ಮೇಷ: ಹೊಸದಾಗಿ ಆರಂಭಿಸಿದ್ದ ಉದ್ದಿಮೆಗಳಲ್ಲಿ ನಷ್ಟ ಕಂಡುಬಂದೀತು. ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವುದು ಅಗತ್ಯ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ಸಂಗಾತಿಯ ಮಾತುಗಳು ನಿಮಗೆ ಸತ್ಯವೆನಿಸಿದರೂ ಕಹಿಯೆನಿಸೀತು.
ವೃಷಭ: ಯೋಗ್ಯ ವಯಸ್ಕರಿಗೆ ಸೂಕ್ತ ವೈವಾಹಿಕ ಪ್ರಸ್ತಾಪಗಳು ಬರಲಿವೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಯೋಗ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕದೇ ಇದ್ದರೆ ಆರೋಗ್ಯ ಸಮಸ್ಯೆ ಎದುರಿಸಬೇಕಾದೀತು.
ಮಿಥುನ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನಿಸಲಿದ್ದೀರಿ. ಹೊಸದಾಗಿ ಮದುವೆಯಾದವರಿಗೆ ಸುಂದರ ಕ್ಷಣ ಕಳೆಯುವ ಯೋಗ. ಹಿರಿಯರಿಗೆ ದೇಹಾರೋಗ್ಯದಲ್ಲಿ ಸುಧಾರಣೆ.
ಕರ್ಕಟಕ: ನಿಮ್ಮ ಮನೋಭಿಲಾಷೆಗಳು ಪೂರ್ತಿಯಾಗಲಿವೆ. ಕೌಟುಂಬಿಕವಾಗಿ ಸುಖ, ಸಮೃದ್ಧಿ ಕಂಡುಬರಲಿದೆ. ನೆರೆಹೊರೆಯವರೊಂದಿಗೆ ಸಂಬಂಧ ಸುಧಾರಣೆಯಾದೀತು. ಕಿರು ಸಂಚಾರ ಮಾಡಬೇಕಾಗುತ್ತದೆ.
ಸಿಂಹ: ದೈವಾನುಗ್ರಹದಿಂದ ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ. ಅನಿರೀಕ್ಷಿತ ನೆಂಟರಿಷ್ಟರ ಆಗಮನ ಸಾಧ್ಯತೆ. ಶುಭ ಮಂಗಲ ಕಾರ್ಯನೆರವೇರಿಸಲಿದ್ದೀರಿ. ಹಿರಿಯರ ಸಲಹೆಗಳನ್ನು ಪಾಲಿಸುವುದು ಉತ್ತಮ.
ಕನ್ಯಾ: ಅಧ್ಯಯನಶೀಲರಿಗೆ ಹೊಸ ಅವಕಾಶಗಳು ಸಿಗಲಿವೆ. ಮಕ್ಕಳ ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಸಾಮಾಜಿಕವಾಗಿ ಸ್ಥಾನಮಾನ ಹೆಚ್ಚಲಿದೆ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು.
ತುಲಾ: ನಿಮ್ಮಲ್ಲಿರುವ ಕ್ರಿಯಾತ್ಮಕ ಯೋಜನೆಗಳನ್ನು ಜಾರಿಗೆ ತರಲು ಇದು ಸಕಾಲ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಕೈ ಹಾಕಲಿದ್ದೀರಿ. ಗೃಹೋಪಯೋಗಿ ವಸ್ತುಗಳಿಗಾಗಿ ಹಣಕಾಸಿನ ಖರ್ಚು ವೆಚ್ಚ ಕಂಡುಬಂದೀತು.
ವೃಶ್ಚಿಕ: ನಿಮ್ಮ ಮಾತಿನಿಂದ ಇತರರಿಗೆ ಕಿರಿ ಕಿರಿಯಾದರೂ ಅಚ್ಚರಿಯಿಲ್ಲ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಗುರುಹಿರಿಯರ ಪ್ರೋತ್ಸಾಹದಿಂದ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಇರಲಿದೆ. ತಾಳ್ಮೆಯಿರಲಿ.
ಧನು: ಉದ್ಯೋಗ, ವ್ಯವಹಾರಗಳಲ್ಲಿ ನಿಮ್ಮ ವಾಕ್ಚತುರತೆಯಿಂದ ಸಫಲತೆ. ಸಾಕು ಪ್ರಾಣಿಗಳಿಂದ ತೊಂದರೆಗಳು ಎದುರಾಗುವ ಸಾಧ್ಯತೆ. ಹಣಕಾಸಿನ ಹರಿವಿದ್ದರೂ ಅಷ್ಟೇ ಖರ್ಚು ವೆಚ್ಚಗಳೂ ಇರಲಿವೆ.
ಮಕರ: ದೇವತಾ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ. ಇಂದು ನೀವು ಬಹಳ ದಿನಗಳಿಂದ ಭೇಟಿ ಮಾಡಬೇಕೆಂದಿದ್ದ ವ್ಯಕ್ತಿಗಳನ್ನು ಭೇಟಿಯಾಗಲಿದ್ದೀರಿ. ದಾಯಾದಿ ಕಲಹಗಳಿಗೆ ಪರಿಹಾರ ಕಂಡುಕೊಳ್ಳಲಿದ್ದೀರಿ.
ಕುಂಭ: ಮಕ್ಕಳ ವಿಚಾರದಲ್ಲಿ ಖರ್ಚು ವೆಚ್ಚಗಳು ಕಂಡುಬಂದೀತು. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಸಾಧ್ಯತೆ. ಪ್ರೇಮಿಗಳು ಪರಸ್ಪರ ಮನಸ್ಸಿನ ಮಾತು ಹೇಳಿಕೊಳ್ಳಲಿದ್ದಾರೆ. ದುಂದು ವೆಚ್ಚಗಳಿಗೆಕ ಕಡಿವಾಣವಿರಲಿ.
ಮೀನ: ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಬೇಡ. ವಿದ್ಯಾರ್ಥಿಗಳಿಗೆ ಏಕಾಗ್ರತೆಗೆ ಭಂಗ ಉಂಟಾದೀತು. ಸ್ವಯಂ ಉದ್ಯೋಗಿಗಳಿಗೆ ಮುನ್ನಡೆಯ ಯೋಗ. ಮಹಿಳೆಯರಿಗೆ ತವರಿನ ಕಡೆಯವರ ಭೇಟಿ ಯೋಗ.