ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 28 ನವೆಂಬರ್ 2022 (08:11 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮ ಎದುರಾಳಿಗಳ ಮುಂದೆ ತಲೆ ಎತ್ತಿ ನಿಲ್ಲಲು ಅವಕಾಶ ದೊರೆಯುವುದು. ಹಣಕಾಸಿನ ವಿಚಾರದಲ್ಲಿ ಆಪ್ತರ ಸಹಾಯ ದೊರೆಯಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಹೊಂದಾಣಿಕೆ ಅಗತ್ಯ.

ವೃಷಭ: ಕಾರ್ಯರಂಗದಲ್ಲಿ ಅಧಿಕ ಓಡಾಟ ನಡೆಸಬೇಕಾಗಬಹುದು. ಮಕ್ಕಳ ದೇಹಾರೋಗ್ಯದ ವಿಚಾರದಲ್ಲಿ ಅಸಡ್ಡೆ ಬೇಡ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬತಲಿದೆ. ವ್ಯಾಪಾರಿಗಳಿಗೆ ಸಮೃದ್ಧಿ ಕಂಡುಬರುವುದು.

ಮಿಥುನ: ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳುವುದರಿಂದ ಲಾಭವಾಗಲಿದೆ. ಮಾತಿನ ಮೇಲೆ ನಿಗಾ ಇರಲಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ವಾಹನ ಸಂಚಾರ ಮಾಡುವಾಗ ಎಚ್ಚರಿಕೆ ಅಗತ್ಯ.

ಕರ್ಕಟಕ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಹಣಕಾಸಿನ ಹರಿವಿಗೆ ತೊಂದರೆಯಿರದು. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಹಿರಿಯರಿಗೆ ದಾನ ಧರ್ಮಾದಿಗಳಿಂದ ನೆಮ್ಮದಿ.

ಸಿಂಹ: ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಹಿಂದೆ ಮಾಡಿದ್ದ ಒಳ್ಳೆಯ ಕೆಲಸಗಳಿಗೆ ತಕ್ಕ ಫಲ ಪಡೆಯಲಿದ್ದೀರಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಸಂತೋಷವುಂಟು ಮಾಡಲಿದೆ.

ಕನ್ಯಾ: ಹಳೆಯ ಸಮಸ್ಯೆಗಳು ಮತ್ತೆ ಮರುಕಳಿಸಿ ಚಿಂತೆಗೆ ಕಾರಣವಾದೀತು. ಅಧ್ಯಯನಶೀಲರಿಗೆ ಮುನ್ನಡೆಯಿರಲಿದೆ. ಗುರುಹಿರಿಯರ ಸಲಹೆ ಉಪಯೋಗಕ್ಕೆ ಬರಲಿದೆ. ಮನೋರಂಜನಾ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ.

ತುಲಾ: ವ್ಯಾಪಾರಿಗಳು ಲಾಭ ಮಾಡಿಕೊಳ್ಳಲು ಹೋಗಿ ತೊಂದರೆಗೆ ಸಿಲುಕಿಕೊಳ್ಳುವ ಸಂದರ್ಭ ಬಂದೀತು. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿರಲಿ. ಅನಿರೀಕ್ಷಿತ ಖರ್ಚು ವೆಚ್ಚಗಳಾದೀತು.

ವೃಶ್ಚಿಕ: ದೈವಾನುಗ್ರಹದಿಂದ ಇಂದು ನೀವು ಅಂದುಕೊಂಡ ಕೆಲಸಗಳನ್ನು ನೆರವೇರಿಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಯಂತ್ರೋಪಕರಣಗಳ ಕೆಲಸ ಮಾಡಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಅರ್ಧಕ್ಕೇ ನಿಂತ ಕೆಲಸಗಳಿಗೆ ಮರು ಚಾಲನೆ ನೀಡಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ದಂಪತಿಗಳಲ್ಲಿ ಪರಸ್ಪರ ಹೊಂದಾಣಿಕೆ ಕೊರತೆ ಕಂಡುಬಂದೀತು. ವಿದ್ಯಾರ್ಥಿಗಳಿಗೆ ಮುನ್ನಡೆ.

ಮಕರ: ನಾನಾ ರೀತಿಯ ಕೌಟುಂಬಿಕ ಸಮಸ್ಯೆಗಳು ನಿಮ್ಮ ಚಿಂತೆಗೆ ಕಾರಣವಾದೀತು. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹ ಹೈರಾಣಾದೀತು. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಕಂಡುಬಂದೀತು. ಮನೆ ರಿಪೇರಿ ಕೆಲಸಗಳಿಗೆ ಖರ್ಚು ವೆಚ್ಚಗಳಾಗುವ ಸಾಧ‍್ಯತೆ. ಬಂಧು ಮಿತ್ರರನ್ನು ಭೇಟಿಯಾಗುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಿದರೆ ಉತ್ತಮ.

ಮೀನ: ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಸಂಪತ್ತು ವೃದ್ಧಿಗೆ ಪ್ರಯತ್ನ ನಡೆಸಲಿದ್ದೀರಿ. ಲೆಕ್ಕಪತ್ರಗಳ ಬಗ್ಗೆ ನಿಗಾ ಇರಲಿ. ಆರೋಗ್ಯದಲ್ಲಿ ಚೇತರಿಕೆಯಿರಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ