ‍್ಯಮ ಸುಖ. ಆರೋಗ್ಯದಲ್ಲಿ ಸುಧಾರಣೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ