ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಶುಕ್ರವಾರ, 2 ಡಿಸೆಂಬರ್ 2022 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಹೋದರ ಸಮಾನರಿಗೆ ಸಹಾಯ ಮಾಡಲಿದ್ದೀರಿ. ಉದ್ಯೋಗ, ವ್ಯವಹಾರದಲ್ಲಿ ನಿಮ್ಮ ನಿಷ್ಠೆಗೆ ತಕ್ಕ ಫಲ ಸಿಗಲಿದೆ. ದಂಪತಿಗಳಲ್ಲಿ ಪರಸ್ಪರ ಹೊಂದಾಣಿಕೆಯ ಕೊರತೆ ಕಂಡುಬಂದೀತು. ದೇವತಾ ಪ್ರಾರ್ಥನೆ ಮಾಡಿದರೆ ಉತ್ತಮ.

ವೃಷಭ: ಮಾತಿನಲ್ಲಿ ಎಷ್ಟೇ ನಯವಾಗಿದ್ದರೂ ನಿಮ್ಮ ಕೆಲವೊಂದು ನಡೆಗಳು ಆಪ್ತರ ಅಸಮಾಧಾನಕ್ಕೆ ಗುರಿಯಾದೀತು. ಅನಿರೀಕ್ಷಿತವಾಗಿ ಖರ್ಚು ವೆಚ್ಚವಾಗುವ ಸಾಧ‍್ಯತೆ. ಕಾರ್ಯನಿಮಿತ್ತ ಪರವೂರಿಗೆ ಸಂಚರಿಸಲಿದ್ದೀರಿ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಪಾರದರ್ಶಕತೆಯಿರಲಿ. ಸಾಮಾಜಿಕವಾಗಿ ಗೌರವ ಪ್ರಾಪ್ತಿಯಾಗಲಿದೆ. ಬಂಧು ಮಿತ್ರರನ್ನು ಭೇಟಿಯಾಗುವ ಯೋಗ. ಆರ್ಥಿಕವಾಗಿ ಪರಿಸ್ಥಿತಿ ಸುಧಾರಿಸಲಿದೆ. ದಿನದಂತ್ಯಕ್ಕೆ ನೆಮ್ಮದಿಯಿರಲಿ.

ಕರ್ಕಟಕ: ಅಪರಿಮಿತ ಕೆಲಸದಿಂದ ದೇಹಾಯಾಸವಾದೀತು. ಹೊಸದಾಗಿ ಪರಿಚಯವಾಗಿದ್ವರಿಂದ ನಿಮ್ಮ ಕೆಲಸಗಳಿಗೆ ಅನುಕೂಲವಾದೀತು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ. ತಾಳ್ಮೆಯಿರಲಿ.

ಸಿಂಹ: ಕಾರ್ಯಕ್ಷೇತ್ರದಲ್ಲಿ ಅನಗತ್ಯ ಸಮಸ್ಯೆಗಳನ್ನು ಮೈಮೇಲೆಳೆದುಕೊಳ್ಳಬೇಡಿ. ಇನ್ನೊಬ್ಬರೊಂದಿಗೆ ವಾದ ವಿವಾದ ಬೇಡ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಬೇರೆಯವರ ಚಾಡಿ ಮಾತುಗಳಿಗೆ ಕಿವಿಗೊಡಬೇಡಿ.

ಕನ್ಯಾ: ಪರರಿಗೆ ಹಣಕಾಸಿನ ನೆರವು ನೀಡುವ ಮೊದಲು ಸರಿಯಾಗಿ ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ. ಕೌಟುಂಬಿಕವಾಗಿ ಅಭಿವೃದ್ಧಿ, ನೆಮ್ಮದಿ ಕಂಡುಬರಲಿದೆ. ಸಂಗಾತಿಯ ಸಲಹೆಯನ್ನು ಪಾಲಿಸುವುದು ಉತ್ತಮ. ತಾಳ್ಮೆಯಿರಲಿ.

ತುಲಾ: ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಂಡು ನೆಮ್ಮದಿ ಹಾಳುಮಾಡಿಕೊಳ್ಳಬೇಡಿ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ಹೊಸ ವ್ಯವಹಾರಕ್ಕೆ ಕೈ ಹಾಕುವ ಮುನ್ನ ಹಿರಿಯರ ಸಲಹೆ ಪಡೆಯಿರಿ. ದಿನದಂತ್ಯಕ್ಕೆ ನೆಮ್ಮದಿ.

ವೃಶ್ಚಿಕ: ಸರಕಾರಿ ನೌಕರರಿಗೆ ಪಗಾರ ಹೆಚ್ಚಳ, ಬಡ್ತಿ ಸಾಧ‍್ಯತೆ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ನಿಮ್ಮ ಮಾತಿನಿಂದ ಇತರರ ಮನಸ್ಸು ನೋಯಿಸದಿರಿ. ವ್ಯಾಪಾರಿಗಳಿಗೆ ಆರ್ಥಿಕವಾಗಿ ಮುನ್ನಡೆಯಿರಲಿದೆ.

ಧನು: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಬಂಧು ಮಿತ್ರರ ಭೇಟಿ ಮನಸ್ಸಿನ ಸಂತೋಷ ಹೆಚ್ಚಿಸಲಿದೆ. ಗೃಹೋಪಯೋಗಿ ವಸ್ತುಗಳನ್ನು ಖರೀದಿ ಮಾಡಲು ಖರ್ಚು ವೆಚ್ಚ ಮಾಡಬೇಕಾಗುತ್ತದೆ.

ಮಕರ: ಕೋರ್ಟು ಕಚೇರಿ ಕಲಾಪಗಳಿಗೆ ಸಿದ್ಧತೆ ನಡೆಸಲಿದ್ದೀರಿ. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ತೋರಿಬರಲಿವೆ. ಪಾಲಿಗೆ ಬಂದ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಕುಂಭ: ಕಾರ್ಯಕ್ಷೇತ್ರದಲ್ಲಿ ನಿಮ್ಮ ನಿಷ್ಠೆಗೆ ತಕ್ಕ ಫಲ ಸಿಗಲಿದೆ. ಸಾಂಸಾರಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ಹಿರಿಯರು ಧಾರ್ಮಿಕ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲಿದ್ದೀರಿ. ವಾಹನ, ಭೂಮಿ ಖರೀದಿ ವಿಚಾರದಲ್ಲಿ ಮುನ್ನಡೆ.

ಮೀನ: ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ಇಷ್ಟಮಿತ್ರರನ್ನು ಭೇಟಿಯಾಗಲಿದ್ದೀರಿ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆಯಾದೀತು. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ