ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 17 ಜನವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಯಾವುದೋ ವಿಚಾರಕ್ಕೆ ಮಾನಸಿಕವಾಗಿ ಕೊರಗುವುದನ್ನು ಬಿಟ್ಟು ಪ್ರಾಯೋಗಿಕವಾಗಿ ಯೋಚಿಸಿ ಮುನ್ನಡೆಯುವುದು ಉತ್ತಮ. ವಿದ್ಯಾರ್ಥಿಗಳು ಉತ್ತಮ ಅವಕಾಶಗಳು ಬಂದಾಗ ಬಳಸಿಕೊಳ್ಳುವುದು ಉತ್ತಮ.

ವೃಷಭ: ಪರರ ಬಗ್ಗೆ ಅತಿಯಾದ ಚಿಂತೆ ಮಾಡುವುದನ್ನು ಬಿಟ್ಟು ವೈಯಕ್ತಿಕ ಜೀವನದ ಕಡೆಗೆ ಗಮನಕೊಡಿ. ಪ್ರೀತಿ ಪಾತ್ರರ ಸಲಹೆಗಳನ್ನು ಪಾಲಿಸಬೇಕಾಗುತ್ತದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಮಿಥುನ: ಎಷ್ಟೇ ಅಸಮಾಧಾನಗಳಿದ್ದರೂ ಆತ್ಮೀಯರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಮುಂದೆ ಸಾಗಬೇಕಾಗುತ್ತದೆ. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ. ವ್ಯಾಪಾರಿಗಳಿಗೆ ಹಿನ್ನಡೆಯಾದೀತು.

ಕರ್ಕಟಕ: ಇನ್ನೊಬ್ಬರು ನಿಮ್ಮ ಬಗ್ಗೆ ಮಾತನಾಡಲು ಅವಕಾಶ ಕೊಡಬೇಡಿ. ಸಂಗಾತಿಯ ಕಷ್ಟಗಳಿಗೆ ಹೆಗಲುಕೊಡಬೇಕಾಗುತ್ತದೆ. ನಿಮ್ಮಲ್ಲಿರುವ ಕ್ರಿಯಾತ್ಮಕ ಶಕ್ತಿಯನ್ನು ಹೊರತರಲು ಅವಕಾಶ ಸಿಗುವುದು.

ಸಿಂಹ: ಕಾರ್ಯರಂಗದಲ್ಲಿ ಎಷ್ಟೇ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಸ್ವಯಂ ವೃತ್ತಿಯವರಿಗೆ ಹಿತ ಶತ್ರುಗಳ ಕಾಟ ಕಂಡುಬಂದೀತು.

ಕನ್ಯಾ: ವಿದ್ಯಾರ್ಥಿಗಳಿಗೆ, ಅಧ‍್ಯಯನಶೀಲರಿಗೆ ಪರವೂರಿಗೆ ಪ್ರಯಾಣಿಸುವ ಅವಕಾಶ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗಲಿದೆ. ಬಹಳ ದಿನಗಳಿಂದ ಬಾಕಿಯಿದ್ದ ಹರಕೆ ತೀರಿಸಲು ಮುಂದಾಗಲಿದ್ದೀರಿ.

ತುಲಾ: ರಾಜಕೀಯ ರಂಗದಲ್ಲಿರುವವರಿಗೆ ಉನ್ನತಿಯ ಯೋಗ. ಉದ್ಯೋಗ, ವ್ಯವಹಾರದಲ್ಲಿ ಸ್ಥಾನ ಮಾನ ವೃದ್ಧಿಯಾಗಲಿದೆ. ಹಣಕಾಸಿನ ವಿಚಾರದಲ್ಲಿ ಅಪರಿಚಿತರನ್ನು ನಂಬಿ ವ್ಯವಹರಿಸಲು ಹೋಗಬೇಡಿ. ಅನಗತ್ಯ ಚಿಂತೆ ಬೇಡ.

ವೃಶ್ಚಿಕ: ಮನಸ್ಸಿನಲ್ಲಿರುವ ಕೆಲಸವನ್ನು ಕಾರ್ಯಗತಗೊಳಿಸಲು ಪ್ರಯತ್ನಿಸಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ದೇವತಾ ಪ್ರಾರ್ಥನೆ ಮಾಡಿ.

ಧನು: ಮನೆಗೆ ನೆಂಟರಿಷ್ಟರ ಆಗಮನವಾಗಲಿದ್ದು, ವಿಶೇಷ ಭೋಜನ ತಯಾರಿಸಲಿದ್ದೀರಿ. ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾದ ಸಂತೋಷ ನಿಮ್ಮದಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಸಾಧ‍್ಯತೆ.

ಮಕರ: ಮನೆಯಲ್ಲಿ ಸಂತೋಷ, ಸಮೃದ್ಧಿಯಿರಲಿದೆ. ಕೌಟುಂಬಿಕವಾಗಿ ಕ್ಷೇಮಾಭಿವೃದ್ಧಿಗಾಗಿ ದೇವತಾ ಕಾರ್ಯ ನೆರವೇರಿಸಲಿದ್ದೀರಿ. ದಂಪತಿಗಳಲ್ಲಿ ಹೊಂದಾಣಿಕೆ ಅಗತ್ಯ. ಕಿರು ಸಂಚಾರ ಮಾಡಬೇಕಾಗುತ್ತದೆ.

ಕುಂಭ: ಕೆಳ ಹಂತದ ನೌಕರರಿಗೆ ಉದ್ಯೋಗ ನಷ್ಟವಾಗುವ ಸಾಧ‍್ಯತೆ. ಸ್ವಯಂ ವೃತ್ತಿಯವರಿಗೆ ಅಧಿಕ ಶ್ರಮವಿದ್ದರೂ ಅದಕ್ಕೆ ತಕ್ಕ ಫಲ ಸಿಗದೇ ನಿರಾಸೆಯಾದೀತು. ಗುರುಹಿರಿಯರ ಸಲಹೆ ಪಾಲಿಸಬೇಕಾಗುತ್ತದೆ. ದೇವತಾ ಪ್ರಾರ್ಥನೆ ಮಾಡಿ.

ಮೀನ: ಬಹಿರಂಗವಾಗಿ ಕೆಲವೊಂದು ವಿಚಾರ ಹೇಳಿಕೊಳ್ಳಲಾಗದೇ ಮನಸ್ಸಿನಲ್ಲೇ ಕೊರಗುವ ಪರಿಸ್ಥಿತಿ ಎದುರಾದೀತು. ಗೃಹದಲ್ಲಿ ಅಶಾಂತಿಗೆ ಅವಕಾಶ ಕೊಡಬೇಡಿ. ಮಕ್ಕಳ ಸಂತೋಷಕ್ಕಾಗಿ ಕೆಲವೊಂದು ಕೆಲಸ ಮಾಡಬೇಕಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ