ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 29 ನವೆಂಬರ್ 2022 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸರಕಾರೀ ಕೆಲಸಗಳಲ್ಲಿ ಪ್ರಗತಿ ಕಂಡುಬರಲಿದೆ. ಆಪ್ತಮಿತ್ರರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳು ಕಂಡುಬಂದೀತು.

ವೃಷಭ: ಹೊಸದಾಗಿ ಆರಂಭಿಸಿದ್ದ ಕೆಲಸಗಳಿಗೆ ವಿಘ್ನಗಳು ಕಂಡುಬಂದೀತು. ಪ್ರೀತಿ ಪಾತ್ರರ ಕಷ್ಟಗಳಿಗೆ ಸ್ಪಂದಿಸಲಿದ್ದೀರಿ. ಹಣಕಾಸಿನ ವಿಚಾರವಾಗಿ ಹಿಂದೆ ಮಾಡಿದ್ದ ಸಹಾಯಕ್ಕೆ ಪ್ರತಿಫಲ ದೊರೆಯಲಿದೆ. ತಾಳ್ಮೆ ಅಗತ್ಯ.

ಮಿಥುನ: ಮುಂದೆ ಬರಲಿರುವ ಕಷ್ಟಕ್ಕೆ ಇಂದೇ ಮಾನಸಿಕವಾಗಿ ಸಿದ್ಧರಾಗುವುದು ಸೂಕ್ತ. ಆರ್ಥಿಕವಾಗಿ ಅಳೆದು ತೂಗಿ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾದೀತು. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಮಹಿಳೆಯರಿಗೆ ಕಾರ್ಯರಂಗದಲ್ಲಿ ಉನ್ನತ ಸ್ಥಾನ ಮಾನದ ಯೋಗ. ನಿಮ್ಮ ಕ್ರಿಯಾತ್ಮಕ ಯೋಜನೆಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ. ಗೃಹೋಪಕರಣಗಳ ಸಂಗ್ರಹ ಮಾಡಲಿದ್ದೀರಿ. ಕಿರು ಓಡಾಟ ನಡೆಸಬೇಕಾಗುತ್ತದೆ.

ಸಿಂಹ: ನಿಮ್ಮ ಯೋಜನೆಗಳಲ್ಲಿ ಸಫಲವಾಗಬೇಕಾದರೆ ಸತತ ಪ್ರಯತ್ನ ಬೇಕಾಗುತ್ತದೆ. ಸಾಲಗಾರರ ಕಾಟ ಕಂಡುಬಂದೀತು. ಮಕ್ಕಳಿಗೆ ನಿರೀಕ್ಷಿತ ಸ್ಥಾನ ಮಾನ ಲಭಿಸಲಿದೆ. ಮನಸ್ಸಿಗೆ ನೆಮ್ಮದಿ ನೀಡುವ ಕೆಲಸಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ.

ಕನ್ಯಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ನೆರೆಹೊರೆಯವರಿಂದ ಸಹಾಯ ಹಸ್ತ ದೊರಕಲಿದೆ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆ ಕಂಡುಬಂದೀತು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ.

ತುಲಾ: ನಿಮ್ಮ ಬಹು ದಿನಗಳ ಗುಟ್ಟು ಬಯಲಾಗುವ ದಿನ. ಕೌಟುಂಬಿಕವಾಗಿ ಹೊಸ ಅಭಿವೃದ್ಧಿ ಕೆಲಸಗಳಿಗೆ ಕೈ ಹಾಕಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.

ವೃಶ್ಚಿಕ: ಇಷ್ಟು ದಿನ ನಿಮಗೆ ತೊಂದರೆ ಕೊಡುತ್ತಿದ್ದ ವಿಚಾರಕ್ಕೆ ಪರಿಹಾರ ಸಿಗುವುದು. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ.

ಧನು: ಕಷ್ಟದಲ್ಲಿರುವವರಿಗೆ ಕೈಲಾದ ಸಹಾಯ ಮಾಡುವುದರಿಂದ ನಿಮ್ಮ ಮನಸ್ಸಿಗೆ ನೆಮ್ಮದಿ ಸಿಗುವುದು. ಸಂಗಾತಿಯ ಸಲಹೆ ಪಾಲಿಸುವುದು ಉತ್ತಮ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ದೇವತಾ ಪ್ರಾರ್ಥನೆ ಮಾಡಿ.

ಮಕರ: ಸಮಾನ ಮನಸ್ಕರೊಂದಿಗೆ ಸೇರುವ ಯೋಗ. ಸಹೋದರರೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿದೆ. ನಿರುದ್ಯೋಗಿಗಳಿಗೆ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ವಿಶೇಷ ವ್ಯಕ್ತಿಗಳನ್ನು ಭೇಟಿಯಾಗುವ ಯೋಗ.

ಕುಂಭ: ಅನಿರೀಕ್ಷಿತ ಖರ್ಚು ವೆಚ್ಚಗಳು ಕಂಡುಬಂದೀತು. ನಿಗದಿತ ಸಮಯಕ್ಕೆ ಕೆಲಸ ಮುಗಿಸಿಕೊಡುವ ಒತ್ತಡಕ್ಕೆ ಸಿಲುಕಿಕೊಳ್ಳಲಿದ್ದೀರಿ. ಅವಿವಾಹಿತರಿಗೆ ಸೂಕ್ತ ವೈವಾಹಿಕ ಸಂಬಂಧ ಕೂಡಿಬರಲಿದೆ.

ಮೀನ: ದೂರದ ವ್ಯವಹಾರಗಳಿಂದ ಧನಾಗಮನವಾಗಲಿದೆ. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬರಲಿದೆ. ಆಹಾರೋದ್ಯಮಿಗಳಿಗೆ ಲಾಭವಾಗಲಿದೆ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ