ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 26 ಜನವರಿ 2023 (07:00 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಗುರುಹಿರಿಯರ ಪ್ರೀತಿ ಸಂಪಾದಿಸಲಿದ್ದೀರಿ. ಎಷ್ಟೋ ದಿನಗಳ ನಂತರ ಆತ್ಮೀಯರನ್ನು ಭೇಟಿಯಾದ ಸಂತೋಷ ನಿಮ್ಮದಾಗುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ.

ವೃಷಭ: ಇಂದಿನ ದಿನ ನಿಮಗೆ ಅತ್ಯಂತ ಶುಭವಾಗಿದ್ದು, ಶುಭ ಕೆಲಸಕ್ಕೆ ಚಾಲನೆ ನೀಡಲು ಸಕಾಲ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ. ವಿದ್ಯಾರ್ಥಿಗಳು ಬಿಡುವಿನ ವೇಳೆಯ ಸದುಪಯೋಗ ಪಡಿಸಿಕೊಳ್ಳಲಿದ್ದಾರೆ.

ಮಿಥುನ: ಹಣಕಾಸಿನ ವಿಚಾರದಲ್ಲಿ ಆಪ್ತರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ವಹಿಸಿ. ನೂತನ ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಿದ್ದೀರಿ. ಸಂಗಾತಿಯ ಸಲಹೆ ಪಾಲಿಸುವುದು ಉತ್ತಮ. ತಾಳ್ಮೆಯಿರಲಿ.

ಕರ್ಕಟಕ: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷಿತ ಪ್ರಗತಿ ಕಂಡುಬರಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚ ಮಾಡಲಿದ್ದೀರಿ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸಲಿದ್ದೀರಿ. ಚಿಂತೆ ಬೇಡ.

ಸಿಂಹ: ದೈವಾನುಕೂಲದಿಂದ ಇಂದು ನೀವು ಕೈ ಹಾಕುವ ಕೆಲಸಗಳಲ್ಲಿ ಯಶಸ್ಸು ಕಾಣಲಿದ್ದೀರಿ. ದೂರದ ವ್ಯವಹಾರಗಳಿಂದ ಲಾಭ ಕಂಡುಬರುವುದು. ದೀರ್ಘ ಪ್ರಯಾಣದಿಂದ ದೇಹಾಯಾಸವಾದೀತು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ವಿದೇಶಗಳಲ್ಲಿ ಉದ್ಯೋಗದಲ್ಲಿರುವವರಿಗೆ ತವರಿನ ಭೇಟಿಯ ಸುಯೋಗ. ಹಣಕಾಸಿನ ಖರ್ಚು ವೆಚ್ಚದಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಮಕ್ಕಳಿಂದ ಸಂತೋಷ ಪ್ರಾಪ್ತಿಯಾಗುವುದು.

ತುಲಾ: ನಿಮ್ಮ ವಾಕ್ಚತುರತೆಯಿಂದ ಕಾರ್ಯಕ್ಷೇತ್ರದಲ್ಲಿ ಮುನ್ನಡೆ ಸಾಧಿಸಲಿದ್ದೀರಿ. ಆರ್ಥಿಕವಾಗಿ ಧನ ಗಳಿಕೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳಲಿದ್ದೀರಿ. ಗೃಹಿಣಿಯರು ಅತಿಥಿ ಸತ್ಕಾರಕ್ಕೆ ಸಿದ್ಧರಾಗಬೇಕಾಗುತ್ತದೆ.

ವೃಶ್ಚಿಕ: ಸಣ್ಣ ಪ್ರಮಾಣದ ಆರೋಗ್ಯ ಸಮಸ್ಯೆಯಾದರೂ ಆತಂಕಗೊಳ್ಳುವ ಸ್ಥಿತಿ ನಿಮ್ಮದಾಗುವುದು. ಸಂಗಾತಿಯ ಸಾಂತ್ವನ ಮನಸ್ಸಿಗೆ ನೆಮ್ಮದಿ ನೀಡಲಿದೆ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾಗುವುದು.

ಧನು: ಉದ್ಯೋಗ, ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿ ಕಂಡುಬರಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಲ್ಯಾಣ ಪ್ರಾಪ್ತಿಯಾಗಲಿದೆ. ವಿದ್ಯಾರ್ಥಿಗಳಿಗೆ ಏಕಾಗ್ರತೆಯ ಕೊರತೆ ಕಂಡುಬಂದೀತು. ತಾಳ್ಮೆಯಿರಲಿ.

ಮಕರ: ಉದ್ವೇಗಕ್ಕೊಳಗಾಗಿ ಮಾತು, ನಿರ್ಧಾರ ತೆಗೆದುಕೊಳ್ಳುವ ಪ್ರವೃತ್ತಿ ಕಂಡುಬರಲಿದೆ. ಗುರುಹಿರಿಯರ ಸಲಹೆ ಪಾಲಿಸುವುದು ಉತ್ತಮ. ಇಂದು ಯಾರಿಗೂ ಸಾಲ ನೀಡಲು ಹೋಗಬೇಡಿ, ಮರಳಿ ಬಾರದು.

ಕುಂಭ: ಸರಕಾರೀ ನೌಕರರು ಬಿಡುವಿನ ವೇಳೆಯ ಸದುಪಯೋಗ ಪಡಿಸಿಕೊಳ್ಳಲಿದ್ದಾರೆ. ಮಕ್ಕಳಿಂದ ಸಂತೋಷ ವೃದ್ಧಿಯಾಗಲಿದೆ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಶುಭ ಕೆಲಸಗಳನ್ನು ಮಾಡಲು ಹೊರಟಾಗ ಕೆಲವೊಂದು ವಿಘ್ನಗಳು ಕಂಡುಬಂದೀತು. ವಿವೇಚನೆಯಿಂದ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಹಿಂದೆ ಕೂಡಿಟ್ಟ ಹಣ ಅಗತ್ಯಕ್ಕೆ ಖರ್ಚಾಗಿ ಹೋದೀತು. ದೇವತಾ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ