ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಮಂಗಳವಾರ, 31 ಜನವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಹೊಸ ಅವಕಾಶಗಳು ಎದುರಾದಾಗ ಅದನ್ನು ಬಳಸಿಕೊಳ್ಳುವುದನ್ನು ಕಲಿತುಕೊಳ್ಳಬೇಕು. ಹಿರಿಯರ ಮನಸ್ಸಿಗೆ ಸಂತೋಷ ಉಂಟು ಮಾಡಲಿದ್ದೀರಿ. ಇಷ್ಟ ಭೋಜನ ಮಾಡುವ ಯೋಗ ನಿಮ್ಮದಾಗಲಿದೆ. ತಾಳ್ಮೆಯಿರಲಿ.

ವೃಷಭ: ಹಠಮಾರಿತನ ಧೋರಣೆ ಬಿಟ್ಟು ಒಳ್ಳೆಯ ವಿಚಾರಕ್ಕೆ ಬಾಗಬೇಕಾಗುತ್ತದೆ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿಯಿರಲಿ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ಚಿಂತೆ ಬೇಡ.

ಮಿಥುನ: ಉದ್ಯೋಗ, ವ್ಯವಹಾರದಲ್ಲಿ ಪ್ರಗತಿ ಕಂಡುಬಂದರೂ ನಿರೀಕ್ಷಿತ ಆದಾಯ ಸಿಗದೇ ಚಿಂತೆಯಾದೀತು. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯಲು ಮನಸ್ಸಾಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.

ಕರ್ಕಟಕ: ಉದ್ಯಮಿಗಳಿಗೆ ಉನ್ನತಿಯ ಅವಕಾಶಗಳಿರಲಿವೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಾಗದು. ಮನೆಯಲ್ಲಿ ಅತಿಥಿ ಸತ್ಕಾರಕ್ಕೆ ತಯಾರಿ ನಡೆಯಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸಲಿದ್ದೀರಿ.

ಸಿಂಹ: ದೈಹಿಕವಾಗಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದರೂ ಮಾನಸಿಕವಾಗಿ ಹಲವು ಚಿಂತೆಗಳು ನಿಮ್ಮನ್ನು ಕಾಡಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಪಡೆಯಲು ದಾರಿ ಕಂಡುಕೊಳ್ಳುವಿರಿ.

ಕನ್ಯಾ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಉನ್ನತಿಯ ಅವಕಾಶ ಬಂದಾಗ ಬಳಸಿಕೊಳ್ಳಿ. ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ಮಹಿಳೆಯರಿಗೆ ಗೃಹಕೃತ್ಯಗಳಿಂದ ಬಿಡುವು ಸಿಗಲಿದೆ.

ತುಲಾ: ಕಾರ್ಯನಿಮಿತ್ತ ಪರವೂರಿಗೆ ಪ್ರಯಾಣ ಮಾಡಬೇಕಾಗುತ್ತದೆ. ಗುರುಹಿರಿಯರೊಂದಿಗೆ ಅನಗತ್ಯ ಸಂಘರ್ಷ ಬೇಡ. ಕ್ರಿಯಾತ್ಮಕ ಕೆಲಸಗಳಲ್ಲಿ ತೊಡಗಿಸಿಕೊಳ್ಳಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿಯಾಗಲಿದೆ.

ವೃಶ್ಚಿಕ: ಪಾಲುದಾರಿಕೆ ವ್ಯವಹಾರದಲ್ಲಿ ಸ್ವಲ್ಪ ಹೆಚ್ಚು ಕಡಿಮೆಯಾದರೂ ತೊಂದರೆ ತಪ್ಪಿದ್ದಲ್ಲ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿದೆ. ಗೃಹ, ವಾಹನಾದಿ ಖರೀದಿ ವಿಚಾರದಲ್ಲಿ ಮುನ್ನಡೆ ಕಂಡುಬರಲಿದೆ.

ಧನು: ಸಾಮಾಜಿಕವಾಗಿ ನಿಮ್ಮ  ಸ್ಥಾನ ಮಾನ ವೃದ್ಧಿಯಾಗಲಿದೆ. ಪರರ ಹಣಕಾಸಿನ ವಿಚಾರದಲ್ಲಿ ಅನಗತ್ಯ ಆಸಕ್ತಿ ಬೇಡ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.

ಮಕರ: ಮನಸ್ಸಿನಲ್ಲಿರುವ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಪ್ರಯತ್ನ ನಡೆಸಲಿದ್ದೀರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಖರ್ಚು ವೆಚ್ಚವಾದೀತು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನ ಕೊಡಬೇಕಾಗುತ್ತದೆ.

ಕುಂಭ: ಮಾತಿನಿಂದಲೇ ಇತರರಿಗೆ ಮೋಡಿ ಮಾಡಲಿದ್ದೀರಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡಲಿದ್ದೀರಿ. ಹಿರಿಯರಿಗೆ ದಾನ ಧರ್ಮಾದಿಗಳಿಂದ ಮನಸ್ಸಿಗೆ ನೆಮ್ಮದಿ ದೊರೆಯಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮೀನ: ಗುರುಹಿರಿಯರ ಆಶೀರ್ವಾದ ಪಡೆದು ಹೊಸ ಕೆಲಸಕ್ಕೆ ಕೈ ಹಾಕಿ. ಮಹಿಳೆಯರಿಗೆ ಅಲಂಕಾರಿಕ ವಸ್ತುಗಳ ಖರೀದಿ ಯೋಗ. ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ಹಣಕಾಸಿನ ವಿಚಾರದಲ್ಲಿ ಆತುರದ ನಿರ್ಧಾರ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ