ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಸೋಮವಾರ, 23 ಜನವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಾಂಸಾರಿಕವಾಗಿ ನೀವು ಕೆಲವೊಂದು ಮಹತ್ವದ ತೀರ್ಮಾನ ಕೈಗೊಳ್ಳಬೇಕಾದ ದಿನವಿದು. ದೂರ ಪ್ರಯಾಣಕ್ಕೆ ಸಿದ‍್ಧತೆ ನಡೆಸಿಕೊಳ್ಳಬೇಕಾಗುತ್ತದೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ.

ವೃಷಭ: ಹಣಕಾಸಿನ ವಿಚಾರದಲ್ಲಿ ಹಿಡಿತವಿಲ್ಲದೇ ಹೋದರೆ ಭವಿಷ್ಯಕ್ಕೆ ತೊಂದರೆಯಾದೀತು. ಸಂಗಾತಿಯ ಸಮಯೋಚಿತ ಸಲಹೆ ಉಪಯೋಗಕ್ಕೆ ಬರಲಿದೆ. ತಾಂತ್ರಿಕ ವೃತ್ತಿಯವರಿಗೆ ಮುನ್ನಡೆ ಕಂಡುಬರಲಿದೆ. ತಾಳ್ಮೆಯಿರಲಿ.

ಮಿಥುನ: ಆತುರದ ಬುದ್ಧಿಗೆ ಕೈ ಕೊಟ್ಟು ಎಡವಟ್ಟು ಮಾಡಿಕೊಳ್ಳಬೇಡಿ. ಸಂಗಾತಿಯ ಸಲಹೆಗಳನ್ನು ಪಾಲಿಸುವುದು ಉತ್ತಮ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ.  ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರುವುದು.

ಕರ್ಕಟಕ: ಉದ್ಯೋಗ, ವ್ಯವಹಾರಗಳಲ್ಲಿ ನಿಮ್ಮ ನಿಷ್ಠೆಗೆ ತಕ್ಕ ಫಲ ಸಿಗಲಿದೆ. ನಾನಾ ರೀತಿಯ ಹೂಡಿಕೆ ಮಾಡಲಿದ್ದೀರಿ. ವಿಲಾಸೀ ಜೀವನ ಮಾಡುವ ಯೋಗವಿದೆ. ಅವಿವಾಹಿತರಿಗೆ ವೈವಾಹಿಕ ಪ್ರಸ್ತಾಪಗಳು ಬರಲಿವೆ.

ಸಿಂಹ: ಸರಿಯಾದ ರೀತಿಯಲ್ಲಿ ಯೋಚನೆ ಮಾಡಿ ನಿರ್ಧಾರ ತೆಗೆದುಕೊಳ್ಳುವುದರಿಂದ ಸಂಭಾವ್ಯ ಸಮಸ್ಯೆಗಳಿಂದ ಪಾರಾಗಲಿದ್ದೀರಿ. ಹಿರಿಯರ ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ದೇವತಾ ಪ್ರಾರ್ಥನೆ ಮಾಡಿ.

ಕನ್ಯಾ: ಉದ್ದೇಶಿತ ಕೆಲಸಗಳಿಗೆ ವಿಘ್ನಗಳು ಬಂದರೂ ಅಂತಿಮ ಜಯ ನಿಮ್ಮದಾಗಲಿದೆ. ಸಂಗಾತಿಯ ಸಹಕಾರ ಕಂಡುಬರುವುದು. ದಾಂಪತ್ಯದಲ್ಲಿ ಸುಖ, ಸಮೃದ್ಧಿಯಿರಲಿದೆ. ಮಕ್ಕಳಿಂದ ಸಂತೋಷ ಸಿಗುವುದು.

ತುಲಾ: ನಿಮ್ಮ ಆಪ್ತರೇ ನಿಮ್ಮ ಕೆಲಸ ಕಾರ್ಯಗಳಿಗೆ ತೊಂದರೆ ನೀಡಿಯಾರು. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ತಾಳ್ಮೆ ಅಗತ್ಯ.

ವೃಶ್ಚಿಕ: ಉದ್ಯೋಗ, ವ್ಯವಹಾರ ನಿಮಿತ್ತ ಪರವೂರಿಗೆ ಪ್ರಯಾಣ ಮಾಡಬೇಕಾಗಿ ಬರಲಿದೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಕಿರಿಯರ ಸಲಹೆಗಳೂ ಉಪಯುಕ್ತವೆನಿಸಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಧನು: ಮನೆಯಲ್ಲಿ ಕೆಲವೊಂದು ಸಣ್ಣ ಪುಟ್ಟ ಮಾರ್ಪಾಡುಗಳನ್ನು ಮಾಡಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾದೀತು. ಸರಕಾರೀ ಕೆಲಸಗಳಲ್ಲಿ ಮುನ್ನಡೆ. ಸಂಗಾತಿಯ ಸಲಹೆ ಪಾಲಿಸುವದು ಉತ್ತಮ.

ಮಕರ: ವಿದ್ಯಾರ್ಥಿಗಳಿಗೆ ಬಯಸಿದ್ದು ಸಿಗುವ ಯೋಗ. ಕಾರ್ಯಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆಗೊಳಗಾಗಲಿದ್ದೀರಿ. ಹಣಕಾಸಿನ ವಿಚಾರದಲ್ಲಿ ಕಷ್ಟಗಳು ಬಂದೀತು. ಗುರು ಹಿರಿಯರ ಪ್ರೋತ್ಸಾಹ ಕಂಡುಬರುವುದು.

ಕುಂಭ: ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ಕಂಡುಬರಲಿದೆ. ಹಣಕಾಸಿನ ಖರ್ಚು ವೆಚ್ಚ ಮಾಡುವ ಮೊದಲು ನೂರು ಬಾರಿ ಯೋಚಿಸಿ. ಸತ್ಕಾರ್ಯಗಳಿಗೆ ಕೈ ಜೋಡಿಸಲಿದ್ದೀರಿ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು.

ಮೀನ: ಕೆಲಸ ಕಾರ್ಯಗಳಲ್ಲಿ ಅಡೆತಡೆಗಳಿದ್ದರೂ ಅಂತಿಮ ಜಯ ನಿಮ್ಮದಾಗಲಿದೆ. ದೂರದ ನೆಂಟರಿಷ್ಟರ ಭೇಟಿ ಸಾಧ್ಯತೆ. ಆದಾಯಕ್ಕೆ ಸಮನಾದ ಖರ್ಚು ವೆಚ್ಚವಿರಲಿದೆ. ಕಾರ್ಯನಿಮಿತ್ತ ಓಡಾಟ ನಡೆಸಬೇಕಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ