ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 30 ನವೆಂಬರ್ 2022 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸ್ವತಂತ್ರವಾಗಿ ಕೆಲಸ ಮಾಡುವ ನಿಮ್ಮ ಯೋಜನೆಗೆ ಯಶಸ್ಸು ಸಿಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಕೊಂಚ ಬಿಡುವು ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕೈಯಿಂದ ಅನಿರೀಕ್ಷಿತವಾಗಿ ಅಚಾತುರ್ಯಗಳಾಗುವ ಸಾಧ‍್ಯತೆ. ತಾಳ್ಮೆಯಿಂದ ವ್ಯವಹರಿಸಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ದೇವತಾ ಪ್ರಾರ್ಥನೆ ಮಾಡಿ.

ಮಿಥುನ: ಸಹೋದಾರಿ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳು ಬಗೆಹರಿಯಲಿವೆ. ಶಾರೀರಿಕ ಸೌಖ್ಯವಾಗಲಿದ್ದು, ಹೊಸ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಉತ್ಸಾಹ ಕಂಡುಬರಲಿದೆ. ಕಾರ್ಯನಿಮಿತ್ತ ಪರವೂರಿಗೆ ಸಂಚರಿಸಲಿದ್ದೀರಿ.

ಕರ್ಕಟಕ: ಬಹಳ ದಿನಗಳಿಂದ ಅಂದುಕೊಂಡಿದ್ದ ಕೆಲಸಗಳಿಗೆ ಇಂದು ಚಾಲನೆ ನೀಡಲಿದ್ದೀರಿ. ಸಂಗಾತಿಯ ಸಾಥ್ ಸಿಗಲಿದೆ. ನೆರೆಹೊರೆಯವರೊಂದಿಗೆ ಅನಗತ್ಯ ಸಂಘರ್ಷ ಬೇಡ. ವ್ಯಾಪಾರೀ ವರ್ಗದವರಿಗೆ ಸಾಲಗಾರರ ಕಾಟದಿಂದ ಮುಕ್ತಿ.

ಸಿಂಹ: ಮನಸ್ಸಿನಲ್ಲಿರುವ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ವ್ಯವಹಾರದಲ್ಲಿ ತೊಡಗಿಸಿಕೊಂಡವರಿಗೆ ಹಿತ ಶತ್ರುಗಳ ಕಾಟ ಕಂಡುಬಂದೀತು. ತಾಳ್ಮೆಯಿರಲಿ.

ಕನ್ಯಾ: ಉದ್ಯೋಗದಲ್ಲಿ ಸ್ಥಿರತೆಗಾಗಿ ಪ್ರಯತ್ನಿಸುತ್ತಿದ್ದರೆ ಸಫಲತೆ ಕಾಣಲಿದ್ದೀರಿ. ಆಪ್ತ ಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಪಾಲುದಾರಿಕೆ ವ್ಯವಹಾರದಲ್ಲಿ ಏಳಿಗೆ ಕಂಡುಬರಲಿದೆ. ವಿದೇಶ ಯಾತ್ರೆ ಯೋಗವಿದೆ.

ತುಲಾ: ನಿಗದಿತ ಸಮಯಕ್ಕೆ ಕೆಲಸ ಪೂರ್ತಿ ಮಾಡಿದ ಸಂತೋಷ ನಿಮ್ಮದಾಗಲಿದೆ. ಮಕ್ಕಳ ವಿಚಾರದಲ್ಲಿ ಸಂತೋಷ, ಅಭಿವೃದ್ಧಿ ಕಂಡುಬರಲಿದೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ಕಿರು ಸಂಚಾರ ಮಾಡಲಿದ್ದೀರಿ.

ವೃಶ್ಚಿಕ: ಮನೆಯಲ್ಲಿ ಸಣ್ಣ ಪುಟ್ಟ ಬದಲಾವಣೆ, ರಿಪೇರಿ ಕೆಲಸಗಳಿಗಾಗಿ ಧನ ವ್ಯಯ ಮಾಡಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ‍್ಯತೆಯಿದ್ದು, ಸಂತೋಷವಿರಲಿದೆ.

ಧನು: ಉದ್ಯೋಗ, ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಕ್ರಿಯಾತ್ಮಕವಾಗಿ ಯೋಚನೆ ಮಾಡುವುದರಿಂದ ಇತರರ ಮೆಚ್ಚುಗೆಗೆ ಪಾತ್ರರಾಗಲಿದ್ದೀರಿ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ. ಅನಗತ್ಯ ಚಿಂತೆ ಬೇಡ.

ಮಕರ: ಹೊಸದಾಗಿ ಮುದವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ವ್ಯಾಪಾರಸ್ಥರಿಗೆ ಅನುಕೂಲಕರ ವಾತಾವರಣವಿರಲಿದೆ. ಸರಕಾರಿ ಕೆಲಸಗಳಲ್ಲಿ ಪ್ರಗತಿ ಕಂಡುಬರುವುದು. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ಕೊಡಬೇಡಿ. ಮಕ್ಕಳ ವಿಚಾರದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಿದ್ದೀರಿ. ಉದ್ಯೋಗ ಬದಲಾವಣೆಗೆ ಚಿಂತನೆ ನಡೆಸಲಿದ್ದೀರಿ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ನಿಮ್ಮಲ್ಲಿರುವ ಸುಪ್ತ ಪ್ರತಿಭೆ ಅನಾವರಣಗೊಳಿಸಲು ವೇದಿಕೆ ಸಿಗಲಿದೆ. ಕುಟುಂಬ ಸದಸ್ಯರ ಕಷ್ಟಗಳಲ್ಲಿ ಭಾಗಿಯಾಗಲಿದ್ದೀರಿ. ವಿದೇಶದಲ್ಲಿ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ಫಲ ಸಿಗಲಿದೆ. ತಾಳ್ಮೆಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ