ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 25 ನವೆಂಬರ್ 2022 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ವ್ಯಾಪಾರ, ವ್ಯವಹಾರದಲ್ಲಿ ವಿಶ್ವಾಸ ಉಳಿಸಿಕೊಳ್ಳುವ ಕೆಲಸ ಮಾಡಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಅನಿವಾರ್ಯತೆಗೆ ಕಟ್ಟುಬೀಳಬೇಕಾಗುತ್ತದೆ. ಮನರಂಜನಾ ಕ್ಷೇತ್ರದಲ್ಲಿರುವವರಿಗೆ ಕೀರ್ತಿ ಸಂಪಾದಿಸುವ ಯೋಗ.

ವೃಷಭ: ಅವಿವಾಹಿತರಿಗೆ ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಗೃಹ, ವಾಹನಾದಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ.  ಸಂದರ್ಭಕ್ಕೆ ಸರಿಯಾಗಿ ಜಾಣತನದ ನಡೆ ಪ್ರದರ್ಶಿಸಬೇಕಾಗುತ್ತದೆ.

ಮಿಥುನ: ಕೆಲಸ ಕಾರ್ಯಗಳಲ್ಲಿ ಗೌರವ ಪ್ರಾಪ್ತಿಯಾಗಲಿದೆ. ನೂತನ ಬಂಧುಮಿತ್ರರ ಸಮಾಗಮವಾಗಲಿದೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಇಷ್ಟಮಿತ್ರರೊಂದಿಗೆ ಇಷ್ಟ ಭೋಜನ ಮಾಡುವ ಯೋಗ. ತಾಳ್ಮೆಯಿರಲಿ.

ಕರ್ಕಟಕ: ಹಣಕಾಸಿನ ಉಳಿತಾಯ ಯೋಜನೆಗೆ ಕೈ ಹಾಕಲಿದ್ದೀರಿ. ಗುರು ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ವ್ಯಾಪಾರಿಗಳಿಗೆ ಹಿತ ಶತ್ರುಗಳ ಕಾಟ ಕಂಡುಬರಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ.

ಸಿಂಹ: ದಾಕ್ಷಿಣ್ಯಕ್ಕೆ ಒಳಗಾಗದೇ ಆಡಬೇಕಾದ ಮಾತುಗಳನ್ನು ಆಡಿದರೆ ಉತ್ತಮ. ಕೋರ್ಟ್ ಕಚೇರಿ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಪಾಲು ಬಂಡವಾಳ ಹೂಡಿಕೆ ಇದು ಸಕಾಲ. ಕಿರು ಸಂಚಾರ ಮಾಡಲಿದ್ದೀರಿ.

ಕನ್ಯಾ: ಹಠಮಾರೀ ಮನೋಭಾವ ಬಿಟ್ಟು ಸಂಘರ್ಷಗಳನ್ನು ಬಗೆಹರಿಸಲು ಮುಂದಾಗಲಿದ್ದೀರಿ. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ವಿದ್ಯಾರ್ಥಿಗಳಿಗೆ ಮುನ್ನಡೆಯ ಯೋಗ. ದಿನದಂತ್ಯಕ್ಕೆ ನೆಮ್ಮದಿಯಾಗುವುದು.

ತುಲಾ: ವ್ಯಾಪಾರಿಗಳಿಗೆ ಸಾಲಗಾರರ ಕಾಟದಿಂದ ಮುಕ್ತಿ ಸಿಗುವುದು. ಸಾಮಾಜಿಕವಾಗಿ ಜನಮನ್ನಣೆಗೆ ಪಾತ್ರರಾಗಲಿದ್ದೀರಿ. ಆಸ್ತಿ, ವಾಹನಾದಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಶ್ಚಿಕ: ಸಮಾಜಮುಖೀ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ಅವಿವಾಹಿತರಿಗೆ ಯೋಗ್ಯ ಸಂಬಂಧಗಳು ಒದಗಿಬರಲಿವೆ.  ಪಾಲುದಾರಿಕೆ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ನಿರೀಕ್ಷಿಸಿದಂತೆ ಧನಾರ್ಜನೆಯಾಗಲಿದೆ.

ಧನು: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಅನಿರೀಕ್ಷಿತ ಧನಾಗಮನವಾಗಲಿದೆ. ಬಂಧು ಮಿತ್ರರನ್ನು ಭೇಟಿಯಾಗಲಿದ್ದೀರಿ.

ಮಕರ: ಹೊಸದಾಗಿ ಉದ್ಯೋಗಕ್ಕೆ ಸೇರಿಕೊಂಡವರಿಗೆ ಸವಾಲುಗಳು ಎದುರಾದೀತು. ಕಾರ್ಯನಿಮಿತ್ತ ಪರವೂರಿಗೆ ಸಂಚರಿಸುವ ಯೋಗ. ದೇಹಾಯಾಸದಿಂದ ಆರೋಗ್ಯ ಸಮಸ್ಯೆಯಾದೀತು. ಕುಲದೇವರ ಪ್ರಾರ್ಥನೆ ಮಾಡಿ.

ಕುಂಭ: ಮನಸ್ಸಿನಲ್ಲಿರುವ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಬೇಕಾಗುತ್ತದೆ. ಮಾತೃ ಸಮಾನರಿಂದ ಕೆಲಸ ಕಾರ್ಯಗಳಿಗೆ ಪ್ರೋತ್ಸಾಹ ಸಿಗುವುದು.

ಮೀನ: ಕ್ರಿಯಾಶೀಲರಾಗಿ ಇಂದಿನ ದಿನ ಕಳೆಯಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಧಾರ್ಮಿಕ ಕಾರ್ಯಗಳ ನೇತೃತ್ವ ವಹಿಸಲಿದ್ದೀರಿ.  ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ