ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಗುರುವಾರ, 2 ಫೆಬ್ರವರಿ 2023 (08:20 IST)
ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಅದೃಷ್ಟ ಖುಲಾಯಿಸಲಿದೆ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆಯಿರಲಿ. ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಪ್ರಶಂಸೆ ವ್ಯಕ್ತವಾಗಲಿದೆ. ದೇವತಾ ಸನ್ನಿಧಾನಕ್ಕೆ ಭೇಟಿ ನೀಡಲಿದ್ದೀರಿ.

ವೃಷಭ: ಗುರುಹಿರಿಯರ ಆಶೀರ್ವಾದದಿಂದ ಇಂದು ಕೈಗೊಳ್ಳುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಧನ ಲಾಭವಾಗಲಿದೆ. ಸಾಂಸಾರಿಕವಾಗಿ ಸುಖ, ಸಮೃದ್ಧಿಯಿರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ವಿದೇಶಗಳಲ್ಲಿ ಉದ್ಯೋಗದಲ್ಲಿರುವವರಿಗೆ ತವರಿನ ಭೇಟಿ ಯೋಗ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನಕ್ಕೆ ಸಿದ್ಧತೆ ನಡೆಸಲಿದ್ದೀರಿ. ಸಾಲ ಮರುಪಾವತಿಯಾಗಲಿದೆ.

ಕರ್ಕಟಕ: ಎಷ್ಟೇ ಉತ್ಸಾಹದಿಂದ ಕಾರ್ಯಾರಂಭ ಮಾಡಿದರೂ ಅಡೆತಡೆಗಳಿಂದಾಗಿ ಉತ್ಸಾಹ ಕುಗ್ಗೀತು. ಸ್ನೇಹಿತರಿಂದ ಸರಿಯಾದ ಸಲಹೆ ಸಿಗಲಿದೆ. ಪಾಲುದಾರಿಕಾ ವ್ಯವಹಾರದಲ್ಲಿ ಮುನ್ನಡೆ ಕಂಡುಬರುವುದು.

ಸಿಂಹ: ಆಸ್ತಿ ವಿಚಾರದಲ್ಲಿ ಹೆಚ್ಚಿನ ಜವಾಬ್ಧಾರಿ ಹೆಗಲಿಗೇರಲಿದೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣವಿರಲಿದೆ. ಪರೀಕ್ಷೆಗೆ ಸಿದ್ಧತೆ ನಡೆಸಬೇಕಾಗುತ್ತದೆ. ಉತ್ತಮ ವಾಕ್ಚತುರತೆಯಿಂದ ಇತರರ ಮನಗೆಲ್ಲಲಿದ್ದೀರಿ.

ಕನ್ಯಾ: ಉದ್ಯೋಗ, ವ್ಯವಹಾರದಲ್ಲಿ ಕೀರ್ತಿ ಸಂಪಾದಿಸುವ ಯೋಗ. ಕೌಟುಂಬಿಕ ಖರ್ಚು ವೆಚ್ಚಗಳನ್ನು ಸರಿದೂಗಿಸಲು ಹೆಣಗಾಡಲಿದ್ದೀರಿ. ಧನ ಗಳಿಕೆಗೆ ನಾನಾ ಮಾರ್ಗಗಳ ಬಗ್ಗೆ ಚಿಂತನೆ ನಡೆಸಲಿದ್ದೀರಿ. ತಾಳ್ಮೆಯಿರಲಿ.

ತುಲಾ: ಹೊಸದಾಗಿ ಪರಿಚಿತರಾದ ನೆರೆಹೊರೆಯವರಿಂದ ನಿಮ್ಮ ಕೆಲಸ ಕಾರ್ಯಗಳಿಗೆ ನೆರವಾದೀತು. ವ್ಯಾಪಾರಿಗಳಿಗೆ ಅಭಿವೃದ್ಧಿ ಯೋಗ. ಅವಿವಾಹಿತರಿಗೆ ಯೋಗ್ಯ ವೈವಾಹಿಕ ಸಂಬಂಧಗಳು ಕೂಡಿಬರಲಿದೆ.

ವೃಶ್ಚಿಕ: ನಿರೀಕ್ಷಿಸಿದಂತೇ ಇಂದು ನೀವು ಮಾಡುವ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಹಿರಿಯರಿಗೆ ದೇಹಾರೋಗ್ಯದಲ್ಲಿ ಕೊಂಚ ಏರುಪೇರಾಗುವ ಸಾಧ್ಯತೆ.

ಧನು: ಮನಸ್ಸಿನಲ್ಲಿರುವ ಮಾತುಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳಲು ಅವಕಾಶ ಸಿಗಲಿದೆ. ಯಂತ್ರೋಪಕರಣಗಳ ಜೊತೆ ಕೆಲಸ ಮಾಡುವಾಗ ಎಚ್ಚರಿಕೆಯಿರಲಿ. ಧಾರ್ಮಿಕ ಕಾರ್ಯಗಳಿಗೆ ನೇತೃತ್ವ ವಹಿಸಲಿದ್ದೀರಿ.

ಮಕರ: ಸರಕಾರೀ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಕ್ರಿಯಾತ್ಮಕ ಕೆಲಸಗಳಿಗೆ ಮೇಲಧಿಕಾರಿಗಳಿಂದ ಪ್ರಶಂಸೆ ವ್ಯಕ್ತವಾಗಲಿದೆ. ನಿರುದ್ಯೋಗಿಗಳು ತಾತ್ಕಾಲಿಕ ಉದ್ಯೋಗಕ್ಕೆ ತೃಪ್ತಿ ಪಟ್ಟುಕೊಳ್ಳಬೇಕಾಗುತ್ತದೆ.

ಕುಂಭ: ದಾಯಾದಿ ಕಲಹಗಳಿಗೆ ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಇಷ್ಟಮಿತ್ರರೊಂದಿಗೆ ಕಿರು ಪ್ರವಾಸ ಮಾಡುವ ಯೋಗ ನಿಮ್ಮದಾಗಲಿದೆ. ಯೋಗ್ಯ ವಯಸ್ಕರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರಲಿದೆ.

ಮೀನ: ನಿಮ್ಮಲ್ಲಿರುವ ಉಳಿತಾಯದ ಹಣ ಅನಿವಾರ್ಯ ಕಾರಣಗಳಿಗೆ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಕಾರ್ಯರಂಗದಲ್ಲಿ ಅಪವಾದ ಬಾರದಂತೆ ಎಚ್ಚರಿಕೆ ವಹಿಸಿ. ದೇವತಾ ಪ್ರಾರ್ಥನೆ ಮಾಡಿ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ