ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 6 ಡಿಸೆಂಬರ್ 2022 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ದೇಹಾರೋಗ್ಯದಲ್ಲಿ ಏರುಪೇರಾಗುವ ಸಾಧ‍್ಯತೆ. ನೀವಾಗಿಯೇ ಕೆಲವೊಂದು ಸಮಸ್ಯೆಗಳನ್ನು ಮೈಮೇಲೆಳೆದುಕೊಳ್ಳಲಿದ್ದೀರಿ. ಸಂಗಾತಿಯ ಸಹಕಾರ ನಿರೀಕ್ಷಿಸಬಹುದು. ತಾಳ್ಮೆಯಿರಲಿ.

ವೃಷಭ: ಮಕ್ಕಳ ಭವಿಷ್ಯಕ್ಕಾಗಿ ಕೆಲವೊಂದು ಮಹತ್ವದ ನಿರ್ಧಾರ ಕೈಗೊಳ್ಳಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾದೀತು. ಸರಕಾರಿ ನೌಕರರಿಗೆ ಕಾರ್ಯದೊತ್ತಡ ಕಂಡುಬರಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಮಿಥುನ: ಹೊಸದಾಗಿ ಏರ್ಪಟ್ಟಿರುವ ಸಂಬಂಧಗಳಿಂದ ನಿಮಗೆ ಅನುಕೂಲವಾದೀತು. ನೆರೆಹೊರೆಯವರೊಂದಿಗೆ ಸಂಬಂಧ ವೃದ್ಧಿಯಾಗಲಿದೆ. ಕೈಲಾಗದವರಿಗೆ ಸಹಾಯ ಮಾಡಿ ತೃಪ್ತಿ ಕಂಡುಕೊಳ್ಳಲಿದ್ದೀರಿ. ದೇವತಾ ಪ್ರಾರ್ಥನೆ ಮಾಡಿ.

ಕರ್ಕಟಕ: ಕಟ್ಟಡ ಕಾಮಗಾರಿ ಕೆಲಸಕ್ಕೆ ಚಾಲನೆ ನೀಡಲಿದ್ದೀರಿ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ. ಇಷ್ಟಾರ್ಥ ಸಿದ್ಧಿಗಾಗಿ ದೇವರ ಮೊರೆ ಹೋಗಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ.

ಸಿಂಹ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ಸುಬ್ರಹ್ಮಣ್ಯನ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿದರೆ ಉತ್ತಮ. ಮನೆಯಲ್ಲಿ ಸಂತೋಷಕ್ಕೆ ಕೊರತೆಯಿರದು. ಅನಗತ್ಯ ಚಿಂತೆ ಬೇಡ.

ಕನ್ಯಾ: ಹಿರಿಯರ ದೇಹಾರೋಗ್ಯದ ಬಗ್ಗೆ ಚಿಂತೆಯಾದೀತು. ಸಂಗಾತಿಯ ಸಹಕಾರ ಸಿಗಲಿದೆ. ಕಾರ್ಯ ಕ್ಷೇತ್ರದಲ್ಲಿ ನಿಮ್ಮ ಕೆಲಸಗಳಿಗೆ ಮೇಲಧಿಕಾರಿಗಳಿಂದ ಮೆಚ್ಚುಗೆ ವ್ಯಕ್ತವಾದೀತು. ಕಿರು ಓಡಾಟ ನಡೆಸಬೇಕಾಗುತ್ತದೆ.

ತುಲಾ: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಇಷ್ಟ ಭೋಜನ ಮಾಡಲಿದ್ದೀರಿ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ವೃಶ್ಚಿಕ: ಮನಸ್ಸಿನಲ್ಲಿ ಅಂದುಕೊಂಡಿದ್ದನ್ನು ಸಾಧಿಸಬೇಕಾದರೆ ಅಡೆತಡೆಗಳು ಬಂದೀತು. ಎಲ್ಲವನ್ನೂ ನಿಭಾಯಿಸಿಕೊಂಡು ಹೋಗಲು ಸಂಗಾತಿಯ ಸಹಕಾರ ಸಿಗುವುದು. ಮಕ್ಕಳಿಂದ ಸಂತೋಷದ ವಾರ್ತೆ ಕೇಳಿಬಂದೀತು.

ಧನು: ಹೊಸ ಉದ್ಯೋಗಕ್ಕೆ ಪ್ರಯತ್ನಿಸುತ್ತಿದ್ದರೆ ತಕ್ಕ ಫಲ ಸಿಗಲಿದೆ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ಒದಗಿಬರಲಿದೆ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಬೇಕಾಗುತ್ತದೆ. ವ್ಯಾಪಾರೀ ವರ್ಗದವರಿಗೆ ಆರ್ಥಿಕವಾಗಿ ಮುನ್ನಡೆ.

ಮಕರ: ಕೌಟುಂಬಿಕವಾಗಿ ಕೆಲವೊಂದು ಭಿನ್ನಾಭಿಪ್ರಾಯಗಳು ಬಂದರೂ ಸರಿದೂಗಿಸಿಕೊಂಡು ಹೋಗಬೇಕಾಗುತ್ತದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾದೀತು.

ಕುಂಭ: ನಿಮ್ಮ ಕೆಲಸ ಕಾರ್ಯಗಳಿಗೆ ಮಾತೃ ಸಮಾನರಿಂದ ಸಹಾಯ ಒದಗಿಬಂದೀತು. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಪಾಲು ಬಂಡವಾಳ ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಂಡುಬರಲಿದೆ.

ಮೀನ: ಮಹಿಳೆಯರಿಗೆ ಹಿರಿಯರಿಂದ ಬಂದ ಬಳವಳಿ ಸಂರಕ್ಷಿಸುವ ಜವಾಬ್ಧಾರಿ ಹೆಗಲಿಗೇರಲಿದೆ. ಆಸ್ತಿ ವಿಚಾರದಲ್ಲಿ ಮುನ್ನಡೆ ಕಂಡುಬಂದೀತು. ಪ್ರಯಾಣದಲ್ಲಿ ಕೆಲವು ವಿಘ್ನಗಳು ಎದುರಾದೀತು. ಕುಲದೇವರ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ