ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 1 ಡಿಸೆಂಬರ್ 2022 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ನಿಮ್ಮಲ್ಲಿರುವ ಬುದ್ಧಿವಂತಿಕೆಯನ್ನು ಪ್ರದರ್ಶಿಸುವ ಕಾಲ. ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ. ಕಾರ್ಯರಂಗದಲ್ಲಿ ಹೊಸ ಶತ್ರುಗಳು ಹುಟ್ಟಿಕೊಂಡಾರು. ಸಂಗಾತಿಯೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ವೃಷಭ: ಉದ್ಯೋಗ ಕ್ಷೇತ್ರದಲ್ಲಿ ಇತರರು ನಿಮ್ಮ ಅನುಭವದ ಉಪಯೋಗ ಪಡೆಯಲಿದ್ದಾರೆ. ಆರ್ಥಿಕವಾಗಿ ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚು ವೆಚ್ಚಗಳಿರಲಿದೆ. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರುವುದು.

ಮಿಥುನ: ಪ್ರೇಮಿಗಳು ಮನಸ್ಸು ಬಿಚ್ಚಿ ಮಾತನಾಡಲು ಅವಕಾಶ ಸಿಗುವುದು. ಸಹೋದರ ಸಂಬಂಧಿಗಳೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ವ್ಯಾಪಾರಿಗಳಿಗೆ ಸಾಲಗಾರರ ಕಾಟದಿಂದ ಮುಕ್ತಿ.

ಕರ್ಕಟಕ: ಬಹುದಿನಗಳ ಕನಸು ನನಸು ಮಾಡಿಕೊಳ್ಳಲಿದ್ದೀರಿ. ಆರ್ಥಿಕವಾಗಿ ಹಣಕಾಸಿನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶ ದೊರೆಯಲಿದೆ. ತಾಳ್ಮೆಯಿರಲಿ.

ಸಿಂಹ: ಯೋಗ್ಯತೆಗೆ ಅನುಸಾರವಾಗಿ ಕೆಲಸ ಮಾಡುವುದು ಉತ್ತಮ. ಅನ್ಯರ ಕಷ್ಟಗಳಿಗೆ ಸ್ಪಂದಿಸಲು ಹೋಗಿ ಅವಮಾನಕ್ಕೀಡಾಗಬೇಡಿ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಕುಲದೇವರ ಪ್ರಾರ್ಥನೆ ಮಾಡಿ.

ಕನ್ಯಾ: ಪಾಲುದಾರಿಕೆ ವ್ಯವಹಾರದಲ್ಲಿ ಹೆಚ್ಚಿನ ಅಭಿವೃದ್ಧಿ ನಿರೀಕ್ಷಿಸಬಹುದು. ಮಕ್ಕಳ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ದಿನದಂತ್ಯಕ್ಕೆ ನೆಮ್ಮದಿ.

ತುಲಾ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾಗುವ ಯೋಗ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ವೃಶ್ಚಿಕ: ಅಪರೂಪಕ್ಕೆ ಭೇಟಿಯಾದ ವ್ಯಕ್ತಿಗಳಿಂದ ನಿಮಗೆ ಉಪಕಾರವಾದೀತು. ಕೌಟುಂಬಿಕವಾಗಿ ಮಹತ್ವದ ನಿರ್ಧಾರ ತೆಗೆದುಕೊ‍ಳ್ಳುವ ಸಮಯವಿದು. ದಂಪತಿಗಳಲ್ಲಿ ಅನುರಾಗ ವೃದ್ಧಿಯಾಗಲಿದೆ. ಅನಗತ್ಯ ಚಿಂತೆ ಬೇಡ.

ಧನು: ನೀವು ನಂಬಿಕೊಂಡಿದ್ದವರಿಂದಲೇ ವಂಚನೆಗೊಳಗಾಗುವ ಸಾಧ್ಯತೆ. ಮನಸ್ಸಿನ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ಗೃಹಿಣಿಯರಿಗೆ ಕಾರ್ಯದೊತ್ತಡ ಹೆಚ್ಚಾಗಲಿದೆ. ತಾಳ್ಮೆ, ಸಂಯಮ ಅಗತ್ಯ.

ಮಕರ: ನೀವು ತೆಗೆದುಕೊಳ್ಳುವ ನಿರ್ಧಾರ ನಿಮ್ಮ ಭವಿಷ್ಯಕ್ಕೆ ಪೂರಕವಾಗಲಿದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗದ ಬ್ಗೆ ಚಿಂತನೆ ನಡೆಸಲಿದ್ದಾರೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕುಂಭ: ಸರಕಾರಿ ಉದ್ಯೋಗಿಗಳಿಗೆ ಕಾರ್ಯನಿಮಿತ್ತ ಪರವೂರಿಗೆ ಪ್ರಯಾಣಿಸಬೇಕಾಗಬಹುದು. ವಾಹನ, ಭೂಮಿ ಖರೀದಿ ಯೋಗ ಸದ್ಯದಲ್ಲೇ ಕೂಡಿಬರುವುದು. ಅರ್ಧಕ್ಕೇ ನಿಂತ ಕೆಲಸಗಳಿಗೆ ಮರು ಚಾಲನೆ ನೀಡಲಿದ್ದೀರಿ.

ಮೀನ: ಮಹಿಳೆಯರಿಗೆ ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ‍್ಯತೆ. ಕೆಡುಕು ಸ್ವಭಾವದ ಸ್ನೇಹಿತರ ಸಂಗ ನಿಮ್ಮನ್ನು ದಾರಿ ತಪ್ಪಿಸೀತು. ಎಚ್ಚರಿಕೆಯಿರಲಿ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ