ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬುಧವಾರ, 25 ಜನವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಅನಿರೀಕ್ಷಿತವಾಗಿ ಬರುವ ಧನಸಂಪತ್ತು ಬಳಕೆಗೆ ನಾನಾ ರೀತಿಯ ಯೋಜನೆಗಳು ಹೊಳೆಯಲಿವೆ. ಆಪ್ತರ ಸಲಹೆ ಪಡೆಯಲಿದ್ದೀರಿ.  ಉತ್ತಮ ಮಾತುಗಾರಿಕೆಯಿಂದ ಇತರರನ್ನು ಮೋಡಿ ಮಾಡಲಿದ್ದೀರಿ. ಅನಗತ್ಯ ಚಿಂತೆ ಬೇಡ.

ವೃಷಭ: ಉದ್ಯೋಗ, ವ್ಯವಹಾರದಲ್ಲಿ ಸಮಯಕ್ಕೆ ಸರಿಯಾಗಿ ನಿರ್ಧಾರ ತೆಗೆದುಕೊಳ್ಳಬೇಕು. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ದಿನದಂತ್ಯಕ್ಕೆ ನೆಮ್ಮದಿ.

ಮಿಥುನ: ಕಾರ್ಯರಂಗದಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಬಂಧು ಮಿತ್ರರ ಸಹಕಾರ ಕಂಡುಬರಲಿದೆ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಆಸ್ತಿ ವಿಚಾರದಲ್ಲಿ ಹಿರಿಯರ ಮಧ್ಯಸ್ಥಿಕೆಯಿಂದ ಸಮಸ್ಯೆ ಬಗೆಹರಿಯಲಿದೆ.

ಕರ್ಕಟಕ: ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ಮಕ್ಕಳ ವಿದ್ಯಾಭ್ಯಾಸ ಚಿಂತೆಗೆ ಕಾರಣವಾದೀತು. ಹೊಸದಾಗಿ ಪರಿಚಯವಾಗಿದ್ದವರು ನಿಮ್ಮ ನೆರವಿಗೆ ಬರಲಿದ್ದಾರೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು.

ಸಿಂಹ: ಅನ್ಯರ ವ್ಯವಹಾರದಲ್ಲಿ ಮೂಗು ತೂರಿಸಲು ಹೋಗಿ ತೊಂದರೆಗೆ ಸಿಲುಕಿಕೊಳ್ಳಬೇಡಿ. ನೂತನ ದಂಪತಿಗಳಿಗೆ ಸುಂದರ ಕ್ಷಣ ಕಳೆಯುವ ಯೋಗ. ಕಟ್ಟಡ ಕಾಮಗಾರಿ ಕೆಲಸಕ್ಕೆ ಕೈ ಹಾಕಲು ಸಕಾಲ.

ಕನ್ಯಾ: ಪಾಲುದಾರಿಕಾ ವ್ಯವಹಾರದಲ್ಲಿ ನಿರೀಕ್ಷಿತ ಸ್ಥಾನ ಮಾನ ಸಿಗಲಿದೆ. ಹಣಕಾಸಿನ ಹರಿವಿಗೆ ತೊಂದರೆಯಾಗದು. ಹಿರಿಯರಿಗೆ ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ ಸಿಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ನಯವಾಗಿ ಮಾತನಾಡಿ ನಿಮ್ಮನ್ನು ವಂಚಿಸುವವರಿರುತ್ತಾರೆ. ವ್ಯವಹಾರದಲ್ಲಿ ಪಾರದರ್ಶಕತೆಯಿರಲಿ. ಮಕ್ಕಳ ನಿಮಿತ್ತ ಶ್ರಮವಾದೀತು. ಶುಭ ಕೆಲಸಗಳಿಗೆ ಚಾಲನೆ ನೀಡಲಿದ್ದೀರಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.

ವೃಶ್ಚಿಕ: ವ್ಯವಹಾರ ನಿಮಿತ್ತ ಪರವೂರಿಗೆ ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಲಿದೆ. ಕಾರ್ಯರಂಗದಲ್ಲಿ ಪ್ರಭಾವೀ ವ್ಯಕ್ತಿಗಳ ಭೇಟಿ. ನಿರೀಕ್ಷಿತ ಸಮಯದಲ್ಲಿ ಧನಾಗಮನವಾಗಲಿದೆ. ಕುಲದೇವರ ಪ್ರಾರ್ಥನೆ ಮಾಡಿ.

ಧನು: ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಬಹಳ ದಿನಗಳ ನಂತರ ಆಪ್ತರನ್ನು ಭೇಟಿಯಾಗಲಿರುವ ಸಂತೋಷ ನಿಮ್ಮಲ್ಲಿರಲಿದೆ. ದೇಹಾರೋಗ್ಯದ ಬಗ್ಗೆ ಉಪೇಕ್ಷೆ ಬೇಡ.

ಮಕರ: ಮನಸ್ಸಿನ ಭಾವನೆಗಳನ್ನು ಅದುಮಿಟ್ಟುಕೊಳ್ಳಬೇಕಾದ ಸಂದರ್ಭ ಬಂದೀತು. ಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಭೂಮ್ಯಾದಿ ವ್ಯವಹಾರಗಳಲ್ಲಿ ಅಡೆತಡೆಗಳು ಬಂದೀತು. ದೇವತಾ ಪ್ರಾರ್ಥನೆ ಮಾಡುವುದು ಉತ್ತಮ.

ಕುಂಭ: ಬಹಳ ದಿನಗಳಿಂದ ಬಾಕಿಯಿದ್ದ ಕೆಲಸ ಪೂರ್ತಿ ಮಾಡಿದ ಸಂತೋಷ ನಿಮ್ಮದಾಗಲಿದೆ. ಸಂತಾನ ಹೀನ ದಂಪತಿ ದೇವರ ಮೊರೆ ಹೋಗಲಿದ್ದಾರೆ. ವಾಹನ ಸಂಚಾರದಲ್ಲಿ ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ನೆಮ್ಮದಿ.

ಮೀನ: ಕೌಟುಂಬಿಕವಾಗಿ ಸುಖ ಸಂತೋಷವಿದ್ದರೂ ಕೆಲವೊಂದು ಅನಿರೀಕ್ಷಿತ ಖರ್ಚು ವೆಚ್ಚಗಳು ಬಂದೊದಗೀತು. ಕಾರ್ಯರಂಗದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದ್ದೀರಿ. ಕಿರು ಸಂಚಾರ ಮಾಡಬೇಕಾಗುತ್ತದೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ