ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 24 ಜನವರಿ 2023 (08:10 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಸಂತಸದಿಂದ ಕಾಲ ಕಳೆಯುವ ಅವಕಾಶ ಸಿಕ್ಕರೂ ನಿಮ್ಮ ಸ್ವಯಂಕೃತ ಅಪರಾಧದಿಂದ ಕಳೆದುಕೊಳ್ಳಲಿದ್ದೀರಿ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಬೇಕಾಗುತ್ತದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ವೃಷಭ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ ನಿಮಗೆ ಸಿಗಲಿದೆ. ಗುರು ಹಿರಿಯರ ಆಶೀರ್ವಾದ ನಿಮ್ಮ ಮೇಲಿರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತಿಯ ಯೋಗ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮಿಥುನ: ನಿರುದ್ಯೋಗಿಳಿಗೆ ಉತ್ತಮ ಅವಕಾಶಗಳು ಸಿಗಲಿದೆ. ಸರಿಯಾದ ರೀತಿಯಲ್ಲಿ ಬಳಸಬೇಕು. ಇಷ್ಟಮಿತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಸಾಂಸಾರಿಕವಾಗಿ ಸುಖ ಸಮೃದ್ಧಿಯಿರಲಿದೆ. ಅನಗತ್ಯ ಚಿಂತೆ ಬೇಡ.

ಕರ್ಕಟಕ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಪಾಲುಗಾರಿಕಾ ವ್ಯವಹಾರದಲ್ಲಿ ಮುನ್ನಡೆಯಿದ್ದರೂ ಹಿತಶತ್ರುಗಳ ಕಾಟ ಕಂಡುಬಂದೀತು.

ಸಿಂಹ: ವಿವೇಚನೆಯಿಂದ ತೆಗೆದುಕೊಳ್ಳುವ ನಿರ್ಧಾರ ಉಪಯೋಗಕ್ಕೆ ಬರಲಿದೆ. ಕಾರ್ಯ ಸಾಧನೆಗಾಗಿ ಸತತ ಪರಿಶ್ರಮ ಪಡಬೇಕಾಗುತ್ತದೆ. ದೂರದ ವ್ಯವಹಾರಗಳಿಂದ ಆದಾಯ ವೃದ್ಧಿಯಾಗಲಿದೆ. ಅನಗತ್ಯ ಚಿಂತೆ ಬೇಡ.

ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಸ್ಥಾನ ಮಾನಕ್ಕೆ ನಿರಂತರ ಪ್ರಯತ್ನ ನಡೆಸಬೇಕಾಗುತ್ತದೆ. ಕ್ರಿಯಾತ್ಮಕ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ.

ತುಲಾ: ಪ್ರಯಾಣದಲ್ಲಿ ಅಡಚಣೆ ಉಂಟಾದೀತು. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ನೆರೆಹೊರೆಯವರಿಗೆ ಸಹಾಯ ಮಾಡಲು ಮುಂದಾಗಲಿದ್ದೀರಿ.

ವೃಶ್ಚಿಕ: ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಮುನ್ನಡೆಯಿರಲಿದೆ. ಆಸ್ತಿ ವಿವಾದಗಳು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಯಲಿದೆ. ಸರಕಾರೀ ಕೆಲಸಕ್ಕಾಗಿ ಓಡಾಟ ನಡೆಸಬೇಕಾಗುತ್ತದೆ. ಹೂಡಿಕೆ ವ್ಯವಹಾರಗಳಲ್ಲಿ ಲಾಭ ಕಂಡುಬರಲಿದೆ.

ಧನು: ವಿಶೇಷ ಅತಿಥಿಗಳನ್ನು ಸ್ವಾಗತಿಸಲು ಸಿದ್ಧರಾಗಬೇಕಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ ತೋರಿಸಲಿದ್ದೀರಿ. ಭೂಮ್ಯಾದಿ ವ್ಯವಹಾರಗಳಲ್ಲಿ ಮುನ್ನಡೆ ಕಂಡುಬರಲಿದೆ. ಸಾಮಾಜಿಕವಾಗಿ ಸ್ಥಾನ ಮಾನ ವೃದ್ಧಿಯಾಗಲಿದೆ.

ಮಕರ: ಸಹೋದ್ಯೋಗಿಗಳಿಗೆ ಕಷ್ಟದ ಸಮಯದಲ್ಲಿ ಸಹಾಯ ಸಿಗಲಿದೆ. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ಅವಕಾಶ ಸಿಗಲಿದೆ. ಯಂತ್ರೋಪಕರಣಗಳಿಂದ ತೊಂದರೆಯಾದೀತು. ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ.

ಕುಂಭ: ಉದ್ಯಮಿಗಳಿಗೆ ಉನ್ನತಿಯ ಯೋಗ. ಕೊಡು-ಕೊಳ್ಳುವ ವ್ಯವಹಾರದಲ್ಲಿ ಮುನ್ನಡೆ ಕಂಡುಬರಲಿದೆ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ದುಂದು ವೆಚ್ಚಗಳಿಗೆ ಕಡಿವಾಣವಿರಲಿ.

ಮೀನ: ಮನಸ್ಸಿನಲ್ಲಿರುವ ಆಸೆ, ಆಕಾಂಕ್ಷೆಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲಿದ್ದೀರಿ. ವಾಹನ ಖರೀದಿಸುವ ನಿಮ್ಮ ಕನಸು ಸದ್ಯದಲ್ಲೇ ನನಸಾಗಲಿದೆ. ಯಾವುದೇ ಕೆಲಸದಲ್ಲೂ ತೊಡಗಿಸಿಕೊಳ್ಳಲು ಆರಂಭದಲ್ಲಿ ಉದಾಸೀನತೆ ಕಂಡುಬಂದೀತು. ತಾಳ್ಮೆಯಿರಲಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ